Site icon Vistara News

ICC World Cup: ವಿಶ್ವ ಕಪ್​ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ; ಭಾರತಕ್ಕೆ ಇಂಗ್ಲೆಂಡ್ ಮೊದಲ​ ಎದುರಾಳಿ

icc world cup 2023 poster

ಬೆಂಗಳೂರು: ಐಸಿಸಿ ಪುರುಷರ ಏಕದಿನ ವಿಶ್ವ ಕಪ್​ (ICC World Cup 2023) ಟೂರ್ನಿಯ ಅಭ್ಯಾಸ ಪಂದ್ಯಗಳು ನಾಳೆಯಿಂದ(ಶುಕ್ರವಾರ) ಆರಂಭಗೊಳ್ಳಲಿದೆ. ರೌಂಡ್​ ರಾಬಿನ್​ ಮಾದರಿಯಲ್ಲಿ ನಡೆಯುವ ಈ ಕೂಟದಲ್ಲಿ ಎಲ್ಲ ತಂಡಗಳು ಮುಖಾಮುಖಿಯಾಗಲಿವೆ. ಸೆಪ್ಟೆಂಬರ್​ 29 ರಿಂದ ಅಕ್ಟೋಬರ್​ 3ರವರೆಗೆ ಒಟ್ಟು 10 ಅಭ್ಯಾಸ ಪಂದ್ಯಗಳು ನಡೆಯಲಿವೆ. ಟೂರ್ನಿಯ ಲೀಗ್​ ಪಂದ್ಯಗಳು ಅಕ್ಟೋಬರ್​ 5ರಿಂದ ಪ್ರಾರಂಭವಾಗಲಿದೆ. ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಮಾಹಿತಿ ಇಂತಿದೆ.

ಶುಕ್ರವಾರ ಒಟ್ಟು ಮೂರು ಅಭ್ಯಾಸ ಪಂದ್ಯಗಳು ನಡೆಯಲಿವೆ. ಎಲ್ಲ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಬಾಂಗ್ಲಾದೇಶ vs ಶ್ರೀಲಂಕಾ, ದಕ್ಷಿಣ ಆಫ್ರಿಕಾ vs ಅಫಘಾನಿಸ್ತಾನ, ಪಾಕಿಸ್ತಾನ vs ನ್ಯೂಜಿಲ್ಯಾಂಡ್​ ತಂಡಗಳ ಮಧ್ಯೆ ಪಂದ್ಯಗಳು ನಡೆಯಲಿವೆ. 

ಭಾರತಕ್ಕೆ ಇಂಗ್ಲೆಂಡ್​ ಎದುರಾಳಿ

ಭಾರತ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯ ಸೆಪ್ಟೆಂಬರ್​ 30 ರಂದು ಗುವಾಹಟಿಯಲ್ಲಿ ನಡೆಯಲಿದೆ. ಭಾರತ ತನ್ನ ಲೀಗ್ ಪಂದ್ಯವನ್ನು ಅಕ್ಟೋಬರ್​ 8ರಂದು ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಚೆನ್ನೈಯಲ್ಲಿ ನಡೆಯಲಿದೆ. ತವರಿನಲ್ಲಿ ಆಸೀಸ್​ ವಿರುದ್ಧ ಏಕದಿನ ಸರಣಿ ಗೆದ್ದಿರುವ ಭಾರತ ಮತ್ತೊಮ್ಮೆ ಆಸೀಸ್​ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ.

ಅಭ್ಯಾಸ ಪಂದ್ಯಗಳ ವೇಳಾಪಟ್ಟಿ

ದಿನಾಂಕಪಂದ್ಯಸ್ಥಳ
ಸೆಪ್ಟೆಂಬರ್​ 29ಬಾಂಗ್ಲಾದೇಶ-ಶ್ರೀಲಂಕಾಗುವಾಹಟಿ
ಸೆಪ್ಟೆಂಬರ್​ 29ಪಾಕಿಸ್ತಾನ-ನ್ಯೂಜಿಲ್ಯಾಂಡ್ಹೈದರಾಬಾದ್
ಸೆಪ್ಟೆಂಬರ್​ 29ಅಫಘಾನಿಸ್ತಾನ-ದಕ್ಷಿಣ ಆಫ್ರಿಕಾತಿರುವನಂತಪುರ
ಸೆಪ್ಟೆಂಬರ್​ 30ಆಸ್ಟ್ರೇಲಿಯಾ-ನೆದರ್ಲೆಂಡ್​ತಿರುವನಂತಪುರ
ಸೆಪ್ಟೆಂಬರ್​ 30ಭಾರತ-ಇಂಗ್ಲೆಂಡ್​ಗುವಾಹಟಿ
ಅಕ್ಟೋಬರ್​ 2ಇಂಗ್ಲೆಂಡ್​-ಬಾಂಗ್ಲಾದೇಶಗುವಾಹಟಿ
ಅಕ್ಟೋಬರ್​ 2ನ್ಯೂಜಿಲ್ಯಾಂಡ್​-ದಕ್ಷಿಣ ಆಫ್ರಿಕಾತಿರುವನಂತಪುರ
ಅಕ್ಟೋಬರ್​ 3ಭಾರತ-ನೆದರ್ಲೆಂಡ್​ತಿರುವನಂತಪುರ
ಅಕ್ಟೋಬರ್​ 3ಅಫಘಾನಿಸ್ತಾನ-ಶ್ರೀಲಂಕಾಗುವಾಹಟಿ
ಅಕ್ಟೋಬರ್​ 3ಪಾಕಿಸ್ತಾನ-ಆಸ್ಟ್ರೇಲಿಯಾಹೈದರಾಬಾದ್

ಉದ್ಘಾಟನ ಪಂದ್ಯದಲ್ಲಿ ಇಂಗ್ಲೆಂಡ್​-ಕಿವೀಸ್​ ಸೆಣಸಾಟ

ವಿಶ್ವ ಕಪ್​ ಟೂರ್ನಿ ಅಕ್ಟೋಬರ್​ 5 ರಿಂದ ಆರಂಭಗೊಂಡು ನವೆಂಬರ್​ 19 ತನಕ ನಡೆಯಲಿದೆ. ಒಟ್ಟು 48 ಪಂದ್ಯಗಳು ನಡೆಯಲಿದ್ದು 10 ತಂಡಗಳು ಸೆಣಸಾಟ ನಡೆಸಲಿವೆ. ದೇಶದ ಪ್ರಮುಖ 10 ತಾಣಗಳಲ್ಲಿ ಈ ಪಂದ್ಯ ನಡೆಯಲಿದೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ನ್ಯೂಜಿಲ್ಯಾಂಡ್​ ತಂಡಗಳು ಮುಖಾಮುಖಿಯಾಗಲಿವೆ.

ಭಾರತಕ್ಕೆ ಪ್ರಯಾಣದ್ದೇ ಚಿಂತೆ

ಟೂರ್ನಿಯ ಆತಿಥೇಯ ತಂಡವಾದ ಕಾರಣ ದೇಶದ ಪ್ರಮುಖ 10 ನಗರಗಲ್ಲಿ ನಡೆಯುವ ಪಂದ್ಯಗಳಲ್ಲಿ ಭಾರತ ಆಡಲಿದೆ. ಈ ವೇಳೆ ಭಾರತ ತನ್ನ ಲೀಗ್​ ಹಂತದ ಪಂದ್ಯಗಳಿಗೆ 8,400 ಕಿ.ಮೀ.ಗಳಷ್ಟು ಸಂಚಾರ ಮಾಡಬೇಕಿದೆ. ಒಂದೊಮ್ಮೆ ಭಾರತ ತಂಡ ಸೆಮಿಫೈನಲ್‌ ಅಥವಾ ಫೈನಲ್‌ ತಲುಪಿದರೆ ಆಗ ಸುಮಾರು 9,700 ಕಿ.ಮೀ. ಪ್ರಯಾಣ ಮಾಡಬೇಕಾಗುತ್ತದೆ. ವೇಳಾಪಟ್ಟಿ ಪ್ರಕಾರ ಭಾರತ ಅತೀ ಹೆಚ್ಚು 9 ನಗರಗಳಲ್ಲಿ ಲೀಗ್‌ ಪಂದ್ಯಗಳನ್ನು ಆಡಲಿರುವ ಏಕೈಕ ತಂಡವಾಗಿದೆ. ಉಳಿದ ತಂಡಗಳು ಒಂದು ತಾಣದಲ್ಲಿ ಗರಿಷ್ಠ 2 ಪಂದ್ಯಗಳನ್ನು ಆಡಲಿವೆ. ಭದ್ರತಾ ಕಾರಣಗಳಿಂದ ಪಾಕಿಸ್ತಾನ(world cup 2023 news Pakistan) ಕೇವಲ 5 ನಗರಗಳಲ್ಲಷ್ಟೇ ಲೀಗ್‌ ಪಂದ್ಯಗಳನ್ನು ಆಡುತ್ತದೆ. ಅಂದರೆ ಪಾಕ್​ 6,849 ಕಿ.ಮೀ. ದೂರ ಸಂಚಾರ ಮಾಡಲಿದೆ. ಒಟ್ಟಾರೆಯಾಗಿ ಭಾರತಕ್ಕೆ ಪಂದ್ಯ ಆಡುವುದಕ್ಕಿಂತ ಪ್ರಯಾಣದ್ದೇ ಹೆಚ್ಚಿನ ಚಿಂತೆಯಾಗಿದೆ.

ಇದನ್ನೂ ಓದಿ ನಾಳೆಯಿಂದ ವಿಶ್ವಕಪ್​ ಅಭ್ಯಾಸ ಪಂದ್ಯ; 7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕಿಸ್ತಾನ ತಂಡ

ಭಾರತ ಲೀಗ್​ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ

ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

ಭಾರತ vs ಅಫಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ

ಭಾರತ vs ಪಾಕಿಸ್ತಾನ- 14 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ

ಭಾರತ vs ನ್ಯೂಜಿಲ್ಯಾಂಡ್​- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ

ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

ಭಾರತ vs ಶ್ರೀಲಂಕಾ- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ

ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಭಾರತ vs ನೆದರ್ಲೆಂಡ್ಸ್​ – 12 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

Exit mobile version