ಸಿಡ್ನಿ: ಭಾರತದಲ್ಲಿ ನಡೆಯುವ ಬಹುನಿರೀಕ್ಷಿತ ಏಕದಿನ ವಿಶ್ವಕಪ್(ICC World Cup) ಟೂರ್ನಿಗೆ 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡ 18 ಸದಸ್ಯರ ಸಂಭಾವ್ಯ ತಂಡವನ್ನು(preliminary World Cup squad) ಪ್ರಕಟಿಸಿದೆ. ಅನುಭವಿ ವೇಗಿ ಪ್ಯಾಟ್ ಕಮಿನ್ಸ್(Pat Cummins) ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ವಿಶ್ವಕಪ್ ಟೂರ್ನಿ ನಡೆಯಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8ರಂದು ಆತಿಥೇಯ ಭಾರತ ವಿರುದ್ಧ ಕಣ್ಣಕಿಳಿಯುವ ಮೂಲಕ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯ ಚೆನ್ನೈಯಲ್ಲಿ ನಡೆಯಲಿದೆ.
ಕ್ರಿಕೆಟ್ ಆಸ್ಟ್ರೇಲಿಯಾ ಸೋಮವಾರ 18 ಸದಸ್ಯರ ಸಂಭಾವ್ಯ ತಂಡವನ್ನು ಪ್ರಕಟಿಸಿದ್ದು ಮುಂದಿನ ದಿನಗಳಲ್ಲಿ ಇದನ್ನು 15ಕ್ಕೆ ಇಳಿಸಲಾಗುವುದು ಎಂದು ತಿಳಿಸಿದೆ. “ಐಸಿಸಿ ನಿಯಮಾವಳಿಗಳ ಅಡಿಯಲ್ಲಿ ತಂಡವನ್ನು ಸೆಪ್ಟೆಂಬರ್ 28ರ ವರೆಗೆ ಅಂತಿಮಗೊಳಿಸುವ ಅವಕಾಶವಿದೆ. ಈ ವೇಳೆ ಅಂತಿಮ 15 ಸದಸ್ಯರ ತಂಡ ಪ್ರಕಟಿಸಲಾಗುತ್ತದೆ” ಎಂದು ಆಸೀಸ್ ತಂಡದ ಕೋಚ್ ತಿಳಿಸಿದ್ದಾರೆ.
ವಿಶ್ವಕಪ್ಗೂ ಮುನ್ನ ಆಸ್ಟ್ರೇಲಿಯಾ ತಂಡ ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಈಗ ಪ್ರಕಟಗೊಂಡ 18 ಸದಸ್ಯರು ಆಡಲಿದ್ದಾರೆ. ಇಲ್ಲಿ ಯಾರು ಉತ್ತಮ ಪ್ರದಾರ್ಶನ ತೋರುತ್ತಾರೊ ಅವರನ್ನು ಅಂತಿಮ ಪಟ್ಟಿಗೆ ಸೇರ್ಪಡಿಸಲಾಗುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ. ಅಚ್ಚರಿ ಎಂದರೆ ಅನುಭವಿ ಆಟಗಾರ ಮಾರ್ನಸ್ ಲಬುಶೇನ್ ಅವರು ಆಯ್ಕೆಯಾಗಿಲ್ಲ.
ಇದನ್ನೂ ಓದಿ ICC World Cup: ಏಕದಿನ ವಿಶ್ವಕಪ್ಗೆ ತಂಡಗಳ ಪ್ರಕಟಕ್ಕೆ ದಿನಾಂಕ ನಿಗದಿ; ಭಾರತಕ್ಕೆ ಗಾಯದ ಚಿಂತೆ
ಸ್ಯದ ಈಗಿನ ಪಟ್ಟಿಯ ಪ್ರಕಾರ ವಾರ್ನರ್ ಮತ್ತು ಟ್ರಾವಿಸ್ ಹೆಡ್ ಆಸೀಸ್ ಇನಿಂಗ್ಸ್ ಆರಂಭಿಸಲಿದ್ದಾರೆ. ಒಂದೊಮ್ಮೆ ಭಾರತ ಮತ್ತು ಕಿವೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ವಾರ್ನರ್ ನಿರೀಕ್ಷಿತ ಪ್ರದರ್ಶನ ತೋರದೇ ಇದಲ್ಲಿ ಅವರ ಸ್ಥಾನದಲ್ಲಿ ಮಿಚೆಲ್ ಮಾರ್ಷ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಅಧಿಕವಾಗಿದೆ.
ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬೋಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಥಾನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ.