ಮುಂಬಯಿ: ಏಷ್ಯಾ ಕಪ್(asia cup 2023) ಹಾಗೂ ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ(ICC World Cup 2023) ಭಾರತ ತಂಡ ಪಾಕಿಸ್ತಾನ ವಿರುದ್ಧ ಗೆಲ್ಲಬೇಕಾದರೆ ಜಸ್‌ಪ್ರೀತ್ ಬುಮ್ರಾ(jasprit bumrah) ಅವರು ತಂಡದಲ್ಲಿರಬೇಕು ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್(Mohammad Kaif) ಅಭಿಪ್ರಾಯಪಟ್ಟಿದ್ದಾರೆ. ಒಂದೊಮ್ಮೆ ಬುಮ್ರಾ ಆಡದಿದ್ದರೆ ವಿಶ್ವಕಪ್ ಗೆಲ್ಲುವುದು ಅಸಾಧ್ಯ ಎಂದಿದ್ದಾರೆ.
‘ಪಿಚ್‌ಸೈಡ್’ ಪುಸ್ತಕ ಬಿಡುಗಡೆ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೇಳೆ ಕೈಫ್ ಅವರು ವಿಶ್ವಕಪ್ನಲ್ಲಿ ಭಾರತದ ಸ್ಪರ್ಧೆಯ ಬಗ್ಗೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.” ಜಸ್‌ಪ್ರೀತ್ ಬುಮ್ರಾ ಅವರು ಐರ್ಲೆಂಡ್ ಸರಣಿಯ ಮೂಲಕ ಭಾರತ ತಂಡಕ್ಕೆ ಕಮ್ಬ್ಯಾಕ್ ಮಾಡಿರುವುದು ಸಂತಸದ ವಿಚಾರ. ಅವರು ಅನುಪಸ್ಥಿತಿಯಲ್ಲಿ ಏಷ್ಯಾ ಕಪ್ ಮತ್ತು ಏಕದಿನ ವಿಶ್ವಕಪ್ ಗೆಲ್ಲುವುದು ಕಷ್ಟ ಸಾಧ್ಯ. ಇದಕ್ಕೆ ಕಳೆದ ವರ್ಷದ ಟಿ20 ವಿಶ್ವಕಪ್ ಮತ್ತು ಏಷ್ಯಾ ಕಪ್ ಟೂರ್ನಿಯ ಫಲಿತಾಂಶವೇ ಉತ್ತಮ ನಿದರ್ಶನ” ಎಂದು ಕೈಫ್ ಹೇಳಿದ್ದಾರೆ.
ಬುಮ್ರಾ ಫಿಟ್ನೆಸ್ ಮುಖ್ಯ
ಬೆನ್ನು ನೋವಿನ ಗಾಯದಿಂದಾಗಿ ಕಳೆದ 11 ತಿಂಗಳಿಂದ ಟೀಮ್ ಇಂಡಿಯಾದಿಂದ ಬೇರ್ಪಟ್ಟಿದ್ದ ಜಸ್‌ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಗೆ ನಾಯಕನಾಗಿ ಪುನರಾಗಮನ ಮಾಡಿದ್ದಾರೆ. ಆದರೆ ಅವರ ಫಿಟ್ನೆಸ್ ಹೇಗಿರಲಿದೆ ಎನ್ನುವುದು ಮುಖ್ಯ. ಹಿಂದಿನಂತೆ ಫಿಟ್ ಆಗದಿದ್ದರೆ ಭಾರತ ತಂಡಕ್ಕೆ ಹಿನ್ನಡೆಯಾಗುವುದು ಖಚಿತ. ಅವರ ಪ್ರದರ್ಶನದ ವೇಲೆ ಭಾರತ ತಂಡದ ವಿಶ್ವಕಪ್ ಭವಿಷ್ಯ ಅಡಗಿದೆ. ಏಕೆಂದರೆ ಬುಮ್ರಾ ಅವರಿಗೆ ಪರ್ಯಾಯ ಬೌಲರ್ ಇಲ್ಲದೇ ಇರುವುದು ಇದಕ್ಕೆ ಕಾರಣ ಎಂದು ಕೈಫ್ ಹೇಳಿದ್ದಾರೆ.
ಇದನ್ನೂ ಓದಿ ICC World Cup 2023: ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟಕ್ಕೆ ದಿನಾಂಕ ನಿಗದಿ
ತೀವ್ರ ತರದ ಬೆನ್ನುನೋವಿನಿಂದ ಬಳಲುತ್ತಿದ್ದ ಬುಮ್ರಾ ಅವರು ವರ್ಷಾರಂಭದಲ್ಲಿ ನ್ಯೂಜಿಲ್ಯಾಂಡ್ನ ಕ್ರೈಸ್ಟ್‌ಚರ್ಚ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯದ ಭಾರತ ಪ್ರವಾಸದಲ್ಲಿ 29 ರ ಹರೆಯದ ವೇಗಿ ಎರಡು ಟಿ20 ಪಂದ್ಯಗಳನ್ನು ಆಡಿದ ನಂತರ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಏಷ್ಯಾ ಕಪ್, ಟಿ20 ವಿಶ್ವಕಪ್ ಐಪಿಎಲ್ ಸೇರಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕೂಡ ಆಡಲು ಸಾಧ್ಯವಾಗಿರಲಿಲ್ಲ.
ಐರ್ಲೆಂಡ್ ಸರಣಿಗೆ ಭಾರತ ತಂಡ
ಜಸ್‌ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.