ಮುಂಬಯಿ: ಏಕದಿನ ವಿಶ್ವಕಪ್ ಟೂರ್ನಿ(icc world cup 2023) ಆರಂಭಕ್ಕೆ ಇನ್ನು ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿವೆ. ಇದಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್(KL Rahul), ‘ಟಿಕೆಟ್‌ಗಾಗಿ ನನಗೆ ಸಂದೇಶ ಕಳುಹಿಸುವ ಬಗ್ಗೆ ನೀವು ಯೋಚಿಸುತ್ತಿದ್ದರೆ, ಇದನ್ನು ದಯವಿಟ್ಟು ಮಾಡಬೇಡಿ’ ಎಂದು ಆಪ್ತರಿಗೆ ಸ್ಪಷ್ಟ ಸಂದೇಶವೊಂದನ್ನು ನೀಡಿದ್ದಾರೆ.
ವಿಶ್ವಕಪ್ ತಯಾರಿ ಕುರಿತ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ರಾಹುಲ್ ಅವರು ಈ ಮಾತನ್ನು ಹೇಳಿದ್ದಾರೆ. “ಪಂದ್ಯದ ಟಿಕೆಟ್‌ಗಾಗಿ ನನ್ನ ಆಪ್ತ ಮೂಲದ ಯಾರಾದರೂ ನನಗೆ ಸಂದೇಶ ಕಳುಹಿಸಿದರೆ, ನಾನು ಪ್ರತಿಕ್ರಿಯಿಸಲು ಹೋಗುವುದಿಲ್ಲ. ಇದನ್ನು ನೀವು ಸೊಕ್ಕು ಅಥವಾ ಅಸಭ್ಯ ವರ್ತನೆ ಎಂದು ತಿಳಿಯಬೇಡಿ, ನಾನು ಈ ಪ್ರಕ್ರಿಯೆಯಿಂದ ದೂರವಿದ್ದು ಆಟದ ಮೇಲೆ ಕೇಂದ್ರೀಕರಿಸಲು ಬಯಸುತ್ತೇನೆ” ಎಂದು ರಾಹುಲ್ ನಗುತ್ತಲೇ ತಮ್ಮ ಆಪ್ತರಿಗೆ ಟಿಕೆಟ್ ವಿಚಾರದಲ್ಲಿ ತಮ್ಮ ನಿಲುವನ್ನು ತಿಳಿಸಿದ್ದಾರೆ.
ವಿಶ್ವಕಪ್ಗೂ ಮುನ್ನ ಉತ್ತಮ ಫಾರ್ಮ್ ಕಂಡುಕೊಂಡ ರಾಹುಲ್
ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ವಿಶ್ವಕಪ್ಗೆ ತಂಡ ಪ್ರಕಟಿಸುವ ವೇಳೆ ಸುದ್ದಿಗೋಷ್ಠಿಯಲ್ಲಿ “ರಾಹುಲ್ ಉಪಸ್ಥಿತಿ ವಿಶ್ವಕಪ್ನಲ್ಲಿ ಭಾರತ ತಂಡಕ್ಕೆ ಅತ್ಯುತ್ತಮ ಸಮತೋಲನ ಒದಗಿಸಲಿದೆ” ಎಂದು ಹೇಳಿದ್ದರು. ಅಲ್ಲದೆ ಅವರು ಮೊದಲ ಕೀಪಿಂಗ್ ಆಯ್ಕೆ ಎಂದು ಕೂಡ ಹೇಳಿದ್ದರು. ಸದ್ಯ ರಾಹುಲ್ ಉತ್ತಮ ಫಾರ್ಮ್ನಲ್ಲಿದ್ದು ಆಸೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಕ್ಕೆ ನಾಯಕನಾಗಿದ್ದಾರೆ. ಈಗಾಗಲೇ ಒಂದು ಪಂದ್ಯವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಏಷ್ಯಾಕಪ್ನಲ್ಲಿ ಕಮ್ಬ್ಯಾಕ್ ಮಾಡಿದ ಪಂದ್ಯದಲ್ಲೇ ಶತಕ ಬಾರಿಸಿ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಿದ್ದರು.
ವಿಶ್ವಕಪ್ನಲ್ಲಿ 4ನೇ ಕ್ರಮಾಂಕ
ಸದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಕ್ರಮಾಂಕದಲ್ಲಿ ಆಡಬಲ್ಲ ಸಾಮರ್ಥ್ಯ ಇರುವುದು ಕೂಡ ರಾಹುಲ್ ಅವರಲ್ಲಿ ಮಾತ್ರ. ಈ ಮಾತನ್ನು ಈಗಾಗಲೇ ಟೀಮ್ ಇಂಡಿಯಾದ ಅನೇಕ ಮಾಜಿ ಆಟಗಾರರು ಸೇರಿ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಕೂಡ ಹೇಳಿದ್ದಾರೆ. ಹೀಗಾಗಿ ರಾಹುಲ್ ವಿಶ್ವಕಪ್ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡುವುದು ಬಹುತೇಕ ಖತಿತ ಎನ್ನುವಂತಿದೆ. ಒಂದೊಮ್ಮೆ ಅಯ್ಯರ್ ಫಿಟ್ ಆಗಿ ಈ ಸ್ಥಾನದಲ್ಲಿ ಆಡಿದರೆ ಆಗ ರಾಹುಲ್ 5ನೇ ಸ್ಥಾನದಲ್ಲಿ ಬ್ಯಾಟ್ ಬೀಸುವ ಸಾಧ್ಯತೆಯೂ ಇದೆ. ಭಾರತ ತಂಡ ವಿಶ್ವಕಪ್ನಲ್ಲಿ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಚೆನ್ನೈಯಲ್ಲಿ ನಡೆಯಲಿದೆ.
ಇದನ್ನೂ ಓದಿ KL Rahul : ಪಾಕ್ ವಿರುದ್ಧ ಏಷ್ಯಾ ಕಪ್ನಲ್ಲಿ ಶತಕ ಬಾರಿಸಿದ ಆರು ಬ್ಯಾಟರ್ಗಳು ಇವರು
ಐಪಿಎಲ್ ವೇಳೆ ಗಾಯಗೊಂಡಿದ್ದ ರಾಹುಲ್
31 ವರ್ಷದ ರಾಹುಲ್ ಮೇ 1ರಂದು ನಡೆದ ಆರ್ಸಿಬಿ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ರಾಹುಲ್ ಅವರು ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿ ಮೈದಾನದಲ್ಲೇ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಟಗಾರರ ಸಹಾಯದಿಂದ ಮೈದಾನದಿಂದ ಹೊರಕ್ಕೆ ಕೊಂಡೊಯ್ಯಲಾಗಿತ್ತು. ಗಾಯದ ಪ್ರಮಾಣ ಗಂಭಿರವಾದ ಪರಿಣಾಮ ಅವರಿಗೆ ಲಂಡನ್ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೀಗಾಗಿ ಅವರು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಿಂದ ಹೊರಗುಳಿದಿದ್ದರು.