Site icon Vistara News

INDVAUS : ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಮಿತ್​, ಭಾರತದಿಂದ ಬೌಲಿಂಗ್​

In the fourth match, Australia captain Smith won the toss and bowled from India

#image_title

ಅಹಮದಾಬಾದ್​: ಬಾರ್ಡರ್- ಗವಾಸ್ಕರ್ ಟ್ರೋಫಿಯ (INDvsAUS) ನಾಲ್ಕನೇ ಹಾಗೂ ಕೊನೇ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಮ್​​ನಲ್ಲಿ ಆರಂಭಗೊಂಡಿದ್ದು, ಟಾಸ್​ ಗೆದ್ದಿರುವ ಪ್ರವಾಸಿ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್​ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡದಿ್ದಾರೆ. ರೋಹಿತ್​ ಶರ್ಮ ನೇತೃತ್ವದ ಭಾರತ ತಂಡ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಅರ್ಹತೆ ಪಡೆದುಕೊಳ್ಳಲು ಗೆಲ್ಲಲೇ ಬೇಕಿದೆ. ಸರಣಿಯಲ್ಲಿ 1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾ ಗೆದ್ದು ಸಮಬಲದ ಸಾಧನೆ ಮಾಡಲು ಹೊಂಚು ಹಾಕಿದೆ.

ಪಂದ್ಯ ವೀಕ್ಷಣೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರುತ್ತಾರೆ. ಹೀಗಾಗಿ ಪಂದ್ಯಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಅದೇ ರೀತಿಯ ಸ್ಟೇಡಿಯಮ್​ನಲ್ಲಿ ಭದ್ರತೆಯೂ ಹೆಚ್ಚಿದೆ.

ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವಿಶ್ರಾಂತಿಯಲ್ಲಿದ್ದ ಮೊಹಮ್ಮದ್ ಶಮಿ ತಂಡಕ್ಕೆ ಮರಳಿದ್ದು, ಮೊಹಮ್ಮದ್ ಸಿರಾಜ್​ಗೆ ರೆಸ್ಟ್​ ಕೊಡಲಾಗಿದೆ. ರಾಹುಲ್​ಗೆ ಈ ಪಂದ್ಯದಲ್ಲೂ ಅವಕಾಶ ನೀಡಿಲ್ಲ. ಗಿಲ್ ಹಾಗೂ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಇದನ್ನೂ ಓದಿ : IND VS AUS: ಕ್ರಿಕೆಟ್​ ಕಾಮೆಂಟರಿ ಮಾಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ನಾಲ್ಕನೇ ಟೆಸ್ಟ್​ನಿಂದಲೂ ಹೊರಗುಳಿದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್​ ತಂಡದ ನೇತೃತ್ವ ವಹಿಸಿಕೊಂಡಿದ್ದಾರೆ. ಟಾಡ್ ಮರ್ಫಿ, ನೇಥನ್ ಲಿಯಾನ್ ಹಾಗೂ ಮ್ಯಾಟ್ ಕುನೆಮನ್ ಆ ತಂಡದ ಪ್ರಮುಖ ಸ್ಪಿನ್ ಅಸ್ತ್ರವಾಗಿದೆ.

ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಷೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್‌ಕಂಬ್, ಕ್ಯಾಮರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಟ್ ಕುನೆಮನ್.

Exit mobile version