Site icon Vistara News

IND-PAK | ರಾಷ್ಟ್ರಗೀತೆ ವೇಳೆ ಭಾವುಕರಾದ ರೋಹಿತ್‌, ಕಣ್ಣಾಲಿಗಳಲ್ಲಿ ಜಿನುಗಿದ ನೀರು

rohit

ಮೆಲ್ಬೋರ್ನ್‌: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (IND-PAK) ತಂಡದ ವಿರುದ್ಧದ ಟಿ೨೦ ವಿಶ್ವ ಕಪ್‌ನ ಪಂದ್ಯದಲ್ಲಿ ಭಾರತ ತಂಡದ ನಾಯಕ ಟಾಸ್ ಗೆದ್ದಿದ್ದು, ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಗುಂಪು ೨ರಲ್ಲಿರುವ ಭಾರತ ಹಾಗೂ ಪಾಕಿಸ್ತಾನ ತಂಡಕ್ಕೆ ಇದು ಸೂಪರ್‌-೧೨ ಹಂತದ ಮೊದಲ ಪಂದ್ಯವಾಗಿದೆ. ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಭಾವುಕರಾಗಿ ಕಣ್ಣೀರು ಸುರಿಸಿದ್ದಾರೆ. ಈ ವಿಡಿಯೊ ವೈರಲ್‌ ಆಗಿದೆ.

ಭಾರತ ಕ್ರಿಕೆಟ್‌ ತಂಡವನ್ನು ಮಹತ್ವದ ಟೂರ್ನಿಯಲ್ಲಿ ಇದೇ ಮೊದಲ ಬಾರಿ ಮುನ್ನಡೆಸುತ್ತಿರುವ ರೋಹಿತ್‌, ರಾಷ್ಟ್ರಗೀತೆ ವೇಳೆ ಭಾವುಕರಾದರು. ಅದರಂತೆ ರಾಷ್ಟ್ರಗೀತೆಯನ್ನು ಹಾಡಿ ಕೊನೆಗೆ ದೇಶವನ್ನು ಮುನ್ನಡೆಸುತ್ತಿರುವ ಹೆಮ್ಮೆಯಿಂದ ಕಣ್ಣೀರು ಸುರಿಸಿದರು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊವನ್ನು ಕಂಡ ಅಭಿಮಾನಿಗಳು ನಿಜವಾಗಿಯೂ ನಿಮ್ಮ ದೇಶಪ್ರೇಮ ಮೆಚ್ಚಲೇ ಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ತಂಡಗಳು

ಭಾರತ : ರೋಹಿತ್ ಶರ್ಮಾ (ನಾಯಕ), ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ , ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ಅರ್ಶ್‌ದೀಪ್ ಸಿಂಗ್.

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್ (ನಾಯಕ), ಶಾನ್ ಮಸೂದ್, ಹೈದರ್ ಅಲಿ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ನಸೀಮ್ ಶಾ, ಶಾಹಿನ್ ಶಾ ಅಫ್ರಿದಿ, ಹ್ಯಾರಿಸ್ ರವೂಫ್‌.

ಇದನ್ನೂ ಓದಿ | IND vs PAK | ಪಾಕ್‌ ವಿರುದ್ಧದ ಹಣಾಹಣಿಯಲ್ಲಿ ಟಾಸ್‌ ಗೆದ್ದ ಭಾರತ ತಂಡದಿಂದ ಫೀಲ್ಡಿಂಗ್‌ ಆಯ್ಕೆ

Exit mobile version