ನವದೆಹಲಿ: ಆಸ್ಟ್ರೇಲಿಯಾ(IND VA AUS) ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ(team india) ಸಿಹಿ ಸುದ್ದಿಯೊಂದು ದೊರೆತಿದೆ. ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(shreyas iyer) ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ವಿಚಾರವನ್ನು ಬಿಸಿಸಿಐ(BCCI) ಮಂಗಳವಾರ(ಫೆ.14) ಖಚಿತಪಡಿಸಿದೆ.
‘ಟೀಮ್ ಇಂಡಿಯಾದ ಆಟಗಾರ ಶ್ರೇಯಸ್ ಅಯ್ಯರ್ ಅವರು ಬೆನ್ನುನೋವಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅವರನ್ನು ಬಾರ್ಡರ್-ಗವಾಸ್ಕರ್ ಟ್ರೋಫಿಯ ದ್ವಿತೀಯ ಪಂದ್ಯಕ್ಕೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ’ ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ರೇಯಸ್ ಅಯ್ಯರ್ ಅವರ ಆಗಮನದಿಂದ ಭಾರತ ಮಧ್ಯಮ ಕ್ರಮಾಂಕ ಇನ್ನಷ್ಟೂ ಬಲಗೊಂಡಂತಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯ ಫೆ. 17 ರಿಂದ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿದೆ. ಒಂದೊಮ್ಮೆ ದ್ವಿತೀಯ ಪಂದ್ಯದಲ್ಲಿ ಅಯ್ಯರ್ಗೆ ಆಡುವ ಅವಕಾಶ ಸಿಕ್ಕರೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆ ಇದೆ.
ಇದನ್ನೂ ಓದಿJasprit Bumrah: ಏಕದಿನ ಸರಣಿಯಿಂದಲೂ ಹೊರಬಿದ್ದ ಜಸ್ಪ್ರೀತ್ ಬುಮ್ರಾ!
ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.