ಸಿಡ್ನಿ: ಭಾರತ(IND VS AUS) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ 16 ಸದಸ್ಯರ ಆಸ್ಟ್ರೇಲಿಯಾ ತಂಡ ಪ್ರಕಟಗೊಂಡಿದೆ. ಗಾಯದಿಂದ ಚೇತರಿಕೆ ಕಂಡ ಆಲ್ ರೌಂಡರ್ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಿಚೆಲ್ ಮಾರ್ಶ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.
ಟಿ20 ವಿಶ್ವ ಕಪ್ ಬಳಿಕ ಮಿಚೆಲ್ ಮಾರ್ಶ್, ರಿಚರ್ಡ್ಸನ್ ಮತ್ತು ಮಾಕ್ಸ್ವೆಲ್ ಗಾಯದ ಕಾರಣದಿಂದ ಹಲವು ಟೂರ್ನಿಗಳಿಂದ ತಂಡದಿಂದ ಹೊರಗುಳಿದಿದ್ದರು. ಇದೀಗ ಭಾರತ ವಿರುದ್ಧದ ಏಕದಿನ ಸರಣಿ ಮೂಲಕ ದೀರ್ಘಕಾಲದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.
ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯಗೊಂಡ ಜೋಶ್ ಹ್ಯಾಜಲ್ವುಡ್ ಇನ್ನೂ ಸಂಪೂರ್ಣವಾಗಿ ಚೇತರಿಕೆ ಕಾಣದ ಹಿನ್ನೆಲೆ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ. ಆದರೆ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡು ತವರಿಗೆ ಮರಳಿರುವ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಏಕದಿನ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕ ದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 17ಕ್ಕೆ ನಡೆಯಲಿದೆ. ದ್ವಿತೀಯ ಪಂದ್ಯ ಮಾರ್ಚ್ 19, ಅಂತಿಮ ಪಂದ್ಯ ಮಾರ್ಚ್ 22ಕ್ಕೆ ನಡೆಯಲಿದೆ. ಈ ಸರಣಿಯ ಪಂದ್ಯಗಳು ಮುಂಬೈ, ವಿಶಾಖಪಟ್ಟಣಂ ಮತ್ತು ಚೆನ್ನೈನಲ್ಲಿ ನಡೆಯಲಿದೆ.
ಇದನ್ನೂ ಓದಿ IND VS AUS: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ
ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಶೇನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಶ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಜೇ ರಿಚರ್ಡ್ ಸನ್, ಆ್ಯಡಂ ಝಂಪಾ, ಕ್ಯಾಮರೂನ್ ಗ್ರೀನ್ , ಆಷ್ಟನ್ ಅಗರ್, ಸೀನ್ ಅಬಾಟ್.