ನವದೆಹಲಿ: ಈಗಾಗಲೇ ಭಾರತ(IND VS AUS) ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಎರಡೂ ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ ಮೂರನೇ ಪಂದ್ಯವನ್ನಾಡು ಸಜ್ಜಾಗಿದೆ. ಭಾರತ ಮತ್ತು ಆಸೀಸ್ ವಿರುದ್ಧದ 3ನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಇಂದೋರ್ನಲ್ಲಿ ಆರಂಭವಾಗಲಿದೆ. ಆಸೀಸ್ ಈ ಪಂದ್ಯದಲ್ಲಿ ಗೆಲ್ಲಲೇ ಬೇಕೆಂಬ ಪಣ ತೊಟ್ಟಂತೆ ಕಾಣುತ್ತಿದೆ.
ಹೌದು, ಭಾರತೀಯ ಆಟಗಾರರು ದಿಲ್ಲಿ ಟೆಸ್ಟ್ ಮುಗಿದ ಬಳಿಕ ತಮ್ಮ ಮನೆಗೆ ತೆರಳಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಆದರೆ ಆಸೀಸ್ ಆಟಗಾರರು ಮಾತ್ರ ಅರುಣ್ ಜೇಟ್ಲಿ ಮೈದಾನದಲ್ಲೇ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ದಿನಕ್ಕೆ 4 ರಿಂದ 5 ಗಂಟೆಗಳ ಕಾಲ ಅಭ್ಯಾಸ ಮಾಡುವ ಮೂಲಕ ಭಾರತವನ್ನು ಮೂರನೇ ಟೆಸ್ಟ್ನಲ್ಲಿ ಮಣಿಸುವ ಯೋಜನೆಯಲ್ಲಿದ್ದಾರೆ.
ಮೂರನೇ ಟೆಸ್ಟ್ ಪಂದ್ಯವನ್ನಾಡಲು ಆಸ್ಟ್ರೇಲಿಯಾ ಭಾನುವಾರ ದೆಹಲಿಯಿಂದ ಇಂದೋರ್ಗೆ ಪ್ರಯಾಣಿಸಲಿದೆ. ಅದಕ್ಕೂ ಮುನ್ನ ದೆಹಲಿಯ ಸ್ಪಿನ್ ಪಿಚ್‌ಗನಲ್ಲಿ ಆಸೀಸ್ ಆಟಗಾರರು ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ಈ ಮೂಲಕ ರವೀಂದ್ರ ಜಡೇಜಾ ಮತ್ತು ಆರ್.ಅಶ್ವಿನ್ ದಾಳಿಯನ್ನು ಸಮರ್ಥವಾಗಿ ಎದರಿಸಲು ಸಜ್ಜಾಗುತ್ತಿದ್ದಾರೆ.
ಇದನ್ನೂ ಓದಿ IND VS AUS: ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದ ಪ್ಯಾಟ್ ಕಮಿನ್ಸ್; ಸ್ಟೀವನ್ ಸ್ಮಿತ್ಗೆ ನಾಯಕತ್ವ
ಮೂರನೇ ಟೆಸ್ಟ್ ಪಂದ್ಯದಲ್ಲಿ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಮತ್ತು ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಕಣಕ್ಕಿಳಿಯುವುದು ಖಚಿತವಾಗಿದೆ.