IND VS AUS: ಟಾಸ್​ ಗೆದ್ದ ಆಸ್ಟ್ರೇಲಿಯಾ; ಭಾರತಕ್ಕೆ ಬ್ಯಾಟಿಂಗ್​ ಆಹ್ವಾನ - Vistara News

ಕ್ರಿಕೆಟ್

IND VS AUS: ಟಾಸ್​ ಗೆದ್ದ ಆಸ್ಟ್ರೇಲಿಯಾ; ಭಾರತಕ್ಕೆ ಬ್ಯಾಟಿಂಗ್​ ಆಹ್ವಾನ

ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್​ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್​ ನಡೆಸುವ ನಿರ್ಧಾರ ಕೈಗೊಂಡಿದೆ.

VISTARANEWS.COM


on

IND VS AUS: Australia win the toss; Invitation to bat for India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶಾಖಪಟ್ಟಣ: ಭಾರತ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್​ ಗೆದ್ದ ಆಸ್ಟ್ರೇಲಿಯಾದ ನಾಯಕ ಸ್ಟೀವನ್​ ಸ್ಮಿತ್​ ಬೌಲಿಂಗ್​ ಆಯ್ದುಕೊಂಡಿದ್ದಾರೆ. ಭಾರತ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ತಂಡದ ಖಾಯಂ ನಾಯಕ ರೋಹಿತ್​ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮತ್ತೆ ನಾಯಕತ್ವ ವಹಿಸಿಕೊಂಡರು. ರೋಹಿತ್​ ಆಮಗನದಿಂದ ಇಶಾನ್‌ ಕಿಶನ್‌ ಜಾಗ ಬಿಡಬೇಕಾಯಿತು. ಶಾರ್ದೂಲ್​ ಬದಲು ಅಕ್ಷರ್​ ಪಟೇಲ್​​ ಈ ಪಂದ್ಯದಲ್ಲಿ ಅವಕಾಶ ಪಡೆದರು.

ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಭಾರತ ಈ ಪಂದ್ಯದಲ್ಲಿಯೂ ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳುವ ಯೋಜನೆಯಲ್ಲಿದೆ. ಅತ್ತ ಸ್ಮಿತ್​ ಪಡೆ ಹೇಗಾದರೂ ಮಾಡಿ ಈ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಜೀವಂತವಿರಿಸಬೇಕು ಎಂದು ಪಣ ತೊಟ್ಟಿದೆ. ಹೀಗಾಗಿ ಈ ಮುಖಾಮುಖಿ ಹೈ ವೋಲ್ಟೇಜ್​​ನಿಂದ ಕೂಡಿರುವ ಸಾಧ್ಯತೆ ಇದೆ.

ವಿಶಾಖಪಟ್ಟಣದ ವೈ.ಎಸ್.ರಾಜಶೇಖರ ರೆಡ್ಡಿ ಕ್ರಿಕೆಟ್​ ಸ್ಟೇಡಿಯಂನ(Dr. Y.S. Rajasekhara Reddy Cricket Stadium) ಪಿಚ್​ ಬ್ಯಾಟಿಂಗ್​ ಮತ್ತು ಬೌಲಿಂಗ್​ಗೆ ಸಮಾನವಾಗಿ ನೆರವು ನೀಡಲಿದೆ. ಬೌಲಿಂಗ್​ನಲ್ಲಿ ಇಲ್ಲಿ ಸ್ಪಿನ್​ ಹೆಚ್ಚು ಪರಿಣಾಮಕಾರಿಯಾಗಲಿದೆ. 2019ರ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿ ಏಕದಿನ ಪಂದ್ಯ ನಡೆಯುತ್ತಿದೆ.

ಉಭಯ ತಂಡಗಳು

ಭಾರತ: ಶುಭಮನ್ ಗಿಲ್, ರೋಹಿತ್​ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್ (ವಿಕೆಟ್​ ಕೀಪರ್​), ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​, ಕುಲ್​ದೀಪ್​ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯಕ್ಕೆ ಕ್ಷಣಗಣನೆ

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್​, ಸ್ಟೀವನ್​ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಅಲೆಕ್ಸ್​ ಕ್ಯಾರಿ (ವಿಕೆಟ್​ ಕೀಪರ್​), ಕ್ಯಾಮೆರೂನ್ ಗ್ರೀನ್, ನಥಾನ್​ ಎಲ್ಲಿಸ್​, ಮಾರ್ಕಸ್ ಸ್ಟೋಯಿನಿಸ್​, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆ್ಯಂಡ ಜಂಪಾ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

T20 World Cup 2024: ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಇದೇ ಜೂನ್​ 1 ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೂ ಮುನ್ನವೇ ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಕ್ರಿಕೆಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಡಿಸ್ನಿ + ಹಾಟ್‌ಸ್ಟಾರ್ ಬುಧವಾರ ಘೋಷಿಸಿದೆ.

ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಸ್ನಿ+ ಹಾಟ್‌ಸ್ಟಾರ್ ಇಂಡಿಯಾದ ಮುಖ್ಯಸ್ಥ ಸಜಿತ್ ಶಿವಾನಂದನ್, “ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ಅನ್ನು ಮೊಬೈಲ್‌ನಲ್ಲಿ ಉಚಿತವಾಗಿ ನೀಡುವ ಮೂಲಕ, ನಾವು ಕ್ರಿಕೆಟ್ ಆಟವನ್ನು ಬೆಳೆಸುವ, ದೇಶಾದ್ಯಂತ ಹೆಚ್ಚಿನ ಪ್ರೇಕ್ಷಕರನ್ನು ತಲುಪುವ ಗುರಿಯನ್ನು ಹೊಂದಿದ್ದೇವೆ” ಎಂದರು.

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಸಮಯದಲ್ಲಿ, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್‌ನಲ್ಲಿ ಉಚಿತವಾಗಿ ಸ್ಟ್ರೀಮ್ ಮಾಡಲಾಯಿತು. ಇದು ಏಕಕಾಲದಲ್ಲಿ ಅತ್ಯಧಿಕ ವೀಕ್ಷಣೆ ಕಂಡ 5 ಬಾರಿಯ ದಾಖಲೆಗಳನ್ನು ಮುರಿದಿತ್ತು. ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ನಲ್ಲಿ ಪಂದ್ಯ ಏಕಕಾಲಕ್ಕೆ 5.9 ಕೋಟಿ ವೀಕ್ಷಣೆ ಕಂಡಿತ್ತು. ಈ ದಾಖಲೆ ಟಿ20 ವಿಶ್ವಕಪ್​ನಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಶಿವಾನಂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಕ್ರೀಡೆ

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

IPL 2024: ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.

VISTARANEWS.COM


on

IPL 2024
Koo

ನವದೆಹಲಿ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಬಿರುಸಿನ ಬ್ಯಾಟಿಂಗ್​ ಮೂಲಕ ಸಂಚಲನ ಮೂಡಿಸಿರುವ ಆಸ್ಟ್ರೇಲಿಯಾದ ಬ್ಯಾಟರ್​, ಡೆಲ್ಲಿ(Delhi Capitals) ತಂಡದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(Jake Fraser-McGurk) ಐಪಿಎಲ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.

ರಾಜಸ್ಥಾನ್​ ರಾಯಲ್ಸ್​ ಎದುರಿನ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಕೇವಲ 19 ಎಸೆತಗಳಿಂದ ಅರ್ಧತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆದ ಎದುರಿಸಿ ಅತ್ಯಧಿಕ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ಬರೆದರು. 3 ಬಾರಿ ಮ್ಯಾಕ್‌ಗುರ್ಕ್ ಈ ಸಾಧನೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್​ 2 ಬಾರಿ ಈ ಸಾಧನೆ ಮಾಡಿದ್ದಾರೆ. ಕಳೆದ ಮುಂಬೈ ಇಂಡಿಯನ್ಸ್​ ಮತ್ತು ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ 15 ಎಸೆತಗಳಿಂದ ಅರ್ಧಶತಕ ಬಾರಿಸಿದ್ದರು.

20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರು


ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್- 3

ಯಶಸ್ವಿ ಜೈಸ್ವಾಲ್​-2

ನಿಕೋಲಸ್​ ಪೂರನ್​-2

ಇಶಾನ್​ ಕಿಶನ್​-2

ಸುನೀಲ್​ ನರೈನ್​-2

ಕೈರನ್​ ಪೊಲಾರ್ಡ್​-2

ಟ್ರಾವಿಸ್​ ಹೆಡ್​-2​

ಕೆ.ಎಲ್​ ರಾಹುಲ್​-2

ಅರುಣ್​ ಜೇಟ್ಲಿ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

ಸಂಜು ಸ್ಯಾಮ್ಸನ್​ ಕ್ರೀಸ್​ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್​ ಸೋಲಿಗೆ ಸಿಲುಕಿತು. ಕುಲ್​ದೀಪ್​​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್​ ಹಿಡಿದ ಸೂಪರ್​ ಕ್ಯಾಚ್​ಗೆ ವಿಕೆಟ್​ ಕೈಚೆಲ್ಲಿದರು.

Continue Reading

ಕ್ರೀಡೆ

Shakib Al Hasan: ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಥಳಿಸಲು ಮುಂದಾದ ಶಕಿಬ್; ವಿಡಿಯೊ ವೈರಲ್​

Shakib Al Hasan: ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್ ಕುತ್ತಿಗೆಗೆ ಕೈಹಾಕಿ ಹೊಡೆಯಲು ಮುಂದಾಗಿದ್ದಾರೆ. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

VISTARANEWS.COM


on

Shakib Al Hasan
Koo

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌(Shakib Al Hasan) ತಾಳ್ಮೆ ಕಳೆದುಕೊಂಡು, ಅಂಪೈರ್​ಗಳ ಜತೆ ಮತ್ತು ಅಭಿಮಾನಿಗಳ ನಡುವೆ ಈಗಾಗಲೇ ಹಲವು ಬಾರಿ ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಶಕಿಬ್​ ಥಳಿಸಲು ಮುಂದಾಗಿದ್ದಾರೆ. ಈ ವಿಡಿಯೊ ವೈರಲ್(Video Viral)​ ಆಗಿದ್ದು ಶಕಿಬ್​​ ವರ್ತನೆ ಬಗ್ಗೆ ಅನೇಕ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಕಣ್ಣಿನ ದೃಷ್ಟಿ ಸಮಸ್ಯೆಗೆ ಒಳಗಾಗಿದ್ದ ಶಕೀಬ್​ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಹುದಿನಗಳ ವಿಶ್ರಾಂತಿ ಪಡೆದಿದ್ದರು. ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಆಡುವ ಸಲುವಾಗಿ ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಆಡಲಿಳಿದಿದ್ದಾರೆ.

ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್, ಇಲ್ಲ ಫೋಟೊ ತೆಗೆಸಿಕೊಳ್ಳಲ್ಲ ಇಲ್ಲಿಂದ ಹೋಗು ಎಂದು ​ಸೂಚನೆ ನೀಡಿದ್ದಾರೆ. ಆದರೂ ಕೂಡ ಅಭಿಮಾನಿ ಮತ್ತೆ ಮತ್ತೆ ಫೋಟೊ ತೆಗೆಯಲು ಒತ್ತಾಯಿಸಿದಾಗ, ಅವರ ಕುತ್ತಿಗೆಗೆ ಕೈಹಾಕಿದ ಶಾಕಿಬ್ ಹೊಡೆಯಲು ಮುಂದಾದರು. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

ಶಕಿಬ್‌ ಅವರು ಈ ರೀತಿ ತಾಳ್ಮೆ ಕಳೆದುಕೊಂಡಿರುವುದು ಇದೇ ಮೊದಲೇನಲ್ಲ ಹಲವು ಬಾರಿ ಅವರು ಮೈದಾನದಲ್ಲಿ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಅಂಪೈರ್‌ ಅವರೊಂದಿಗೆ ಶಕಿಬ್‌ ಹಲವು ಬಾರಿ ವಾಗ್ವಾದಕ್ಕೆ ಇಳಿದ ಹಲವು ನಿದರ್ಶನಗಳಿವೆ. ಕಳೆದ ಬಾರಿಯ ಬಾಂಗ್ಲಾ ಪ್ರೀಮಿಯರ್​ ಲೀಗ್​ನಲ್ಲಿ ಅಂಪೈರ್​ ಅವರು ಔಟ್​ ನೀಡಿಲ್ಲ ಎಂಬ ಕಾರಣಕ್ಕೆ ಶಬಿಕ್​ ವಿಕೆಟ್​ಗೆ ಕಾಲಿನಿಂದ ಒದ್ದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ Shakib Al Hasan : ರಾಜಕೀಯ ಆಟದಲ್ಲಿ ಗೆಲುವು ಕಂಡ ಶಕಿಬ್ ಅಲ್ ಹಸನ್​

ಹಿಂದೊಮ್ಮೆ ಜಾಹೀರಾತು ಪ್ರಚಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಶಕಿಬ್‌ ಸಾಗುವ ಮಾರ್ಗದಲ್ಲಿ ಅನೇಕ ಕ್ರೀಡಾಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಭಿಮಾನಿಯೊಬ್ಬ ಗುಂಪಿನ ಮಧ್ಯೆಯಿಂದ ಫೋಟೊ ತೆಗೆಯಲು ಮುಂದಾಗಿದ್ದ ಇದರಿಂದ ಸಿಟ್ಟಿಗೆದ್ದ ಶಕೀಬ್​ತಲೆಯಿಂದ ಕ್ಯಾಪ್​ ಎಳೆದಿದ್ದರು. ಅಲ್ಲದೆ ಕ್ಯಾಪ್‌ ನಿಂದಲೇ ಒಂದೆರಡು ಬಾರಿ ಥಳಿಸಿದ್ದರು. 

Continue Reading

ಕ್ರೀಡೆ

IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

IPL 2024: ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ ಶೇ.30ರ ಅನ್ವಯದಲ್ಲಿ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಜತೆಗೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ಮ್ಯಾಚ್ ರೆಫ್ರಿ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಮತ್ತೆ ಸಂಜು ಈ ರೀತಿಯ ತಪ್ಪು ಮಾಡಿದರೆ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಬೇಕಾಗುತ್ತದೆ.

VISTARANEWS.COM


on

IPL 2024
Koo

ನವದೆಹಲಿ: ಮಂಗಳವಾರ ರಾತ್ರಿ ನಡೆದ ಐಪಿಎಲ್​ನ 56ನೇ ಪಂದ್ಯದಲ್ಲಿ(IPL 2024) ರಾಜಸ್ಥಾನ್​ ರಾಯಲ್ಸ್​(Rajasthan Royals) ಮತ್ತು ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ್​ ನಾಯಕ ಸಂಜು ಸ್ಯಾಮ್ಸನ್(Sanju Samson)​ ತಮ್ಮ ವಿವಾದಾತ್ಮಕ ಕ್ಯಾಚ್​ಗೆ ಔಟ್​ ನೀಡಿದ್ದಕ್ಕಾಗಿ ಅಂಪೈರ್​ ಜತೆ ವಾಗ್ವಾದ ನಡೆಸಿದ್ದರು. ಈ ತಪ್ಪಿಗಾಗಿ ಸಂಜುಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.

ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ ಶೇ.30ರ ಅನ್ವಯದಲ್ಲಿ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಜತೆಗೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ಮ್ಯಾಚ್ ರೆಫ್ರಿ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಮತ್ತೆ ಸಂಜು ಈ ರೀತಿಯ ತಪ್ಪು ಮಾಡಿದರೆ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಬೇಕಾಗುತ್ತದೆ.

ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್​ನ 4ನೇ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದ್ದರು. ಬೌಂಡರಿ ಲೈನ್​ನಲ್ಲಿದ್ದ ಶಾಯ್ ಹೋಪ್ ಅವರು ಈ ಕ್ಯಾಚ್​ ಪಡೆದರು. ಹೋಪ್​ ಕಾಲು ಬೌಂಡರಿ ಲೈನ್​ಗೆ ತಗುಲಿದಂತೆ ಕಂಡು ಬಂದ ಕಾರಣ ಮೂರನೇ ಅಂಪೈರ್​ ಇದನ್ನು ಪರೀಕ್ಷಿಸಿದ ಬಳಿಕ ಔಟ್​ ಎಂದು ತೀರ್ಪು ನೀಡಿದರು. ಈ ವೇಳೆ ಸಂಜು ಮರು ತೀರ್ಪನ್ನು ಮರು ಪರಿಶೀಲಿಸುವಂತೆ ಫೀಲ್ಡ್ ಅಂಪೈರ್ ಜತೆ ವಾಗ್ವಾದ ನಡೆಸಿದರು. ಅಂಪೈರ್​ ತಮ್ಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರೂ ಕೂಡ ಸಂಜು ಇದಕ್ಕೆ ಒಪ್ಪದೆ ಅಂಪೈರ್​ ಜತೆ ವಾಗ್ವಾದ ನಡೆಸಿದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್​ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ IPL 2024 Points Table: ಡೆಲ್ಲಿಗೆ ಗೆಲುವು ಅಂಕಪಟ್ಟಿಯಲ್ಲಿ ಕುಸಿತ ಕಂಡ ಲಕ್ನೋ

ಸಂಜು ಸ್ಯಾಮ್ಸನ್​ ಕ್ರೀಸ್​ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್​ ಸೋಲಿಗೆ ಸಿಲುಕಿತು. ಕುಲ್​ದೀಪ್​​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್​ ಹಿಡಿದ ಸೂಪರ್​ ಕ್ಯಾಚ್​ಗೆ ವಿಕೆಟ್​ ಕೈಚೆಲ್ಲಿದರು.

ಅರುಣ್​ ಜೇಟ್ಲಿ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

Continue Reading
Advertisement
Prajwal Revanna Case JDS delegation moves Womens Commission to arrest pen drive allottees
ಕ್ರೈಂ7 mins ago

Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

Zomato
ದೇಶ8 mins ago

Zomato: ಜೊಮ್ಯಾಟೊ ಹೊಸ ತಂತ್ರಜ್ಞಾನ; ಮನೆ ಹೊರಗೆ ಕಾಲಿಡುವ ಮುನ್ನ ಇದನ್ನು ನೋಡಲೇಬೇಕು!

Hindu population
ದೇಶ10 mins ago

Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

Rain News
ಪ್ರಮುಖ ಸುದ್ದಿ12 mins ago

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

BJP Karnataka State police issues notices to JP Nadda and Amit Malviya and BY Vijayendra
ಕ್ರೈಂ35 mins ago

BJP Karnataka: ಜೆ.ಪಿ. ನಡ್ಡಾ, ಅಮಿತ್‌ ಮಾಳವೀಯಾಗೆ ರಾಜ್ಯ ಪೊಲೀಸರ ನೋಟಿಸ್‌; 7 ದಿನದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

Sam Pitroda
ಪ್ರಮುಖ ಸುದ್ದಿ41 mins ago

Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Neeraj Chopra
ಕ್ರೀಡೆ1 hour ago

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Cancer Risk
ಆರೋಗ್ಯ1 hour ago

Cancer Risk: ಕ್ಯಾನ್ಸರ್ ಅಪಾಯದಿಂದ ಪಾರಾಗಲು ಯಾವ ಆಹಾರ ಸೇವಿಸಬಾರದು? ಯಾವ ಆಹಾರ ಸೇವಿಸಬೇಕು?

K Vasantha Bangera
ಪ್ರಮುಖ ಸುದ್ದಿ1 hour ago

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

T20 World Cup 2024
ಕ್ರೀಡೆ2 hours ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ23 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌