ವಿಶಾಖಪಟ್ಟಣ: ಭಾರತ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾದ ನಾಯಕ ಸ್ಟೀವನ್ ಸ್ಮಿತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಭಾರತ ಬ್ಯಾಟಿಂಗ್ ಆಹ್ವಾನ ಪಡೆದಿದೆ. ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮತ್ತೆ ನಾಯಕತ್ವ ವಹಿಸಿಕೊಂಡರು. ರೋಹಿತ್ ಆಮಗನದಿಂದ ಇಶಾನ್ ಕಿಶನ್ ಜಾಗ ಬಿಡಬೇಕಾಯಿತು. ಶಾರ್ದೂಲ್ ಬದಲು ಅಕ್ಷರ್ ಪಟೇಲ್ ಈ ಪಂದ್ಯದಲ್ಲಿ ಅವಕಾಶ ಪಡೆದರು.
ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಭಾರತ ಈ ಪಂದ್ಯದಲ್ಲಿಯೂ ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳುವ ಯೋಜನೆಯಲ್ಲಿದೆ. ಅತ್ತ ಸ್ಮಿತ್ ಪಡೆ ಹೇಗಾದರೂ ಮಾಡಿ ಈ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಜೀವಂತವಿರಿಸಬೇಕು ಎಂದು ಪಣ ತೊಟ್ಟಿದೆ. ಹೀಗಾಗಿ ಈ ಮುಖಾಮುಖಿ ಹೈ ವೋಲ್ಟೇಜ್ನಿಂದ ಕೂಡಿರುವ ಸಾಧ್ಯತೆ ಇದೆ.
ವಿಶಾಖಪಟ್ಟಣದ ವೈ.ಎಸ್.ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನ(Dr. Y.S. Rajasekhara Reddy Cricket Stadium) ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ಗೆ ಸಮಾನವಾಗಿ ನೆರವು ನೀಡಲಿದೆ. ಬೌಲಿಂಗ್ನಲ್ಲಿ ಇಲ್ಲಿ ಸ್ಪಿನ್ ಹೆಚ್ಚು ಪರಿಣಾಮಕಾರಿಯಾಗಲಿದೆ. 2019ರ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿ ಏಕದಿನ ಪಂದ್ಯ ನಡೆಯುತ್ತಿದೆ.
ಉಭಯ ತಂಡಗಳು
ಭಾರತ: ಶುಭಮನ್ ಗಿಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯಕ್ಕೆ ಕ್ಷಣಗಣನೆ
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರೂನ್ ಗ್ರೀನ್, ನಥಾನ್ ಎಲ್ಲಿಸ್, ಮಾರ್ಕಸ್ ಸ್ಟೋಯಿನಿಸ್, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆ್ಯಂಡ ಜಂಪಾ.