ಮುಂಬಯಿ: ಭಾರತ ಮತ್ತು ಆಸ್ಟ್ರೇಲಿಯಾ(IND VS AUS) ವಿರುದ್ಧದ ಮೊದಲ ಏಕದಿನ ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯದಲ್ಲಿ ಶುಭಮನ್ ಗಿಲ್ ಜತೆ ಇನಿಂಗ್ಸ್ ಆರಂಭಿಸುವ ಆಟಗಾರ ಯಾರು ಎಂಬ ಕುತೂಹಲಕ್ಕೆ ಇದೀಗ ನಾಯಕ ಹಾರ್ದಿಕ್ ಪಾಂಡ್ಯ ತೆರೆ ಎಳೆದಿದ್ದಾರೆ.
ಉಭಯ ತಂಡಗಳ ಮೊದಲ ಏಕದಿನ ಪಂದ್ಯ ಇಂದು(ಶುಕ್ರವಾರ, ಮಾರ್ಚ್ 17) ಮುಂಬಯಿಯ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್ ಜತೆ ಇಶಾನ್ ಭಾರತದ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಹೇಳಿದರು.
ರೋಹಿತ್ ಅವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಮತ್ತು ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಈ ಪಂದ್ಯ ಉಭಯ ತಂಡಗಳಿಗೂ ಸವಾಲಿನಿಂದ ಕೂಡಿರುವ ಸಾಧ್ಯತೆ. ಏಕೆಂದರೆ ಕೆಲವು ವರ್ಷಗಳ ಬಳಿಕ ನಾವು ವಾಂಖೆಡೆಯಲ್ಲಿ ಕ್ರಿಕೆಟ್ ಆಡುತ್ತಿದ್ದೇವೆ ಹೀಗಾಗಿ ಇಲ್ಲಿನ ಪಿಚ್ ಹೇಗೆ ವರ್ತಿಸಲಿದೆ ಎಂಬುವುದು ಕೂಡ ಇಲ್ಲಿ ಮುಖ್ಯ ಎಂದು ಪಾಂಡ್ಯ ಹೇಳಿದರು.
ಗಾಯಾಳು ಶ್ರೇಯಸ್ ಅಯ್ಯರ್ ಅವರು ಈ ಸರಣಿಯಿಂದ ಹೊರಬಿದ್ದ ಕಾರಣ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಓರ್ವ ಸಮರ್ಥ ಆಟಗಾರನ ಅಗತ್ಯವಿದೆ. ಈ ಸ್ಥಾನದಲ್ಲಿ ರಾಹುಲ್ ಅವರು ಆಡಬಹುದು ಎಂದು ಪಾಂಡ್ಯ ಹೇಳಿದರು.
ಸಂಭಾವ್ಯ ತಂಡ
ಭಾರತ: ಹಾರ್ದಿಕ್ ಪಾಂಡ್ಯ(ನಾಯಕ) ಇಶಾನ್ ಕಿಶನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್/ಯಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ಇದನ್ನೂ ಓದಿ IND VS AUS: ಮುಂಬೈಯಲ್ಲಿ ಕಾವೇರಿಸಿಕೊಳ್ಳಲಿದೆ ಭಾರತ-ಆಸ್ಟ್ರೇಲಿಯಾ ಏಕದಿನ ಹೋರಾಟ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್ (ನಾಯಕ), ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜೈ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಜಾಂಪ.