ಮುಂಬಯಿ: ಟೆಸ್ಟ್ ಸರಣಿಯಲ್ಲಿ ಕಳಪೆ ಬ್ಯಾಟಿಂಗ್ ನಡೆಸಿ ಟೀಕೆಗೆ ಗುರಿಯಾಗಿದ್ದ ಕೆ.ಎಲ್ ರಾಹುಲ್(KL Rahul) ಅವರಿಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿತ್ತು. ಆದರೆ ರಾಹುಲ್ಗೆ ಈ ಪಂದ್ಯದಲ್ಲಿ ಅವಕಾಶ ಸಿಕ್ಕಿದೆ.
ಮುಂಬಯಿಯ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಬ್ಯಾಟಿಂಗ್ ಆಹ್ವಾನ ಪಡೆದ ಆಸ್ಟ್ರೇಲಿಯಾ 11 ರನ್ಗೆ ಒಂದು ವಿಕೆಟ್ ಕಳೆದುಕೊಂಡು ಆಟ ಮುಂದುವರಿಸಿದೆ. ಈ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ. ಆರಂಭಿಕರಾಗಿ ಇಶಾನ್ ಕಿಶನ್(Ishan Kishan) ಮತ್ತು ಶುಭಮನ್ ಗಿಲ್(Shubman Gill) ಭಾರತದ ಇನಿಂಗ್ಸ್ ಆರಂಭಿಸಲಿದ್ದಾರೆ.
ಇದನ್ನೂ ಓದಿ IND VS AUS: ಮುಂಬೈಯಲ್ಲಿ ಕಾವೇರಿಸಿಕೊಳ್ಳಲಿದೆ ಭಾರತ-ಆಸ್ಟ್ರೇಲಿಯಾ ಏಕದಿನ ಹೋರಾಟ
ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡುವ ಜತೆಗೆ ಕೀಪಿಂಗ್ ಕೂಡ ನಡೆಸಲಿದ್ದಾರೆ. ಈ ಹಿಂದೆಯೇ ರಾಹುಲ್ ಅವರಿಗೆ ಕೀಪಿಂಗ್ ನೀಡಲಾಗುವುದು ಎಂದು ಹೇಳಲಾಗಿತ್ತು. ನಿರೀಕ್ಷೆಯಂತೆ ರಾಹುಲ್ಗೆ ಕೀಪಿಂಗ್ ನೀಡಲಾಗಿದೆ. ಏಷ್ಯಾ ಕಪ್ ವೇಳೆ ಗಾಯಗೊಂಡು ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ(Ravindra Jadeja) ಇದೇ ಮೊದಲ ಬಾರಿ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದ್ದಾರೆ. ಆದರೆ ಇದಕ್ಕೂ ಮುನ್ನ ನಡೆದ ಟೆಸ್ಟ್ನಲ್ಲಿ ಅವರು ಆಡಿದ್ದರು.