ನಾಗ್ಪುರ: ಆಸ್ಟ್ರೇಲಿಯಾ(IND VS AUS) ವಿರುದ್ಧದ ಬಾರ್ಡರ್-ಗವಾಸ್ಕರ್(border gavaskar trophy) ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸುವ ಲಕ್ಷಣ ತೋರಿಬಂದಿದೆ. ದ್ವಿತೀಯ ದಿನದಾಟದ ಭೋಜನ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ.
ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ಈ ಹಣಾಹಣಿಯಲ್ಲಿ ಭಾರತ ಮೊದಲ ದಿನದಾಟದಲ್ಲಿ 24 ಓವರ್ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 77 ರನ್ ಗಳಿಸಿತ್ತು. ಶುಕ್ರವಾರ ದ್ವಿತೀಯ ದಿನದ ಆಟ ಮುಂದುವರಿಸಿದ ಭಾರತ ಭೋಜನ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. ಆಸ್ಟ್ರೇಲಿಯಾ ತಂಡದ 177 ರನ್ಗಳ ಗುರಿಯನ್ನು ಹಿಂದಿಕ್ಕಿ ಇನಿಂಗ್ಸ್ ಮುನ್ನಡೆ ಪಡೆಯಲು ಇನ್ನೂ 26 ರನ್ಗಳ ಅಗತ್ಯವಿದೆ.
ಇದನ್ನೂ ಓದಿ Ravindra jadeja : ಬೌಲಿಂಗ್ ಮಾಡುವ ಮೊದಲು ಜಡೇಜಾ ಬೆರಳಿಗೆ ಹಚ್ಚಿಕೊಂಡಿದ್ದೇನು? ಚರ್ಚೆ ಶುರು
ಸದ್ಯ ಉತ್ತಮ ಬ್ಯಾಟಿಂಗ್ ನಿರ್ವಹಣೆ ತೋರುತ್ತಿರುವ ನಾಯಕ ರೋಹಿತ್ ಶರ್ಮಾ ಅಜೇಯ 85 ರನ್ ಗಳಿಸಿ ಶತಕದತ್ತ ದಾಪುಗಾಲು ಇಟ್ಟಿದ್ದಾರೆ. ವಿರಾಟ್ ಕೊಹ್ಲಿ ಅಜೇಯ 12 ರನ್ ಗಳಿಸಿ ರೋಹಿತ್ಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ದ್ವಿತೀಯ ದಿನದಾಟದಲ್ಲಿ ಆಸೀಸ್ ಬೌಲರ್ ಟಾಡ್ ಮರ್ಫಿ 2 ವಿಕೆಟ್ ಕೆಡವಿದ್ದಾರೆ. ಮೊದಲ ದಿನ ರಾಹುಲ್ ಅವರ ವಿಕೆಟ್ ಪಡೆದಿದ್ದರು. ಒಟ್ಟಾರೆ ಮೂರು ವಿಕೆಟ್ ಕಲೆಹಾಕಿ ಮುನ್ನುಗುತ್ತಿದ್ದಾರೆ. ಚೇತೇಶ್ವರ್ ಪೂಜಾರ ಕೇವಲ 7 ರನ್ಗೆ ಔಟಾಗಿ ನಿರಾಸೆ ಮೂಡಿಸಿದರು. ಆರ್. ಅಶ್ವಿನ್ 20 ರನ್ ಗಳಿಸಿ ಔಟಾದರು.