Site icon Vistara News

IND VS AUS: ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯದ ಪಿಚ್​ ರಿಪೋರ್ಟ್​ ಹೇಗಿದೆ?

IND VS AUS: How is the pitch report of India-Australia second ODI match?

IND VS AUS: How is the pitch report of India-Australia second ODI match?

ವಿಶಾಖಪಟ್ಟಣಂ: ಭಾರತ(IND VS AUS) ಮತ್ತು ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯ ಭಾನುವಾರ(ಮಾರ್ಚ್​ 19) ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈ ಪಂದ್ಯದ ಪಿಚ್​ ರಿಪೋರ್ಟ್​ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.

ವಿಶಾಖಪಟ್ಟಣದ ವೈ.ಎಸ್.ರಾಜಶೇಖರ ರೆಡ್ಡಿ ಕ್ರಿಕೆಟ್​ ಸ್ಟೇಡಿಯಂನ(Dr. Y.S. Rajasekhara Reddy Cricket Stadium) ಪಿಚ್​ ಬ್ಯಾಟಿಂಗ್​ ಮತ್ತು ಬೌಲಿಂಗ್​ಗೆ ಸಮಾನವಾಗಿ ನೆರವು ನೀಡಲಿದೆ. ಬೌಲಿಂಗ್​ನಲ್ಲಿ ಇಲ್ಲಿ ಸ್ಪಿನ್​ ಹೆಚ್ಚು ಪರಿಣಾಮಕಾರಿಯಾಗಲಿದೆ. 2019ರ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿ ಏಕದಿನ ಪಂದ್ಯ ನಡೆಯಲಿದೆ. 2019 ಡಿಸೆಂಬರ್ 18ರಂದು ಭಾರತ ಮತ್ತು ವೆಸ್ಟ್​ ಇಂಡೀಸ್​ ವಿರುದ್ಧ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ 107 ರನ್‌ಗಳ ಗೆಲುವು ಸಾಧಿಸಿತ್ತು.

ಈ ಮೈದಾನದಲ್ಲಿ ರೋಹಿತ್​ ಶರ್ಮಾ ಮತ್ತು ಕೆ.ಎಲ್​. ರಾಹುಲ್​ ಉತ್ತಮ ರೆಕಾರ್ಡ್​ ಹೊಂದಿದ್ದಾರೆ. ಇಲ್ಲಿ ಉಭಯ ಆಟಗಾರರು ವೆಸ್ಟ್​ ಇಂಡೀಸ್​ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದಾರೆ. ರಾಹುಲ್ ಮುಂಬಯಿಯ ವಾಂಖೆಡೆಯಲ್ಲಿ ನಡೆದ​ ಮೊದಲ ಏಕದಿನ ಪಂದ್ಯದಲ್ಲಿ ಅಜೇಯ 75 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ದ್ವಿತೀಯ ಪಂದ್ಯದಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುವ ಸಾಧ್ಯತೆ ಇದೆ.

ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯ ನಡೆಯುವುದು ಅನುಮಾನ; ಕಾರಣ ಏನು?

ಭಾರತ ತಂಡ ಇಲ್ಲಿ ಇದುವರೆಗೆ 10 ಏಕದಿನ ಪಂದ್ಯವನ್ನಾಡಿದೆ. ಇದರಲ್ಲಿ 7 ಗೆಲುವು, ಒಂದು ಸೋಲು ಕಂಡಿದೆ. ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇನ್ನೊಂದು ಪಂದ್ಯ ಟೈ ಆಗಿತ್ತು. ಇದೀಗ ಈ ಪಂದ್ಯಕ್ಕೂ ಮಳೆ ಕಾಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಭಾವ್ಯ ತಂಡ

ಭಾರತ: ಶುಭಮನ್ ಗಿಲ್, ರೋಹಿತ್​ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್ (ವಿಕೆಟ್​ ಕೀಪರ್​), ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್​ದೀಪ್​ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್​, ಸ್ಟೀವನ್​ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್​ ಕೀಪರ್​), ಕ್ಯಾಮೆರೂನ್ ಗ್ರೀನ್, ಗ್ಲೆನ್ ಮ್ಯಾಕ್ಸ್​ವೆಲ್, ಮಾರ್ಕಸ್ ಸ್ಟೋಯಿನಿಸ್​, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆ್ಯಂಡ ಜಂಪಾ.

Exit mobile version