ನವದೆಹಲಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯವನ್ನಾಡಲು ಸಜ್ಜಾಗಿದೆ. ಉಭಯ ತಂಡಗಳ ಈ ಮುಖಾಮುಖಿ ಶುಕ್ರವಾರ(ಫೆ.17) ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಸಂಭಾವ್ಯ ತಂಡದ ಮಾಹಿತಿ ಇಂತಿದೆ.
ಪಿಚ್ ರಿಪೋರ್ಟ್
ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನ ಪಿಚ್ ಆರಂಭದಲ್ಲಿ ಬ್ಯಾಟಿಂಗ್ಗೆ ನೆರವಾಗುತ್ತದೆ. ಆ ಬಳಿಕ ಸ್ಪಿನ್ ಬೌಲರ್ಗಳು ಹಿಡಿತ ಸಾಧಿಸಲಿದ್ದಾರೆ. ಇಲ್ಲಿ ಲೋ ಬೌನ್ಸ್ ಇರುವುದರಿಂದ ವೇಗಿಗಳು ಹೆಚ್ಚು ಶಮ್ರಪಡುವ ಅಗತ್ಯವಿದೆ. ಒಟ್ಟಾರೆ ಇಲ್ಲಿನ ಪಿಚ್ ಸ್ಪಿನ್ ಸ್ನೇಹಿಯಾಗಿದೆ. ಆಸ್ಟ್ರೇಲಿಯಾ ವಿರುದ್ಧ ಇದೇ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅನಿಲ್ ಕುಂಬ್ಳೆ ಅತಿ ಹೆಚ್ಚು ವಿಕೆಟ್ ಕಿತ್ತ ಸಾಧನೆ ಮಾಡಿದ್ದರು. ಮೊದಲ ಇನಿಂಗ್ಸ್ನಲ್ಲಿ 350 ರನ್ ಇಲ್ಲಿನ ಎವರೇಜ್ ಮೊತ್ತವಾಗಿದೆ.
ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ತಂಡ ಬಲಿಷ್ಠವಾಗಿದೆ. ಇಲ್ಲಿ ಈವರೆಗೆ ಭಾರತ ತಂಡ 34 ಟೆಸ್ಟ್ ಪಂದ್ಯಗಳನ್ನು ಆಡಿದೆ. 13 ಪಂದ್ಯದಲ್ಲಿ ಗೆಲುವು ಸಾಧಿಸಿದೆ. 6 ಬಾರಿ ಪ್ರವಾಸಿ ತಂಡ ಗೆದ್ದಿದೆ. 15 ಪಂದ್ಯಗಳು ಡ್ರಾಗೊಂಡಿವೆ. ಹೀಗಾಗಿ ಈ ಪಂದ್ಯದಲ್ಲಿಯೂ ಭಾರತವೇ ನೆಚ್ಚಿನ ತಂಡವಾಗಿ ಕಾಣಿಸಿಕೊಂಡಿದೆ.
ಇದನ್ನೂ ಓದಿ IND VS AUS: ದ್ವಿತೀಯ ಟೆಸ್ಟ್ಗೆ ಶ್ರೇಯಸ್ ಅಯ್ಯರ್; ಸೂರ್ಯಕುಮಾರ್ ಯಾದವ್ ಡೌಟ್?
ಸಂಭಾವ್ಯ ತಂಡ
ಭಾರತ: ರೋಹಿತ್ ಶರ್ಮಾ(ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್/ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಸ್ ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ),ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ಸ್ಟೀವನ್ ಸ್ಮಿತ್, ನಥಾನ್ ಲಿಯಾನ್, ಪೀಟರ್ ಹ್ಯಾಂಡ್ಸ್‌ಕಾಂಬ್/ ಕೆಮರೂನ್ ಗ್ರೀನ್, ಮ್ಯಾಥ್ಯೂ ರೆನ್‌ಶಾ, ಅಲೆಕ್ಸ್ ಕ್ಯಾರಿ, ಸ್ಕಾಟ್ ಬೋಲ್ಯಾಂಡ್. ಟಾಡ್ ಮರ್ಫಿ.
ಆರಂಭ: ಬೆಳಗ್ಗೆ 9.30, ಪ್ರಸಾರ: ಸ್ಟಾರ್ ಸ್ಪೋರ್ಟ್ಸ್