ಚೆನ್ನೈ: ಪ್ರವಾಸಿ ಆಸ್ಟ್ರೇಲಿಯಾ(IND VS AUS) ಮತ್ತು ಆತಿಥೇಯ ಭಾರತ ವಿರುದ್ಧದ ಅಂತಿಮ ಏಕದಿನ ಪಂದ್ಯ ಬುಧವಾರ(ಮಾರ್ಚ್ 22) ಚೆನ್ನೈನಲ್ಲಿ(Chennai) ನಡೆಯಲಿದೆ. ಈಗಾಗಲೇ ಉಭಯ ತಂಡಗಳು 1-1 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿದೆ. ಹೀಗಾಗಿ ಸರಣಿ ಗೆಲುವು ದಾಖಲಿಸಲು ಇತ್ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.
ಪಿಚ್ ರಿಪೋರ್ಟ್
ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನ(MA Chidambaram Stadium) ಪಿಚ್ ಸ್ಪಿನ್ ಸ್ನೇಹಿಯಾಗಿದೆ. ಇಲ್ಲಿ ಸ್ಪಿನರ್ಗಳು ಉತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಉಭಯ ತಂಡಗಳು ಸ್ಪಿನ್ಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಇಲ್ಲಿ ಒಟ್ಟು 21 ಏಕದಿನ ಪಂದ್ಯಗಳು ನಡೆದಿತ್ತು. ದೊಡ್ಡ ಮೊತ್ತ ದಾಖಲಾಗಿಲ್ಲ. ಎವರೇಜ್ 250 ರಿಂದ 280 ರನ್ ಬಾರಿಸಿದರೆ ಇದು ದೊಡ್ಡ ಮೊತ್ತ ಎನ್ನಬಹುದು. ಮೊದಲು ಬ್ಯಾಟಿಂಗ್ ನಡೆಸಿದ ತಂಡ ಇಲ್ಲಿ 13 ಬಾರಿ ಗೆದ್ದಿದೆ. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದರೆ ಒಳಿತು.
ವಿರಾಟ್ ಉತ್ತಮ ದಾಖಲೆ
ಚೆನ್ನೈಯಲ್ಲಿ ನಡೆದ 7 ಏಕ ದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 283 ರನ್ ಬಾರಿಸಿದ್ದಾರೆ. ಇದರಲ್ಲಿ ಒಂದು ಶತಕವೂ ಸೇರಿದೆ. ಜತೆಗೆ ಈ ಮೈದಾನದಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಇಲ್ಲಿ 2017 ರಲ್ಲಿ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯ ಡಕ್‌ವರ್ತ್ ಲೂಯಿಸ್ ನಿಯಮದನ್ವಯ ಭಾರತ 26 ರನ್‌ಗಳಿಂದ ಜಯ ಸಾಧಿಸಿತ್ತು.
ಸಂಭಾವ್ಯ ತಂಡಗಳು
ಭಾರತ: ಶುಭಮನ್ ಗಿಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್/ ಇಶಾನ್ ಕಿಶನ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರೂನ್ ಗ್ರೀನ್, ನಥಾನ್ ಎಲ್ಲಿಸ್, ಮಾರ್ಕಸ್ ಸ್ಟೋಯಿನಿಸ್, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆ್ಯಂಡ ಜಂಪಾ.