ನಾಗ್ಪುರ: ಪ್ರವಾಸಿ ಆಸ್ಟ್ರೇಲಿಯಾ(IND VS AUS) ಮತ್ತು ಭಾರತ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಗುರುವಾರ(ಫೆ.9) ನಾಗ್ಪುರದಲ್ಲಿ ಆರಂಭವಾಗಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಸಂಭಾವ್ಯ ತಂಡದ ಮಾಹಿತಿ ಇಂತಿದೆ.
ಪಿಚ್ ರಿಪೋರ್ಟ್
ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಡೇಡಿಯಂನ(Vidarbha Cricket Association Stadium)ಪಿಚ್ ಹೆಚ್ಚಾಗಿ ಸ್ಪಿನ್ ಸ್ನೇಹಿಯಾಗಿದೆ. ಆದರೆ ಈ ಪಿಚ್ ಅವಸರದಲ್ಲಿ ಮಾಡಿದ ಕಾರಣದಿಂದ ಹೇಗೆ ವರ್ತಿಸಲಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಈ ಪಿಚ್ ಬಗ್ಗೆ ಈಗಾಗಲೇ ಉಭಯ ತಂಡಗಳು ಅಸಮಾಧಾನವನ್ನು ವ್ಯಕ್ತಪಡಿಸಿದೆ. ಜತೆಗೆ ಈ ಪಿಚ್ ಹೇಗಿದೆ ಎಂಬ ಕುರಿತು ಕ್ಯುರೇಟರ್ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ.
ಸದ್ಯದ ಮಾಹಿತಿ ಪ್ರಕಾರ ಈ ಪಿಚ್ ಸ್ಪಿನ್ ಬೌಲರ್ಗಳಿಗೆ ನೆರವು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸೋಮವಾರ ಈ ಪಿಚ್ ಮೇಲೆ ಹಸಿರು ಹೊದಿಕೆ ಕಂಡು ಬಂದಿತ್ತು. ಜತೆಗೆ ಕಂದು ಬಣ್ಣದ ಪ್ಯಾಚ್‌ಗಳಿದ್ದವು. ಪಂದ್ಯ ಆರಂಭವಾಗುವ ವೇಳೆ ಹುಲ್ಲು ಸಂಪೂರ್ಣ ಬೋಳಾಗುವ ಸಾಧ್ಯತೆ ಇದೆ. ಹೀಗಾಗಿ ಮೊದಲ ದಿನವೇ ಪಿಚ್ ಸ್ಪಿನ್ನಿಗೆ ನೆರವಾಗಲಿದೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಉಭಯ ತಂಡಗಳು ಸ್ಪಿನ್ ಬೌಲಿಂಗ್ಗೆ ಹೆಚ್ಚಿನ ಮಹತ್ವದ ನೀಡಬಹುದು. ಈಗಾಗಲೇ ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ನಮ್ಮ ತಂಡದಲ್ಲಿ 4 ಜನ ಸ್ಪಿನ್ನರ್ಗಳಿದ್ದಾರೆ ಎಂದು ಹೇಳಿದ್ದಾರೆ. ಇದರಿಂದ ಭಾರತ ನಾಲ್ವರು ಸ್ಪಿನ್ನರ್‌ಗಳನ್ನು ದಾಳಿಗೆ ಇಳಿಸುವ ಸಾಧ್ಯತೆಯೂ ಗೋಚರವಾಗಿದೆ.
ಸಂಭಾವ್ಯ ತಂಡ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಅಕ್ಷರ್ ಪಟೇಲ್, ಕೆ.ಎಸ್ ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್/ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ),ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ನಥಾನ್ ಲಿಯಾನ್, ಪೀಟರ್ ಹ್ಯಾಂಡ್ಸ್‌ಕಾಂಬ್/ಮ್ಯಾಥ್ಯೂ ರೆನ್‌ಶಾ, ಅಲೆಕ್ಸ್ ಕ್ಯಾರಿ, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್.