ಇಂದೋರ್: ಬಾರ್ಡರ್-ಗವಾಸ್ಕರ್(border gavaskar trophy) ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನಾಡಲು ಭಾರತ ಮತ್ತು ಆಸ್ಟ್ರೇಲಿಯಾ(IND VS AUS) ತಂಡಗಳು ಸಜ್ಜಾಗಿದೆ. ಉಭಯ ತಂಡಗಳ ಈ ಪಂದ್ಯ ಬುಧವಾರ (ಮಾರ್ಚ್ 1)ದಿಂದ ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.
ಪಿಚ್ ರಿಪೋರ್ಟ್
ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಇಲ್ಲಿ ವಿರಾಟ್ ಕೊಹ್ಲಿ ಮತ್ತು ಮಯಾಂಕ್ ಅಗರ್ವಾಲ್ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ೨೦೧೬ರಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ೫ ವಿಕೆಟ್‌ಗೆ ಗರಿಷ್ಠ ೫೫೭ ರನ್ ಬಾರಿಸಿ ಡಿಕ್ಲೇರ್ ಮಾಡಿತ್ತು. ಈ ಎಲ್ಲ ಲೆಕ್ಕಾಚಾರವನ್ನು ಗಮನಿಸುವಾಗ ಈ ಪಂದ್ಯದಲ್ಲಿಯೂ ದೊಡ್ಡ ಮೊತ್ತ ದಾಖಲಾಗುವ ಸಾಧ್ಯತೆ ಇದೆ.
ಇಂದೋರ್ನಲ್ಲಿ ಬೌಲಿಂಗ್ ಸಾಧನೆ ನೋಡುವುದಾದರೆ ಆರ್. ಅಶ್ವಿನ್ ಮತ್ತು ಮೊಹಮ್ಮದ್ ಶಮಿ ಉತ್ತಮ ದಾಖಲೆ ಹೊಂದಿದ್ದಾರೆ. ಆರ್ ಅಶ್ವಿನ್ ಇಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು ಒಟ್ಟು 18 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. ಶಮಿ ಕೂಡ 2 ಟೆಸ್ಟ್ ಪಂದ್ಯಗಳಲ್ಲಿ 7 ವಿಕೆಟ್ ಉರುಳಿಸಿದ್ದಾರೆ. ಒಟ್ಟಾರೆ ಭಾರತೀಯ ಆಟಗಾರರು ಇಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್/ ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆ.ಎಸ್ ಭರತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ IND VS AUS: ನೆಟ್ಸ್ನಲ್ಲಿ ಜತೆಯಾಗಿ ಬ್ಯಾಟಿಂಗ್ ಅಭ್ಯಾಸ ನಡೆಸಿದ ರಾಹುಲ್-ಗಿಲ್
ಆಸ್ಟ್ರೇಲಿಯಾ ತಂಡ: ಸ್ಟೀವನ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್/ ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್, ಲ್ಯಾನ್ಸ್ ಮೋರಿಸ್.