ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯ ಪ್ರಧಾನಿ ಆಂಟೋನಿ ಅಲ್ಬನೀಸ್ ಸಾಕ್ಷಿಯಾಗಲಿದ್ದಾರೆ.
ಉಭಯ ದೇಶಗಳ ಪ್ರಧಾನಿಗಳು ಈ ಟೆಸ್ಟ್ ಪಂದ್ಯವನ್ನು ವೀಕ್ಷಿಸಿವ ನಿಟ್ಟಿನಲ್ಲಿ ಈಗಾಗಲೇ ಸಕಲ ಸಿದ್ಧತೆಗಳು ಆರಂಭಗೊಂಡಿದೆ. ಜತೆಗೆ ಅಹಮದಾಬಾದ್ ಸ್ಟೇಡಿಯಂನ ಒಳಾಂಗಣ ಮತ್ತು ಹೊರಾಂಗಣದಲ್ಲಿಯೂ ಭಾರಿ ಭದ್ರತೆ ವಹಿಸಲಾಗಿದೆ. ರಕ್ಷಣಾ ಪಡೆಗಳು ಕ್ರೀಡಾಂಗಣದಲ್ಲಿ ಈಗಿಂದಲೇ ತೀವ್ರ ತಪಾಸಣೆ ನಡೆಸುತ್ತಿದೆ. ಈ ಟೆಸ್ಟ್ ಪಂದ್ಯ ಮಾರ್ಚ್ 9 ಗುರುವಾದಿಂದ ಆರಂಭವಾಗಲಿದೆ.
ಅಹಮದಾಬಾದ್ ಕ್ರೀಡಾಂಗಣಕ್ಕೆ ತಮ್ಮ ಹೆಸರಿಟ್ಟ ಬಳಿಕ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ ಇಲ್ಲಿ ಪಂದ್ಯವೊಂದನ್ನು ವೀಕ್ಷಿಸಲಿದ್ದಾರೆ. ಅದಲ್ಲದೇ ಈ ಪಂದ್ಯದಲ್ಲಿ ಮೋದಿ ಕೆಲ ಕಾಲ ವಿಕ್ಷಕ ವಿವರಣೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ IND VS AUS: ಅಹಮದಾಬಾದ್ ಟೆಸ್ಟ್ನಲ್ಲಿ ವೀಕ್ಷಕ ವಿವರಣೆ ಮಾಡಲಿದ್ದಾರೆ ಪ್ರಧಾನಿ ಮೋದಿ; ವರದಿ
ಅಂತಿಮ ಟೆಸ್ಟ್ ಪಂದ್ಯವನ್ನಾಡಲು ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಆಟಗಾರರು ಈಗಾಗಲೇ ಅಹಮದಾಬಾದ್ ತಲುಪಿದ್ದು, ಅಭ್ಯಾಸದಲ್ಲಿ ನಿತರರಾಗಿದ್ದಾರೆ. ಇಂದೋರ್ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡ ಕಾರಣ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಟಿಕೆಟ್ ಖಾತ್ರಿ ಪಡಿಸಬೇಕಿದ್ದರೆ ಭಾರತಕ್ಕೆ ಅಹಮದಾಬಾದ್ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.