ಅಹಮದಾಬಾದ್: ಸೋಮವಾರ ಡ್ರಾದಲ್ಲಿ ಮುಕ್ತಾಯ ಕಂಡ ಭಾರತ(IND VS AUS) ಮತ್ತು ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲರ್ ಮೊಹಮ್ಮದ್ ಶಮಿ(Mohammed Shami) ಅವರನ್ನು ಗುರಿಯಾಗಿರಿಸಿ ಪ್ರೇಕ್ಷಕರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಹಮದಾಬಾದ್ನಲ್ಲಿ ನಡೆದ ಟೆಸ್ಟ್ ಪಂದ್ಯ ಡ್ರಾಗೊಂಡ ಕಾರಣ ಭಾರತ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 2-1 ಅಂತರದಿಂದ ಸರಣಿ ಗೆಲುವು ಸಾಧಿಸಿತು. ಇನ್ನೊಂದೆಡೆ ಶ್ರೀಲಂಕಾ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಸೋತ ಕಾರಣ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಪ್ರವೇಶ ಪಡೆಯಿತು. ಇದರ ಸಂತಸದಲ್ಲಿ ಭಾರತೀಯ ಆಟಗಾರರು ಮೈದಾನದಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ. ಇದೇ ವೇಳೆ ಪ್ರೇಕ್ಷಕರು ಶಮಿ ಅವರ ಹೆಸರನ್ನು ಉಲ್ಲೇಖಿಸಿ ಜೈ ಶ್ರೀ ರಾಮ್, ಜೈ ಶ್ರೀ ರಾಮ್… ಎಂದು ಜೋರಾಗಿ ಕೂಗಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ IND VS AUS: ಉಸ್ಮಾನ್ ಖವಾಜಾ, ಅಲೆಕ್ಸ್ ಕ್ಯಾರಿಗೆ ವಿಶೇಷ ಉಡುಗೊರೆ ನೀಡಿದ ವಿರಾಟ್ ಕೊಹ್ಲಿ; ವಿಡಿಯೊ ವೈರಲ್
ಇದೇ ವಿಚಾರವಾಗಿ ಮ್ಯಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ(rohit sharma), ಮೊಹಮ್ಮದ್ ಶಮಿಯನ್ನು ಗುರಿಯಾಗಿರಿಸಿ ಜೈ ಶ್ರೀ ರಾಮ್ ಎಂದು ಕೂಗಿರುವ ಘಟನೆ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಈ ವಿಷಯವನ್ನು ನಾನು ನಿಮ್ಮಿಂದಲೇ ಕೇಳುತ್ತಿದ್ದೇನೆ. ಮೈದಾನದಲ್ಲಿ ಈ ಬಗ್ಗೆ ಏನು ನಡೆಯಿತು ಎಂದು ನನಗೆ ಸ್ಪಷ್ಟವಾಗಿ ಗೊತ್ತಿಲ್ಲ. ಹೀಗಾಗಿ ಈ ವಿಚಾರದ ಬಗ್ಗೆ ನಾನು ಏನು ಪತ್ರಿಕ್ರಿಯೆ ನೀಡಲು ಹೋಗುವುದಿಲ್ಲ. ತಿಳಿಯದ ವಿಚಾರಕ್ಕೆ ನಾನು ಧ್ವನಿಗೂಡಿಸಿದರೆ ಅದು ವಿವಾದಕ್ಕೆ ಕಾರಣವಾಗುತ್ತದೆ” ಎಂದು ಹೇಳಿದರು. ಈ ಘಟನೆ ಬಗ್ಗೆ ಕೆಲ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಲು ಆರಂಭಿಸಿದ್ದಾರೆ.