IND VS AUS: KL Rahul keeper in ODI series against Aussies! IND VS AUS: ಆಸೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ ಕೆ.ಎಲ್​ ರಾಹುಲ್​ ಕೀಪರ್​! - Vistara News IND VS AUS: ಆಸೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ ಕೆ.ಎಲ್​ ರಾಹುಲ್​ ಕೀಪರ್​!

ಕ್ರಿಕೆಟ್

IND VS AUS: ಆಸೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ ಕೆ.ಎಲ್​ ರಾಹುಲ್​ ಕೀಪರ್​!

ಕೆ.ಎಲ್​. ರಾಹುಲ್​ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಕೀಪಿಂಗ್​ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Former coach Ravi Shastri says Rahul Best for Kishan, Bharat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಆಸ್ಟ್ರೇಲಿಯಾ(IND VS AUS) ವಿರುದ್ಧದ ಮೂರು ಪಂದ್ಯಗಳ ಏಕ ದಿನ ಸರಣಿಯಲ್ಲಿ ಕನ್ನಡಿಗ ಕೆ.ಎಲ್​. ರಾಹುಲ್(KL Rahul)​ ಅವರು ಟೀಮ್​ ಇಂಡಿಯಾದ ಕೀಪಿಂಗ್​ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ.

ಕಳಪೆ ಬ್ಯಾಟಿಂಗ್​ ಪ್ರದರ್ಶನದಿಂದ ಟೀಕೆಗೆ ಗುರಿಯಾಗಿ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಎರಡು ಟೆಸ್ಟ್​ ಪಂದ್ಯಗಳಿಂದ ಹೊರಗುಳಿದಿದ್ದ ಕೆ.ಎಲ್ ರಾಹುಲ್​ಗೆ​ ಏಕದಿನ ಸರಣಿಯಲ್ಲಿಯೂ ಅವಕಾಶ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬಂದಿತ್ತು. ಇದರಿಂದ ರಾಹುಲ್​ ಅಭಿಮಾನಿಗಳು ಕೂಡ ಬೇಸರಗೊಂಡಿದ್ದರು. ಆದರೆ ಇದೀಗ ಬಿಸಿಸಿಐ ಅಧಿಕಾರಿಯೊಬ್ಬರು ಏಕದಿನ ಸರಣಿಯಲ್ಲಿ ರಾಹುಲ್​ಗೆ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಕೆ ಕಾಣುತ್ತಿರುವ ರಿಷಭ್​ ಪಂತ್​ ಸದ್ಯಕ್ಕೆ ತಂಡಕ್ಕೆ ಮರಳುವ ಯಾವುದೇ ಸೂಚನೆ ಇಲ್ಲ. ಅವರ ಚೇತರಿಕೆಗೆ ಕನಿಷ್ಠ 2 ವರ್ಷಗಳ ಕಾಲಾವಕಾಶ ಬೇಕು ಎಂದು ಈಗಾಗಲೇ ವೈದ್ಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ಭಾರತ ತಂಡಕ್ಕೆ ಓರ್ವ ಸಮರ್ಥ ಕೀಪರ್​ ಅಗತ್ಯವಿದೆ. ಜತೆಗೆ ಇದೇ ವರ್ಷ ಏಕದಿನ ವಿಶ್ವ ಕಪ್​ ಕೂಡ ನಡೆಯಲಿದೆ. ಈ ಎಲ್ಲ ಕಾರಣದಿಂದ ರಾಹುಲ್​ಗೆ ​ಈ ಸರಣಿಯಿಂದಲೇ ಕೀಪಿಂಗ್​ ಹೊಣೆ ನೀಡಿ ಅವರನ್ನು ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸುವ ಯೋಜನೆ ನಮ್ಮ ಮುಂದಿದೆ ಎಂದು ಹೆಸರು ಹೇಳಬಯಸದ ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ IND VS AUS: ಏಕದಿನ ಸರಣಿಗೂ ಸ್ಟೀವನ್​ ಸ್ಮಿತ್​ ನಾಯಕ; ಆಸೀಸ್​ ಕೋಚ್​

ಬಿಸಿಸಿಐ ಅಧಿಕಾರಿ ನೀಡಿರುವ ಈ ಮಾಹಿತಿಯಿಂದ ಕೆ.ಎಲ್​. ರಾಹುಲ್​ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಆದರೆ ರಾಹುಲ್​ ಈ ಸರಣಿಯಲ್ಲಿ ಅವಕಾಶ ಸಿಕ್ಕರೆ ಉತ್ತಮ ಪ್ರದರ್ಶನ ತೋರುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳಬೇಕಿದೆ. ಒಂದೊಮ್ಮೆ ರಾಹುಲ್​ ಇಲ್ಲಿಯೂ ಎಡವಿದರೆ ಅವರ ಬದಲು ಇಶಾನ್​ ಕಿಶನ್​ ಅಥವಾ ಸಂಜು ಸ್ಯಾಮ್ಸನ್​ ಮುಂದಿನ ಸರಣಿಗಳಲ್ಲಿ ಟೀಮ್​ ಇಂಡಿಯಾ ಪರ ಕಾಣಿಸಿಕೊಂಡರು ಅಚ್ಚರಿಯಿಲ್ಲ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ ಶುಕ್ರವಾರ (ಮಾರ್ಚ್ 17) ಮುಂಬಯಿಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli statue: ನ್ಯೂಯಾರ್ಕ್​ನಲ್ಲಿ ವಿರಾಟ್​ ಕೊಹ್ಲಿ ಆಳೆತ್ತರದ ಪ್ರತಿಮೆ ಅನಾವರಣ

Virat Kohli statue: ಕೊಹ್ಲಿಯ ಪ್ರತಿಮೆಯನ್ನು ಬ್ರಾಂಡ್ ಅಂಬಾಸಿಡರ್ ಆಗಿರುವ ಮ್ಯಾಟ್ರೆಸ್ ಕಂಪನಿಯೊಂದರ ಮಾರ್ಕೆಟಿಂಗ್ ಅಭಿಯಾನದ ಭಾಗವಾಗಿ ನಿರ್ಮಿಸಲಾಗಿದೆ. ಹಾಸಿಗೆಗಳಿಂದ ಒದಗಿಸಲಾದ ಸೌಕರ್ಯವನ್ನು ಹೈಲೈಟ್ ಮಾಡಲು ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

VISTARANEWS.COM


on

Virat Kohli statue
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟರ್​, ಹಲವು ದಾಖಲೆಗಳ ಸರದಾರ ವಿರಾಟ್ ಕೊಹ್ಲಿ(Virat Kohli) ಅವರ ಆಳೆತ್ತರದ ಪ್ರತಿಮೆಯೊಂದು(Virat Kohli statue) ಅಮೆರಿಕದ ನ್ಯೂಯಾರ್ಕ್​ನಲ್ಲಿ ನಿರ್ಮಿಸಲಾಗಿದೆ. ನ್ಯೂಯಾರ್ಕ್​ನ ಪ್ರಸಿದ್ದ ಟೈಮ್ಸ್ ಸ್ಕ್ಯಾರ್ ನಲ್ಲಿ ಕೊಹ್ಲಿಯ ಈ ಪ್ರತಿಮೆಯನ್ನು ನಿಲ್ಲಿಸಲಾಗಿದೆ.

2028 ರಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೇ ಕಾರಣದಿಂದ ಕೊಹ್ಲಿಯ ಪ್ರತಿಮೆಯನ್ನು ಬ್ರಾಂಡ್ ಅಂಬಾಸಿಡರ್ ಆಗಿರುವ ಮ್ಯಾಟ್ರೆಸ್ ಕಂಪನಿಯೊಂದರ ಮಾರ್ಕೆಟಿಂಗ್ ಅಭಿಯಾನದ ಭಾಗವಾಗಿ ನಿರ್ಮಿಸಲಾಗಿದೆ. ಹಾಸಿಗೆಗಳಿಂದ ಒದಗಿಸಲಾದ ಸೌಕರ್ಯವನ್ನು ಹೈಲೈಟ್ ಮಾಡಲು ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ವಿಡಿಯೋವನ್ನು ಮ್ಯಾಟ್ರೆಸ್ ಕಂಪನಿ ಹಂಚಿಕೊಂಡಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.ಆಡಿದ 6 ಪಂದ್ಯಗಳ ಪೈಲಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಸೋಮವಾರ ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಪುರುಷರ ಟಿ 20 ವಿಶ್ವಕಪ್​​ನ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಸೂಪರ್ 8 ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ಔಟಾಗಿರುವುದು ಮಂಡೆ ಬಿಸಿಗೆ ಕಾರಣವಾಗಿದೆ. ಐದು ಎಸೆತಗಳನ್ನು ಬಳಸಿಕೊಂಡು ರನ್ ಬಾರಿಸದೇ ನಿರ್ಗಮಿಸಿದರು.

ಇದನ್ನೂ ಓದಿ Virat Kohli : ವಿರಾಟ್​​ ಕೊಹ್ಲಿ ಕತೆ ಮುಗೀತು… ಮತ್ತೆ ಶೂನ್ಯಕ್ಕೆ ಔಟಾದ ಸ್ಟಾರ್​ ಬ್ಯಾಟರ್​!

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.

Continue Reading

ಪ್ರಮುಖ ಸುದ್ದಿ

T20 World Cup : ಆಸ್ಟ್ರೇಲಿಯಾ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಸೇಡು ತೀರಿಸಿಕೊಂಡ ಭಾರತ

T20 World Cup : ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತನ್ನ ಪಾಲಿನ 20 ಒವರ್​ಗಳಲ್ಲಿ 7 ವಿಕೆಟ್​ಗೆ 181 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

Rohit Sharma
Koo

ಸೇಂಟ್​ ಲೂಸಿಯಾ: ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಭಾರತ ತಂಡ ಟಿ20 ವಿಶ್ವ ಕಪ್​ನ 2024ನೇ (T20 World Cup) ಆವೃತ್ತಿಯ ಸೂಪರ್ 8 ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ದ (IND vs AUS) 24 ರನ್​ಗಳ ಗೆಲುವು ದಾಖಲಿಸಿತು. ಈ ಮೂಲಕ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್ ಹಾಗೂ 2023ರ ಏಕ ದಿನ ವಿಶ್ವ ಕಪ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ತಂಡದ ಟಿ 20 ವಿಶ್ವ ಕಪ್​ ಸೆಮಿಫೈನಲ್ ಹಾದಿ ಕಠಿಣಗೊಂಡಿತು. ಇದೇ ವೇಳೆ ಟಿ20 ವಿಶ್ವ ಕಪ್​​ನಲ್ಲಿ ಭಾರತ ತಂಡದ ಅಜೇಯ ಓಟ ಮುಂದುವರಿಯಿತು. ಸೂಪರ್​ 8 ಹಂತದಲ್ಲಿ ಗುಂಪು ಎ ಯಿಂದ ಒಟ್ಟು ಮೂರು 3 ಗೆಲುವಿನೊಂದಿಗೆ 6 ಅಂಕಗಳ ಸಮೇತ ಸೆಮಿಫೈನಲ್​​ಗೆ ಪ್ರವೇಶ ಪಡೆಯಿತು.

ಇಲ್ಲಿನ ಡ್ಯಾರೆನ್​ ಸಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತನ್ನ ಪಾಲಿನ 20 ಒವರ್​ಗಳಲ್ಲಿ 7 ವಿಕೆಟ್​ಗೆ 181 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಗುರಿ ಬೆನ್ನಟ್ಟಲು ಹೊರಟ ಆಸ್ಟ್ರೇಲಿಯಾ 6 ರನ್​ಗೆ ಮೊದಲ ವಿಕೆಟ್​ ಕಳೆದುಕೊಂಡಿತು. ಡೇವಿಡ್​ ವಾರ್ನರ್​ 6 ರನ್ ಬಾರಿಸಿ ಅರ್ಶ್​ದೀಪ್​ಗೆ ವಿಕೆಟ್​ ಒಪ್ಪಿಸಿದರು. ಆದರೆ, ನಂತರದಲ್ಲಿ ಟ್ರಾವಿಸ್​ ಹೆಡ್​ (76ರನ್​ ) ಹಾಗೂ ಮಿಚೆಲ್ ಮಾರ್ಷ್​ (37 ರನ್​) ರನ್ ವೇಗ ಕುಸಿಯದಂತೆ ನೋಡಿಕೊಂಡರು. ಟ್ರಾವಿಸ್ ಹೆಡ್​ ಹೋರಾಟ ನಡೆಸಿದ ಭಾರತ ತಂಡದಿಂದ ಗೆಲುವು ಕಸಿಯಲು ಯತ್ನಿಸಿದರು. ಅದರೆ, ಕುಲ್ದೀಪ್​ ಯಾದವ್​ (2 ವಿಕೆಟ್​), ಅರ್ಶ್​ದೀಪ್​ ಸಿಂಗ್​ (3 ವಿಕೆಟ್​) ಆಸೀಸ್ ತಂಡದ ಓಟಕ್ಕೆ ತಡೆಯೊಡ್ಡಿತು. ಮ್ಯಾಕ್ಸ್​ವೆಲ್​ 20 ರನ್ ಬಾರಿಸಿದರೆ, ಟಿಮ್ ಡೇವಿಡ್​ 15 ರನ್ ಬಾರಿಸಿದರು.

ಭಾರತದ ಉತ್ತಮ ಬ್ಯಾಟಿಂಗ್​

ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆಘಾತ ಕೊಟ್ಟಿದ್ದು ವಿರಾಟ್ ಕೊಹ್ಲಿ. ಐದು ಎಸೆತಗಳನ್ನು ಎದುರಿಸಿದ ಅವರು ಶೂನ್ಯಕ್ಕೆ ಔಟಾಗಿ ಬೇಸರ ಮೂಡಿಸಿದರು. ಆದರೆ, ಇನ್ನೊಂದು ಬದಿಯಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ ರನ್ ಪೇರಿಸುತ್ತಲೇ ಹೋದರು. ಭಾರತ ಕೇವಲ 29 ಎಸೆತಗಳಲ್ಲಿ 50 ರನ್ ಬಾರಿಸಿದರೆ ಬಳಿಕ ರೋಹಿತ್ ಶರ್ಮಾ 19 ಎಸೆತಕ್ಕೆ ಅರ್ಧ ಶತಕ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ರಿಷಭ್​ ಪಂತ್​ 14 ಎಸೆತಕ್ಕೆ 15 ರನ್ ಬಾರಿಸಿದರು. ಆದರೆ, ನಂತರ ಆಡಲು ಬಂದ ಸೂರ್ಯಕುಮಾರ್​ ಯಾದವ್​ ರೋಹಿತ್ ಶರ್ಮಾಗೆ ಉತ್ತಮ ಬೆಂಬಲ ಕೊಟ್ಟರು. ಆದರೆ, ಅವರು 16 ಎಸೆತಕ್ಕೆ 36 ರನ್ ಬಾರಿಸಿ ಔಟಾದರು.

ಇದನ್ನೂ ಓದಿ: Rohit Sharma : ಆಸ್ಟ್ರೇಲಿಯಾದ ವೇಗಿ ​ ಸ್ಟಾರ್ಕ್​ ಬೆಂಡೆತ್ತಿದ ರೋಹಿತ್​; ಒಂದೇ ಓವರ್​​ನಲ್ಲಿ 29 ರನ್​

ಸೂರ್ಯ ಔಟಾಗುತ್ತಿದ್ದಂತೆ ಭಾರತದ ಸ್ಕೋರ್ ಗಳಿಕೆ ನಿಧಾನಗೊಂಡಿತು. ಆದಾಗ್ಯೂ ಶಿವಂ ದುಬೆ 1 ಸಿಕ್ಸರ್ ಹಾಗೂ 2 ಫೋರ್ ಸಮೇತ 28 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಔಟಾಗದೇ 17 ಎಸೆತಕ್ಕೆ 27 ರನ್ ಬಾರಿಸಿದರು. ರವೀಂದ್ರೆ ಜಡೇಜಾ 5 ಎಸೆತಕ್ಕೆ 9 ರನ್ ಬಾರಿಸಿದರು.

Continue Reading

ಪ್ರಮುಖ ಸುದ್ದಿ

Rohit Sharma : ಆಸ್ಟ್ರೇಲಿಯಾದ ವೇಗಿ ​ ಸ್ಟಾರ್ಕ್​ ಬೆಂಡೆತ್ತಿದ ರೋಹಿತ್​; ಒಂದೇ ಓವರ್​​ನಲ್ಲಿ 29 ರನ್​

Rohit Sharma: ಪಂದ್ಯಾವಳಿಯಲ್ಲಿ ಕಡಿಮೆ ಸ್ಕೋರ್​ಗಳನ್ನು ಬಾರಿಸಿದ್ದ ರೋಹಿತ್ ಶರ್ಮಾ, ಬ್ಯಾಟ್​ ಮೂಲಕ ಅಬ್ಬರಿಸಿ ತಮ್ಮ ಟೀಕಾಕಾರರನ್ನು ಮೌನವಾಗಿಸಿದರು. ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭದಿಂದಲೂ ಆಸ್ಟ್ರೇಲಿಯಾದ ಬೌಲರ್​ಗಳನ್ನು ಹಿಮ್ಮೆಟ್ಟಿಸಿದರು.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸೇಂಟ್ ಲೂಸಿಯಾದ ಗ್ರೋಸ್ ಐಸ್ಲೆಟ್​​ನಲ್ಲಿರುವ ಡೇರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ತಂಡಗಳ ನಡುವಿನ ಪಂದ್ಯಾವಳಿಯ ಸೂಪರ್ 8 ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರೋಹಿತ್​ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 41 ಎಸೆತಕ್ಕೆ 92 ರನ್ ಬಾರಿಸಿ ಔಟಾದರು. ಈ ಮೂಲಕ ಅವರು ಮೊಟ್ಟ ಮೊದಲ ಟಿ2 ವಿಶ್ವ ಕಪ್​ ಶತಕದ ಅವಕಾಶ ನಷ್ಟ ಮಾಡಿಕೊಂಡರು.

ಪಂದ್ಯಾವಳಿಯಲ್ಲಿ ಕಡಿಮೆ ಸ್ಕೋರ್​ಗಳನ್ನು ಬಾರಿಸಿದ್ದ ರೋಹಿತ್ ಶರ್ಮಾ, ಬ್ಯಾಟ್​ ಮೂಲಕ ಅಬ್ಬರಿಸಿ ತಮ್ಮ ಟೀಕಾಕಾರರನ್ನು ಮೌನವಾಗಿಸಿದರು. ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭದಿಂದಲೂ ಆಸ್ಟ್ರೇಲಿಯಾದ ಬೌಲರ್​ಗಳನ್ನು ಹಿಮ್ಮೆಟ್ಟಿಸಿದರು.

ರೋಹಿತ್ ಶರ್ಮಾ ಮೂರನೇ ಓವರ್​ ಎಸೆತ ಮಿಚೆಲ್ ಸ್ಟಾರ್ಕ್ ಅವರನ್ನು ಮೌನವಾಗಿಸಿದರು. ಒಂದೇ ಓವರ್​ನಲ್ಲಿ 29 ರನ್ ಬಾರಿಸಿದರು. ಭಾರತದ ನಾಯಕ ಕವರ್ ಏರಿಯಾ ಮೇಲೆ ಬೃಹತ್ ಸಿಕ್ಸರ್ ಬಾರಿಸಿದರು. ಎರಡನೇ ಎಸೆತದಲ್ಲಿ ರೋಹಿತ್ ಶರ್ಮಾ ಕೂಡ ಇದೇ ರೀತಿಯ ಶಾಟ್ ಬಾರಿಸಿದರು. ಎರಡು ಸಿಕ್ಸರ್​ಗಳ ನಂತರ ಒಂದು ಎಸೆತ ನಷ್ಟ ಮಾಡಿಕೊಂಡರು.

ರೋಹಿತ್ ಶರ್ಮಾ ಅಲ್ಲಿಗೆ ನಿಲ್ಲಲಿಲ್ಲ . ನಾಲ್ಕನೇ ಎಸೆತಕ್ಕೆ ಮತ್ತೊಂದು ಬೃಹತ್​ ಸಿಕ್ಸರ್ ಬಾರಿಸಿದರು. ಅದು 96 ಮೀಟರ್​ ಸಿಕ್ಸರ್. ಓವರ್ ನ ಕೊನೆಯ ಎಸೆತದಲ್ಲಿ ಮಿಚೆಲ್ ಸ್ಟಾರ್ಕ್ ಅವರು ಫುಲ್ ಟಾಸ್ ಎಸೆದರು. ರೋಹಿತ್ ಶರ್ಮಾ ಅವರು ಬೃಹತ್ ಸಿಕ್ಸರ್ ಗಾಗಿ ಥರ್ಡ್​ ಮ್ಯಾನ್ ಕಡೆ ಹಾರಿಸಿದರು. ಅಲ್ಲಿಗೆ ಒಂದೇ ಓವರ್​ನಲ್ಲಿ 29 ರನ್​ ಬಾರಿಸಿದರು.

205 ರನ್ ಬಾರಿಸಿದ ಭಾರತ

ಇಲ್ಲಿನ ಡ್ಯಾರೆನ್​ ಸಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ವಿರಾಟ್​ ಕೊಹ್ಲಿ ಶೂನ್ಯಕ್ಕೆ ಔಟಾಗಿರುವ ಹೊರತಾಗಿಯೂ ಭಾರತ ತಂಡ ದೊಡ್ಡ ಮೊತ್ತ ಪೇರಿಸಿದೆ.

ಇದನ್ನೂ ಓದಿ: Virat Kohli : ವಿರಾಟ್​​ ಕೊಹ್ಲಿ ಕತೆ ಮುಗೀತು… ಮತ್ತೆ ಶೂನ್ಯಕ್ಕೆ ಔಟಾದ ಸ್ಟಾರ್​ ಬ್ಯಾಟರ್​!

ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆಘಾತ ಕೊಟ್ಟಿದ್ದು ವಿರಾಟ್ ಕೊಹ್ಲಿ. ಐದು ಎಸೆತಗಳನ್ನು ಎದುರಿಸಿದ ಅವರು ಶೂನ್ಯಕ್ಕೆ ಔಟಾಗಿ ಬೇಸರ ಮೂಡಿಸಿದರು. ಆದರೆ, ಇನ್ನೊಂದು ಬದಿಯಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ ರನ್ ಪೇರಿಸುತ್ತಲೇ ಹೋದರು. ಭಾರತ ಕೇವಲ 29 ಎಸೆತಗಳಲ್ಲಿ 50 ರನ್ ಬಾರಿಸಿದರೆ ಬಳಿಕ ರೋಹಿತ್ ಶರ್ಮಾ 19 ಎಸೆತಕ್ಕೆ ಅರ್ಧ ಶತಕ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ರಿಷಭ್​ ಪಂತ್​ 14 ಎಸೆತಕ್ಕೆ 15 ರನ್ ಬಾರಿಸಿದರು. ಆದರೆ, ನಂತರ ಆಡಲು ಬಂದ ಸೂರ್ಯಕುಮಾರ್​ ಯಾದವ್​ ರೋಹಿತ್ ಶರ್ಮಾಗೆ ಉತ್ತಮ ಬೆಂಬಲ ಕೊಟ್ಟರು. ಆದರೆ, ಅವರು 16 ಎಸೆತಕ್ಕೆ 36 ರನ್ ಬಾರಿಸಿ ಔಟಾದರು.

ಸೂರ್ಯ ಔಟಾಗುತ್ತಿದ್ದಂತೆ ಭಾರತದ ಸ್ಕೋರ್ ಗಳಿಕೆ ನಿಧಾನಗೊಂಡಿತು. ಆದಾಗ್ಯೂ ಶಿವಂ ದುಬೆ 1 ಸಿಕ್ಸರ್ ಹಾಗೂ 2 ಫೋರ್ ಸಮೇತ 28 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಔಟಾಗದೇ 17 ಎಸೆತಕ್ಕೆ 27 ರನ್ ಬಾರಿಸಿದರು. ರವೀಂದ್ರೆ ಜಡೇಜಾ 5 ಎಸೆತಕ್ಕೆ 9 ರನ್ ಬಾರಿಸಿದರು.

Continue Reading

ಪ್ರಮುಖ ಸುದ್ದಿ

IND vs AUS : ಟಿ20 ವಿಶ್ವ ಕಪ್​ 2024ರಲ್ಲಿ ಗರಿಷ್ಠ ಸ್ಕೋರ್ ಬಾರಿಸಿದ ಭಾರತ ತಂಡ; 5 ವಿಕೆಟ್​ಗೆ 205

IND vs AUS :ಇಲ್ಲಿನ ಡ್ಯಾರೆನ್​ ಸಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ವಿರಾಟ್​ ಕೊಹ್ಲಿ ಶೂನ್ಯಕ್ಕೆ ಔಟಾಗಿರುವ ಹೊರತಾಗಿಯೂ ಭಾರತ ತಂಡ ದೊಡ್ಡ ಮೊತ್ತ ಪೇರಿಸಿದೆ.

VISTARANEWS.COM


on

IND vs AUS
Koo

ಸೇಂಟ್​ ಲೂಸಿಯಾ: ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಭಾರತ ತಂಡ ಟಿ20 ವಿಶ್ವ ಕಪ್​ನ 2024ನೇ ಆವೃತ್ತಿಯ ಸೂಪರ್ 8 ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ದ (IND vs AUS) ಮೊದಲು ಬ್ಯಾಟ್​ ಮಾಡಿ 5 ವಿಕೆಟ್ ನಷ್ಟಕ್ಕೆ 205 ರನ್ ಬಾರಿಸಿದೆ. ಇದು ಹಾಲಿ ವಿಶ್ವ ಕಪ್​ನಲ್ಲಿ ತಂಡವೊಂದು ಬಾರಿಸಿದ ಗರಿಷ್ಠ ಸ್ಕೋರ್​ ಆಗಿದೆ. ಈ ಸಾಧನೆ ಯನ್ನು ಮೀರಬೇಕಾದರೆ ಆಸ್ಟ್ರೇಲಿಯಾ ತಂಡ ಈ ಗುರಿಯನ್ನು ಬೆನ್ನಟ್ಟಬೇಕಾಗುತ್ತದೆ. ಇದಕ್ಕಿಂತ ಹಿಂದೆ ಬಿ ಗುಂಪಿನ ಲೀಗ್ ಹಂತದ ಪಂದ್ಯದಲ್ಲಿ ಇಂಗ್ಲೆಂಡ್​ ತಂಡದ ವಿರುದ್ಧ ಆಸ್ಟ್ರೇಲಿಯಾ 201 ರನ್ ಬಾರಿಸಿ ಗೆಲುವು ಸಾಧಿಸಿತ್ತು.

ಇಲ್ಲಿನ ಡ್ಯಾರೆನ್​ ಸಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ವಿರಾಟ್​ ಕೊಹ್ಲಿ ಶೂನ್ಯಕ್ಕೆ ಔಟಾಗಿರುವ ಹೊರತಾಗಿಯೂ ಭಾರತ ತಂಡ ದೊಡ್ಡ ಮೊತ್ತ ಪೇರಿಸಿದೆ.

ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆಘಾತ ಕೊಟ್ಟಿದ್ದು ವಿರಾಟ್ ಕೊಹ್ಲಿ. ಐದು ಎಸೆತಗಳನ್ನು ಎದುರಿಸಿದ ಅವರು ಶೂನ್ಯಕ್ಕೆ ಔಟಾಗಿ ಬೇಸರ ಮೂಡಿಸಿದರು. ಆದರೆ, ಇನ್ನೊಂದು ಬದಿಯಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ ರನ್ ಪೇರಿಸುತ್ತಲೇ ಹೋದರು. ಭಾರತ ಕೇವಲ 29 ಎಸೆತಗಳಲ್ಲಿ 50 ರನ್ ಬಾರಿಸಿದರೆ ಬಳಿಕ ರೋಹಿತ್ ಶರ್ಮಾ 19 ಎಸೆತಕ್ಕೆ ಅರ್ಧ ಶತಕ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ರಿಷಭ್​ ಪಂತ್​ 14 ಎಸೆತಕ್ಕೆ 15 ರನ್ ಬಾರಿಸಿದರು. ಆದರೆ, ನಂತರ ಆಡಲು ಬಂದ ಸೂರ್ಯಕುಮಾರ್​ ಯಾದವ್​ ರೋಹಿತ್ ಶರ್ಮಾಗೆ ಉತ್ತಮ ಬೆಂಬಲ ಕೊಟ್ಟರು. ಆದರೆ, ಅವರು 16 ಎಸೆತಕ್ಕೆ 36 ರನ್ ಬಾರಿಸಿ ಔಟಾದರು.

ಸೂರ್ಯ ಔಟಾಗುತ್ತಿದ್ದಂತೆ ಭಾರತದ ಸ್ಕೋರ್ ಗಳಿಕೆ ನಿಧಾನಗೊಂಡಿತು. ಆದಾಗ್ಯೂ ಶಿವಂ ದುಬೆ 1 ಸಿಕ್ಸರ್ ಹಾಗೂ 2 ಫೋರ್ ಸಮೇತ 28 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಔಟಾಗದೇ 17 ಎಸೆತಕ್ಕೆ 27 ರನ್ ಬಾರಿಸಿದರು. ರವೀಂದ್ರೆ ಜಡೇಜಾ 5 ಎಸೆತಕ್ಕೆ 9 ರನ್ ಬಾರಿಸಿದರು.

ಇದನ್ನೂ ಓದಿ: Virat Kohli : ವಿರಾಟ್​​ ಕೊಹ್ಲಿ ಕತೆ ಮುಗೀತು… ಮತ್ತೆ ಶೂನ್ಯಕ್ಕೆ ಔಟಾದ ಸ್ಟಾರ್​ ಬ್ಯಾಟರ್​!

Continue Reading
Advertisement
Britannia Industries closure
ದೇಶ10 mins ago

Britannia Industries closure: ಕೋಲ್ಕತ್ತಾದಲ್ಲಿ ಉತ್ಪಾದನಾ ಘಟಕ ಮುಚ್ಚಿದ ಬಿಟ್ರಾನಿಯಾ

Virat Kohli statue
ಕ್ರೀಡೆ22 mins ago

Virat Kohli statue: ನ್ಯೂಯಾರ್ಕ್​ನಲ್ಲಿ ವಿರಾಟ್​ ಕೊಹ್ಲಿ ಆಳೆತ್ತರದ ಪ್ರತಿಮೆ ಅನಾವರಣ

Hemavati Link Canal
ಪ್ರಮುಖ ಸುದ್ದಿ38 mins ago

Hemavati Link Canal: ಹೇಮಾವತಿ‌ ಲಿಂಕ್‌ ಕೆನಾಲ್ ವಿರೋಧಿಸಿ ಇಂದು ತುಮಕೂರು ಬಂದ್

Rishab Shetty
ಸಿನಿಮಾ51 mins ago

Rishab Shetty: ಕುಂದಾಪುರಕ್ಕೆ ಆಗಮಿಸಿದ ʼಕಲ್ಕಿʼಯ ಬುಜ್ಜಿ; ಪ್ರಭಾಸ್‌ ಕಾರು ರೈಡ್‌ ಮಾಡಿದ ರಿಷಬ್‌ ಶೆಟ್ಟಿ ಹೇಳಿದ್ದೇನು?

Renuka swamy Murder case actor darshan
ಕ್ರೈಂ1 hour ago

Actor Darshan: ಸಿಗದೇ ಹೋದ ರೇಣುಕಾ ಸ್ವಾಮಿ ಮೊಬೈಲ್, ಹೊಸ ಸಿಮ್‌ ಖರೀದಿಸಿದ ಪೊಲೀಸರು

ನನ್ನ ದೇಶ ನನ್ನ ದನಿ ಅಂಕಣ indira gandhi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: “ನೀವು ಭಾರತೀಯರೋ, ರಾಷ್ಟ್ರೀಯರೋ?”

karnataka Weather Forecast
ಮಳೆ2 hours ago

Karnataka Weather : ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಸೇರಿ ವಿವಿಧೆಡೆ ಮಳೆ ಅಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Seeds For Men Sexual Power
ಆರೋಗ್ಯ3 hours ago

Seeds For Men Sexual Power: ಪುರುಷರ ಲೈಂಗಿಕ ಶಕ್ತಿ ಹೆಚ್ಚಳಕ್ಕೆ ಈ ಬೀಜಗಳು ಪರಿಣಾಮಕಾರಿ!

Ram Mandir
Latest3 hours ago

Ayodhya Temple: ಕಡಿಮೆಯಾದ ಭಕ್ತರ ದಟ್ಟಣೆ; ಅಯೋಧ್ಯೆಗೆ ಭೇಟಿ ನೀಡಲು ಇದು ಸಕಾಲ

Monsoon Hair care
ಆರೋಗ್ಯ4 hours ago

Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌