ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ(IND VS AUS) ವಿರುದ್ಧದ ಬಹುನಿರೀಕ್ಷಿತ ಬಾರ್ಡರ್-ಗವಾಸ್ಕರ್(border gavaskar trophy) ಟೆಸ್ಟ್ ಸರಣಿಗೆ ಚಾಲನೆ ದೊರೆತಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಶ್ರೀಕರ್ ಭರತ್(KS Bharat) ಮತ್ತು ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.
ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅವರಿಂದ ಕ್ಯಾಪ್ ಪಡೆದ ಶ್ರೀಕರ್ ಭರತ್ ಅವರು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು. ಇದೇ ಖುಷಿಯಲ್ಲಿ ತಾಯಿಯನ್ನು ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಮಗ ಟೀಮ್ ಇಂಡಿಯಾ ಪರ ಆಡುವ ಅವಕಾಶ ಸಿಗುತ್ತಿದ್ದಂತೆ ಭರತ್ ತಾಯಿಯೂ ಮಗನ ಕನಸು ಈಡೇರಿತು ಎಂದು ಖಷಿಪಟ್ಟು ಪ್ರೀತಿಯ ಅಪ್ಪುಗೆ ಮೂಲಕ ಶುಭ ಹಾರೈಸಿದ್ದಾರೆ.
ಶ್ರೀಕರ್ ಭರತ್ ಅವರು ತಮ್ಮ ತಾಯಿಯನ್ನು ಅಪ್ಪಿಕೊಂಡ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೊ ಕಂಡ ಹಲವು ನೆಟ್ಟಿಗರು ಭರತ್ ಅವರಿಗೆ ಇದೊಂದು ಸ್ಮರಣೀಯ ದಿನವಾಗಿದೆ ಎಂದಿದ್ದಾರೆ. ಇನ್ನು ಕೆಲವರು ಭರತ್, ಟೀಮ್ ಇಂಡಿಯಾ ಪರ ದೊಡ್ಡ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
ಇದನ್ನೂ ಓದಿ IND VS AUS: ಮೊದಲ ಟೆಸ್ಟ್; ಆಸ್ಟ್ರೇಲಿಯಾ ತಂಡಕ್ಕೆ ಆಸರೆಯಾದ ಸ್ಮಿತ್-ಲಬುಶೇನ್
ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಬದಲಿಗೆ ಅವಕಾಶ ಪಡೆದ ಶ್ರೀಕರ್ ಭರತ್ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದರೆ ಪಂತ್ ಆಗಮನದ ವರೆಗೂ ಟೀಮ್ ಇಂಡಿಯಾ ಪರ ಆಡುವ ಅವಕಾಶ ಸಿಗಲಿದೆ. ಜತೆಗೆ ಪಂತ್ ಅನುಪಸ್ಥಿಯಲ್ಲಿ ಪರ್ಯಾಯ ವಿಕೆಟ್ ಕೀಪರ್ ಆಗಿಯೂ ಮುಂದುವರಿಯುವ ಸಾಧ್ಯತೆ ಇದೆ.