IND VS AUS: ಹಣೆಗೆ ತಿಲಕ ಇಡಲು ನಿರಾಕರಿಸಿದ ಸಿರಾಜ್​, ಉಮ್ರಾನ್​ ಮಲಿಕ್, ವಿಕ್ರಮ್‌ ರಾಥೋಡ್‌​; ವಿಡಿಯೊ ವೈರಲ್​ - Vistara News

ಕ್ರಿಕೆಟ್

IND VS AUS: ಹಣೆಗೆ ತಿಲಕ ಇಡಲು ನಿರಾಕರಿಸಿದ ಸಿರಾಜ್​, ಉಮ್ರಾನ್​ ಮಲಿಕ್, ವಿಕ್ರಮ್‌ ರಾಥೋಡ್‌​; ವಿಡಿಯೊ ವೈರಲ್​

(IND VS AUS) ಮೊಹಮ್ಮದ್​ ಸಿರಾಜ್​, ಉಮ್ರಾನ್​ ಮುಲಿಕ್​ ಸೇರಿ ವಿಕ್ರಮ್‌ ರಾಥೋಡ್‌ ಹೋಟೆಲ್​​ ಸಿಬ್ಬಂದಿಗಳಿಂದ ಹಣೆಗೆ ತಿಲಕ ಇಡಲು ನಿರಾಕರಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

VISTARANEWS.COM


on

mohammed siraj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನಾಗ್ಪುರ: ಟೀಮ್​ ಇಂಡಿಯಾ ಆಸ್ಟ್ರೇಲಿಯಾ(IND VS AUS) ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಸಜ್ಜಾಗಿದೆ. ಇದರ ನಡುವೆ ಹೋಟೆಲ್‌ ಸಿಬ್ಬಂದಿಯಿಂದ ಹಣೆಗೆ ತಿಲಕ ಇಡಲು ನಿರಾಕರಿಸಿದ ಭಾರತ ತಂಡದ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌(vikram rathore), ವೇಗಿಗಳಾದ ಮೊಹಮ್ಮದ್‌ ಸಿರಾಜ್(mohammed siraj) ಹಾಗೂ ಉಮ್ರಾನ್‌ ಮಲಿಕ್‌(umran malik) ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪರ ಮತ್ತು ವಿರೋಧದ ಚರ್ಚೆಗಳು ಆರಂಭವಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯ ಮೊದಲ ಪಂದ್ಯ ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ಆರಂಭವಾಗಲಿದೆ. ಈಗಾಗಲೇ ಭಾರತ ತಂಡದ ಆಟಗಾರರು ನಾಗ್ಪುರ ತಲುಪಿದ್ದು ಅಭ್ಯಾಸ ಆರಂಭಿಸಿದ್ದಾರೆ. ಈ ಮಧ್ಯೆ ಸಿರಾಜ್​, ಉಮ್ರಾನ್​ ಮುಲಿಕ್​ ಸೇರಿ ವಿಕ್ರಮ್‌ ರಾಥೋಡ್‌ ಹೋಟೆಲ್​ಗೆ ಬಂದ ವೇಳೆ ಹಣೆಗೆ ತಿಲಕ ಇಡಲು ನಿರಾಕರಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಭಾರತ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಹೋಟೆಲ್‌ ಸಿಬ್ಬಂದಿ ಹಣೆಗೆ ತಿಲಕ ಇಟ್ಟು ಸ್ವಾಗತಿಸಿದರು. ಅದರಂತೆ ನಾಯಕ ರೋಹಿತ್‌ ಶರ್ಮಾ, ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಬಹುತೇಕ ಸದಸ್ಯರು ಹಣೆಗೆ ತಿಲಕವನ್ನು ಇಟ್ಟುಕೊಂಡರು. ಆದರೆ, ವಿಕ್ರಮ್‌ ರಾಥೋಡ್‌, ಮೊಹಮ್ಮದ್‌ ಸಿರಾಜ್‌ ಹಾಗೂ ಉಮ್ರಾನ್ ಮಲಿಕ್‌ ಅವರು ಹೋಟೆಲ್‌ ಸಿಬ್ಬಂದಿಯಿಂದ ಹಣೆಗೆ ತಿಲಕ ಇಟ್ಟುಕೊಳ್ಳಲು ನಿರಾಕರಿಸಿದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೊ ವೈರಲ್​ ಆಗುತಿದ್ದಂತೆ ಕೆಲ ನೆಟ್ಟಿಗರು “ಧರ್ಮದ ಅನುಸಾರವಾಗಿ ಮೊಹಮ್ಮದ್‌ ಸಿರಾಜ್‌ ಹಾಗೂ ಉಮ್ರಾನ್‌ ಮಲಿಕ್‌ ತಿಲಕ ಇಡುವುದನ್ನು ನಿರಾಕರಿದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್​ ಮತ್ತು ಸಹಾಯಕ ಸಿಬ್ಬಂದಿ ತಿಲಕ ಇಡುವುದನ್ನು ಏಕೆ ನಿರಾಕರಿಸಿದ್ದಾರೆ. ಇದು ಭಾರತೀಯ ಸಂಸ್ಕೃತಿಗೆ ಮಾಡಿದ ಅವಮಾನ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಕೆಲವರು ಭಾರತವನ್ನು ಪ್ರತಿನಿಧಿಸುವಾಗ ಸಿರಾಜ್​, ಉಮ್ರಾನ್​ ಮಲಿಕ್​ ತಿಲಕ ಇಡುವುದರಲ್ಲಿ ಏನು ತಪ್ಪು ಎಂದು ಪ್ರಶ್ನಿಸಿದ್ದಾರೆ.

ಹಳೆಯ ವಿಡಿಯೊ

ಇದು ಹಳೆಯ ವೀಡಿಯೊದಂತೆ ಕಾಣಿಸುತ್ತಿದೆ. ಏಕೆಂದರೆ ಉಮ್ರಾನ್ ಮಲಿಕ್ ಆಸ್ಟ್ರೇಲಿಯಾ ಸರಣಿಯ ಟೆಸ್ಟ್ ತಂಡದ ಭಾಗವಾಗಿಲ್ಲ. ಇದು ಇತ್ತೀಚೆಗೆ ತವರಿನಲ್ಲಿ ನಡೆದ ಶ್ರೀಲಂಕಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧದ ಏಕದಿನ ಸರಣಿಯ ವೇಳೆ ನಡೆದ ಘಟನೆ ಎಂದು ಹೇಳಲಾಗಿದೆ. ದರ್ಮದ ಕಿಚ್ಚು ಹಚ್ಚುವ ಸಲುವಾಗಿ ಈ ವಿಡಿಯೊವನ್ನು ಆಸೀಸ್​ ಟೆಸ್ಟ್​ ಸರಣಿಯ ಸಂದರ್ಭದಲ್ಲಿ ಬಳಸಿಕೊಂಡು ಕೆಲ ನೆಟ್ಟಿಗರು ಅನಾವಶ್ಯಕವಾಗಿ ಈ ವಿಡಿಯೊವನ್ನು ಶೆರ್​ ಮಾಡುವ ಮೂಲಕ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

VISTARANEWS.COM


on

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಪಂದ್ಯದ ನಡುವೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಕುಳಿತಿದ್ದ ಪರಾಗ್ ‘ವೇಪಿಂಗ್’ (ಇ-ಸಿಗರೇಟ್) ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದಲ್ಲಿ 2019 ರಿಂದಲೇ ಇ-ಸಿಗರೇಟ್ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕವಾಗಿ ಮತ್ತು ಕ್ರೀಡಾಂಗಣದ ಶಿಸ್ತು ಉಲ್ಲಂಘಿಸಿ ಈ ರೀತಿ ನಡೆದುಕೊಂಡಿರುವುದು ಈಗ ಅವರಿಗೆ ಕಾನೂನು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದ

ಈ ಜವಾಬ್ದಾರಿರಹಿತ ವರ್ತನೆಯಿಂದಾಗಿ ರಿಯಾನ್ ಪರಾಗ್ ಅವರಿಗೆ ಭಾರಿ ದಂಡ ಅಥವಾ ಪಂದ್ಯಗಳಿಂದ ನಿಷೇಧ ಹೇರುವ ಭೀತಿ ಎದುರಾಗಿದೆ. ಭಾರತೀಯ ಕಾನೂನಿನ ಪ್ರಕಾರ ಇ-ಸಿಗರೇಟ್ ಬಳಕೆಯ ಮೊದಲ ಅಪರಾಧಕ್ಕೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ₹1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಇದರ ಜೊತೆಗೆ ಬಿಸಿಸಿಐ (BCCI) ಕೂಡ ಕ್ರೀಡಾ ಶಿಸ್ತಿನ ಉಲ್ಲಂಘನೆಗಾಗಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಯುವಕರಿಗೆ ಮಾದರಿಯಾಗಬೇಕಾದ ಆಟಗಾರನ ಈ ವರ್ತನೆಯು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಹಾಗೂ ಐಪಿಎಲ್ ಆಡಳಿತ ಮಂಡಳಿಗೆ ಭಾರಿ ಮುಜುಗರ ತಂದಿದೆ.

Continue Reading

ಕ್ರೀಡೆ

ಕಿಂಗ್ ಕೊಹ್ಲಿಗೆ ಟಕ್ಕರ್ ಕೊಟ್ಟ ಯುವ ಕಿಡಿ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಹಿಂದಿಕ್ಕಿದ ವೈಭವ್ ಸೂರ್ಯವಂಶಿ!

VISTARANEWS.COM


on

ಐಪಿಎಲ್ 2026ರ ಪ್ಲೇಆಫ್‌ ಹಂತ ಹತ್ತಿರವಾಗುತ್ತಿದ್ದಂತೆ ಆರೆಂಜ್ ಕ್ಯಾಪ್‌ಗಾಗಿ ದಿಗ್ಗಜ ಆಟಗಾರರ ನಡುವೆ ಭಾರಿ ಪೈಪೋಟಿ ಶುರುವಾಗಿದೆ. ಈ ರೇಸ್‌ನಲ್ಲಿ ರಾಜಸ್ತಾನ ರಾಯಲ್ಸ್‌ನ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರು ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಅವರನ್ನೇ ಹಿಂದಿಕ್ಕಿ ಸದ್ದು ಮಾಡುತ್ತಿದ್ದಾರೆ. ಹೈದ್ರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ 12 ಸಿಕ್ಸರ್‌ಗಳ ನೆರವಿನಿಂದ ಶತಕ ಸಿಡಿಸಿದ ಸೂರ್ಯವಂಶಿ, ಸದ್ಯ 357 ರನ್‌ಗಳೊಂದಿಗೆ ರೇಸ್‌ನಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಇತ್ತ ಎಂಟು ಪಂದ್ಯಗಳಿಂದ 351 ರನ್ ಗಳಿಸಿರುವ ಕಿಂಗ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್ ತಂಡದ ಅಭಿಷೇಕ್ ಶರ್ಮಾ 380 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಆರೆಂಜ್ ಕ್ಯಾಪ್ ಧರಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ 358 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಅವರಿಗಿಂತ ಕೇವಲ ಒಂದು ರನ್ ಕಡಿಮೆ (357 ರನ್) ಹೊಂದಿರುವ ವೈಭವ್ ಸೂರ್ಯವಂಶಿ ಮೂರನೇ ಸ್ಥಾನದಲ್ಲಿದ್ದಾರೆ. 234.86ರ ಭೀಕರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಸೂರ್ಯವಂಶಿ ಅವರ ಆಟ ನೋಡಲು ಅಭಿಮಾನಿಗಳು ಕ್ರೀಡಾಂಗಣಕ್ಕೆ ಲಗ್ಗೆ ಇಡುತ್ತಿದ್ದಾರೆ. ಹೆನ್ರಿಚ್ ಕ್ಲಾಸೆನ್ 349 ರನ್‌ಗಳೊಂದಿಗೆ ಐದನೇ ಸ್ಥಾನ ಪಡೆದಿದ್ದು, ಪೈಪೋಟಿ ತೀವ್ರಗೊಂಡಿದೆ.

ವೈಭವ್ ಸೂರ್ಯವಂಶಿ ಅವರ ಈ ಸಾಧನೆಗೆ ಅವರ ಅದ್ಭುತ ಫಾರ್ಮ್ ಕಾರಣವಾಗಿದೆ. ಗುಜರಾತ್ ಟೈಟನ್ಸ್‌ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದ ಅವರು, ಈಗ ಹೈದ್ರಾಬಾದ್ ವಿರುದ್ಧವೂ ಅಬ್ಬರಿಸಿದ್ದಾರೆ. ಮಧ್ಯದಲ್ಲಿ ಮಂಡಿ ಗಾಯದಿಂದ ಕೊಂಚ ಹಿನ್ನಡೆ ಅನುಭವಿಸಿದ್ದರೂ, ಈಗ ಚೇತರಿಸಿಕೊಂಡು ಮತ್ತೆ ಮೈದಾನಕ್ಕೆ ಮರಳಲು ಸಿದ್ಧರಾಗಿದ್ದಾರೆ. ಐಪಿಎಲ್ ಇತಿಹಾಸದ ಸ್ಟಾರ್ ಬ್ಯಾಟರ್‌ಗಳನ್ನೇ ಮೀರಿಸಿರುವ ಈ 15ರ ಹರೆಯದ ಪೋರ, ಈ ಬಾರಿ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಳ್ಳುವ ಟಾರ್ಗೆಟ್ ಹೊಂದಿದ್ದಾರೆ. ಪ್ಲೇಆಫ್‌ ವೇಳೆಗೆ ಈ ರೇಸ್ ಇನ್ನು ಎಷ್ಟು ರೋಚಕವಾಗಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

Latest

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

VISTARANEWS.COM


on

ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಜಯಗಳಿಸಿದ ನಂತರ, ಹೋಟೆಲ್‌ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಪುಟಾಣಿ ಬಾಲಕನೊಬ್ಬ ಬ್ಯಾಟ್ ಹಿಡಿದು ಬಹಳ ಹೊತ್ತು ಕಾತರದಿಂದ ಕಾಯುತ್ತಿದ್ದ. ಆದರೆ ಕೊಹ್ಲಿ ಹೋಟೆಲ್‌ಗೆ ಆಗಮಿಸಿದಾಗ ಭದ್ರತಾ ಸಿಬ್ಬಂದಿ ಬಾಲಕನನ್ನು ಹತ್ತಿರ ಹೋಗಲು ಬಿಡದೆ ತಡೆದಿದ್ದಾರೆ. ಇದರಿಂದ ಮನನೊಂದ ಬಾಲಕ ತನ್ನ ಕೈಯಲ್ಲಿದ್ದ ಬ್ಯಾಟನ್ನು ನೆಲಕ್ಕೆ ಎಸೆದು ಗಳಗಳನೇ ಅತ್ತಿದ್ದಾನೆ.

ಹೋಟೆಲ್ ಪ್ರವೇಶಿಸಿದ ವಿರಾಟ್ ಕೊಹ್ಲಿ ಸುತ್ತಲೂ ಸಿಬ್ಬಂದಿಗಳು ಬೌನ್ಸರ್‌ಗಳಂತೆ ನಿಂತು ಯಾರೂ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತಿದ್ದರು. ಈ ವೇಳೆ ಓಡೋಡಿ ಬಂದ ಬಾಲಕನನ್ನು ಸಿಬ್ಬಂದಿ ಬಲವಂತವಾಗಿ ತಡೆದಿದ್ದಾರೆ. ಇತ್ತ ಕೊಹ್ಲಿ ಕೂಡ ಬಾಲಕನತ್ತ ಗಮನ ಹರಿಸದೆ ನೇರವಾಗಿ ಮುಂದೆ ಸಾಗಿದ್ದಾರೆ. ತನ್ನ ನೆಚ್ಚಿನ ಕ್ರಿಕೆಟಿಗನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಬಾಲಕ ಪೋಷಕರ ಬಳಿ ತೆರಳಿ ಜೋರಾಗಿ ಅಳಲಾರಂಭಿಸಿದನು. ಪೋಷಕರು ಎಷ್ಟೇ ಸಮಾಧಾನ ಪಡಿಸಿದರೂ ಆ ಪುಟ್ಟ ಅಭಿಮಾನಿಯ ಸಿಟ್ಟು ಮತ್ತು ಬೇಸರ ಮಾತ್ರ ಕಡಿಮೆಯಾಗಲಿಲ್ಲ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. “ಕೊಹ್ಲಿ ಕನಿಷ್ಠ ಪಕ್ಷ ಆ ಮಗುವಿಗೆ ಕೈಬೀಸಿ ವಿಶ್ ಮಾಡಬೇಕಿತ್ತು, ಆಗ ಆ ಮಗುವಿನ ಮುಖದಲ್ಲಿ ನಗು ಮೂಡುತ್ತಿತ್ತು” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು, “ಕೊಹ್ಲಿಗೆ ಆ ಸಮಯದಲ್ಲಿ ಬಾಲಕ ಅವರ ಗಮನಕ್ಕೆ ಬಂದಿರಲಿಕ್ಕಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಏನೇ ಇರಲಿ, ಕ್ರಿಕೆಟ್ ತಾರೆಗಳ ಮೇಲಿರುವ ಅಭಿಮಾನವು ಕೆಲವೊಮ್ಮೆ ಇಂತಹ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುವುದು ಸಹಜ ಎಂಬ ಚರ್ಚೆಗಳು ನಡೆಯುತ್ತಿವೆ.

Continue Reading

Latest

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ RCB! ಹೇಗಿರಲಿದೆ ಹೈವೋಲ್ಟೇಜ್‌ ಮ್ಯಾಚ್‌?

VISTARANEWS.COM


on

ಇಂದು (ಏಪ್ರಿಲ್ 27) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ಮುಖಾಮುಖಿಯಾಗಲಿವೆ. ಏಪ್ರಿಲ್ 19 ರಂದು ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳಲು ಹಾಲಿ ಚಾಂಪಿಯನ್ ಆರ್‌ಸಿಬಿ ಸರ್ವಸನ್ನದ್ಧವಾಗಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ, ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿ ಭರ್ಜರಿ ಫಾರ್ಮ್‌ನಲ್ಲಿದೆ. ಆದರೆ, ಫಿಲ್ ಸಾಲ್ಟ್ ಅವರ ಗಾಯದ ಸಮಸ್ಯೆ ತಂಡಕ್ಕೆ ಸಣ್ಣ ತಲೆನೋವು ತಂದಿದ್ದು, ಅವರ ಸ್ಥಾನದಲ್ಲಿ ಜಾಕೋಬ್ ಬೆಥೆಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ತೀವ್ರ ಒತ್ತಡದಲ್ಲಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 264 ರನ್ ಗಳಿಸಿದ್ದರೂ ಸಹ, ಟಿ20 ಇತಿಹಾಸದ ದಾಖಲೆಯ ರನ್ ಚೇಸ್‌ಗೆ ಬಲಿಯಾಗಿ ಸೋಲೊಪ್ಪಿಕೊಂಡಿತ್ತು. ಕೆ.ಎಲ್ ರಾಹುಲ್ ಅವರ ಅಮೋಘ 152 ರನ್‌ಗಳ ಇನಿಂಗ್ಸ್ ಕೂಡ ತಂಡಕ್ಕೆ ಜಯ ತಂದುಕೊಡಲಿಲ್ಲ. ಸದ್ಯ ಏಳು ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ತಂಡಕ್ಕೆ, ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಲುಂಗಿ ಎನ್‌ಗಿಡಿ ಅವರ ಅನುಪಸ್ಥಿತಿ ಡೆಲ್ಲಿಯ ಬೌಲಿಂಗ್ ವಿಭಾಗಕ್ಕೆ ಹಿನ್ನಡೆಯಾಗುವ ಭೀತಿ ಎದುರಾಗಿದೆ.

ಇತಿಹಾಸದ ಅಂಕಿಅಂಶಗಳನ್ನು ಗಮನಿಸಿದರೆ ಆರ್‌ಸಿಬಿ ತಂಡವು ಡೆಲ್ಲಿ ವಿರುದ್ಧ ಸ್ಪಷ್ಟ ಪ್ರಾಬಲ್ಯ ಹೊಂದಿದೆ. ಈವರೆಗೆ ನಡೆದ 34 ಮುಖಾಮುಖಿಗಳಲ್ಲಿ ಆರ್‌ಸಿಬಿ 20 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ 13 ರಲ್ಲಿ ಮಾತ್ರ ಜಯ ಸಾಧಿಸಿದೆ. ದೆಹಲಿಯ ಮೈದಾನದಲ್ಲೂ ಆಡಿದ 11 ಪಂದ್ಯಗಳಲ್ಲಿ 7 ಬಾರಿ ಬೆಂಗಳೂರು ಜಯಭೇರಿ ಬಾರಿಸಿದೆ. ಇಂದಿನ ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದ್ದು, ಗೆಲುವಿನ ಲಯದಲ್ಲಿರುವ ರಜತ್ ಪಾಟಿದಾರ್ ಸೈನ್ಯವು ಹತಾಶ ಸ್ಥಿತಿಯಲ್ಲಿರುವ ಡೆಲ್ಲಿಯನ್ನು ಅವರದ್ದೇ ತವರಿನಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳುತ್ತದೆಯೇ ಎಂದು ಕಾದು ನೋಡಬೇಕಿದೆ.

Continue Reading
Advertisement
Latest12 minutes ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest42 minutes ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking51 minutes ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest2 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest4 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest5 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ5 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest6 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest7 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

Rakshit Shetty Richard Anthony Produce By Hombale
ಅವಿಭಾಗೀಕೃತ7 hours ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ವಿಸ್ತಾರ ನ್ಯೂಸ್-ಸದಾ ನಿಮ್ಮ ಪರ:

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌