ಸಿಡ್ನಿ: ಭಾರತ(IND VS AUS) ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಿಂದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್(pat cummins) ಹೊರಗುಳಿದಿದ್ದಾರೆ. ಹೀಗಾಗಿ ಸ್ವೀವನ್ ಸ್ಮಿತ್(Steven Smit) ತಂಡವನ್ನು ಮುನ್ನಡೆಸಲಿದ್ದಾರೆ.
ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯ ಕೊನೆಗೊಂಡ ಬೆನ್ನಲ್ಲೇ ಪ್ಯಾಟ್ ಕಮಿನ್ಸ್ ಅವರು ತುರ್ತು ಕೌಟುಂಬಿಕ ಕಾರಣದಿಂದ ತವರಿಗೆ ತೆರಳಿದ್ದರು. ಮೂರನೇ ಪಂದ್ಯದ ವೇಳೆಗೆ ಅವರು ತಂಡ ಸೇರುವುದಾಗಿ ತಿಳಿಸಿದ್ದರು. ಆದರೆ ಶುಕ್ರವಾರ(ಫೆ.24) ಅವರು ಭಾರತ ವಿರುದ್ಧದ ಮೂರನೇ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ IND VS AUS: ಕಳಪೆ ಪ್ರದರ್ಶನ ತೋರುವ ಆಟಗಾರರಿಗೆ ಉದ್ದನೆಯ ಹಗ್ಗ ನೀಡಿ; ಶಶಿ ತರೂರ್
“ಭಾರತ ವಿರುದ್ಧದ ಮೂರನೇ ಟೆಸ್ಟ್ನಿಂದ ಹೊರಗುಳಿಯಲು ನಿರ್ಧರಿಸಿದ್ದೇನೆ. ನನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ವೈದ್ಯಕೀಯ ನಿಗಾದಲ್ಲಿದ್ದಾರೆ. ಈ ಸಂದರ್ಭದಲ್ಲಿ ನಾನು ಅವರ ಜತೆಗಿರಲು ಬಯಸಿದ್ದೇನೆ. ಹೀಗಾಗಿ ನಾನು ಭಾರತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ನನ್ನ ತಂಡದ ಸಹ ಆಟಗಾರು ನನ್ನ ನಿರ್ಧಾರವನ್ನು ಬೆಂಬಲಿಸಿದಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯ ಮಾರ್ಚ್ 1ರಿಂದ ಇಂಧೋರ್ನಲ್ಲಿ ಆರಂಭವಾಗಲಿದೆ.