ಮುಂಬಯಿ: ಬಹುನಿರೀಕ್ಷಿತ ಭಾರತ ಮತ್ತು ಆಸ್ಟ್ರೇಲಿಯಾ(IND VS AUS) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಶುಕ್ರವಾರ(ಮಾರ್ಚ್ 17) ಆರಂಭಗೊಳ್ಳಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.
ಮುಂಬಯಿಯ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನ ಪಿಚ್ ಹೆಚ್ಚು ಬ್ಯಾಟಿಂಗ್ ಸ್ನೇಹಿಯಾಗಿದೆ. ಇದು ಹೊಡಿ ಬಡಿ ಆಟಕ್ಕೆ ಹೇಳಿ ಮಾಡಿಸಿದಂತಿದೆ. ಇಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 438 ರನ್ ದಾಖಲಾಗಿದೆ ಇದು ಕೂಡ ಕೇವಲ 4 ವಿಕೆಟ್ ನಷ್ಟಕ್ಕೆ. ಹೀಗಾಗಿ ಈ ಪಿಚ್ ಬ್ಯಾಟಿಂಗ್ಗೆ ಹೆಚ್ಚು ಸೂಕ್ತವಾಗಿದೆ ಎನ್ನಲಡ್ಡಿಯಿಲ್ಲ. ಭಾರತ ಇಲ್ಲಿ ಇದುವರೆಗೆ 19 ಏಕದಿನ ಪಂದ್ಯಗಳನ್ನು ಆಡಿದೆ ಇದರಲ್ಲಿ 10 ಪಂದ್ಯಗಳಲ್ಲಿ ಗೆಲುವು ಮತ್ತು 9 ರನ್ ಸೋಲು ಕಂಡಿದೆ.
ಸಂಭಾವ್ಯ ತಂಡ
ಭಾರತ: ಹಾರ್ದಿಕ್ ಪಾಂಡ್ಯ(ನಾಯಕ) ಇಶಾನ್ ಕಿಶನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್/ಯಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್
ಇದನ್ನೂ ಓದಿ IND VS AUS: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಹಲವು ದಾಖಲೆಗಳ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್ (ನಾಯಕ), ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜೈ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಜಾಂಪ.