Site icon Vistara News

IND VS AUS: ಅಹಮದಾಬಾದ್‌ ಟೆಸ್ಟ್​ನಲ್ಲಿ ವೀಕ್ಷಕ ವಿವರಣೆ ಮಾಡಲಿದ್ದಾರೆ ಪ್ರಧಾನಿ ಮೋದಿ; ವರದಿ​

IND VS AUS: PM Modi to give commentary on Ahmedabad Test; Report

IND VS AUS: PM Modi to give commentary on Ahmedabad Test; Report

ಅಹಮದಾಬಾದ್‌: ಭಾರತ ಮತ್ತು ಆಸ್ಟ್ರೇಲಿಯಾ(IND VS AUS) ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಸರಣಿಯ ಅಂತಿಮ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಟೋನಿ ಅಲ್ಬನೀಸ್‌(Anthony Albanese) ಸಾಥ್‌ ನೀಡಲಿದ್ದಾರೆ ಎಂಬುದು ಈಗಾಗಲೇ ಖಚಿತವಾಗಿದೆ. ಶದರೆ ಇದೀಗ ಈ ಪಂದ್ಯದಲ್ಲಿ ಮೋದಿ ಅವರು ವೀಕ್ಷಕ ವಿವರಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಮಾರ್ಚ್​ 9 ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ. ಇದೀಗ ಈ ಪಂದ್ಯದಲ್ಲಿ ಪ್ರಧಾನಿ ಮೋದಿ ವೀಕ್ಷಕ ವಿವರಣೆ ನೀಡಲಿದ್ದಾರೆ ಎಂದು ಟಿವಿ9 ಹಿಂದಿ ವಾಹಿನಿ ವರದಿ ಮಾಡಿದೆ. ಆದರೆ ಈ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇದನ್ನೂ ಓದಿ IND VS AUS: ಭಾರತ ವಿರುದ್ಧದ ನಾಲ್ಕನೇ ಟೆಸ್ಟ್​ ಪಂದ್ಯಕ್ಕೂ ಸ್ಟೀವನ್​ ಸ್ಮಿತ್​ ನಾಯಕ

ಈ ಪಂದ್ಯ ಆರಂಭಕ್ಕೆ ಒಂದು ವಾರ ಇರುವ ಮುನ್ನವೇ ರಕ್ಷಣಾ ಪಡೆಗಳು ಕ್ರೀಡಾಂಗಣದಲ್ಲಿ ತೀವ್ರ ತಪಾಸಣೆ ಆರಂಭಿಸಿದೆ. ಇನ್ನು ಅಹಮದಾಬಾದ್‌ ಕ್ರೀಡಾಂಗಣಕ್ಕೆ ತಮ್ಮ ಹೆಸರಿಟ್ಟ ಬಳಿಕ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ ಅಲ್ಲಿ ಪಂದ್ಯವೊಂದನ್ನು ವೀಕ್ಷಿಸಲಿದ್ದಾರೆ.

Exit mobile version