ನವದೆಹಲಿ: ಆಸ್ಟ್ರೇಲಿಯಾ(IND VS AUS) ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(Ravichandran Ashwin) ಅವರು ನೂತನ ಮೈಲುಗಲ್ಲೊಂದನ್ನು ಸ್ಥಾಪಿಸಿದ್ದಾರೆ.
ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಅಶ್ವಿನ್ ಅವರು ಸ್ಟೀವನ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರ ವಿಕೆಟ್ ಕಿತ್ತ ವೇಳೆ ಅಶ್ವಿನ್ ವಿಶೇಷ ದಾಖಲೆ ಬರೆದರು. ಆಸ್ಟ್ರೇಲಿಯಾ ತಂಡದ ವಿರುದ್ಧ ಟೆಸ್ಟ್ನಲ್ಲಿ 100 ವಿಕೆಟ್ ಕಿತ್ತ ಸಾಧನೆ ಮಾಡಿದರು. ಈ ಮೂಲಕ ತಂಡವೊಂದರ ವಿರುದ್ಧ ಟೆಸ್ಟ್ನಲ್ಲಿ ನೂರು ವಿಕೆಟ್ ಕಿತ್ತ ಎಲೇಟ್ ಪಟ್ಟಿಗೆ ಸೇರಿದ ಹಿರಿಮೆಗೆ ಪಾತ್ರರಾದರು.
ಇದನ್ನೂ ಓದಿ IND VS AUS: ಉಸ್ಮಾನ್ ಖವಾಜಾ ವಿಕೆಟ್ ಕಿತ್ತು ವಿಶ್ವ ದಾಖಲೆ ಬರೆದ ರವೀಂದ್ರ ಜಡೇಜಾ
ತಂಡವೊಂದರ ವಿರುದ್ಧ ಅತಿ ಹೆಚ್ಚು ಟೆಸ್ಟ್ ವಿಕೆಟ್ ಕಿತ್ತ ವಿಶ್ವ ದಾಖಲೆ ಆಸ್ಟ್ರೇಲಿಯಾದ ದಿವಂಗತ ಆಟಗಾರ ಶೆನ್ ವಾರ್ನ್ ಹೆಸರಿನಲ್ಲಿದೆ. ವಾರ್ನ್ ಅವರು ಇಂಗ್ಲೆಂಡ್ ತಂಡದ ವಿರುದ್ಧ 195 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. ಅಶ್ವಿನ್ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಒಟ್ಟು 8 ವಿಕೆಟ್ ಕಿತ್ತು ಮಿಂಚಿದ್ದರು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲಿಯೂ ತಮ್ಮ ಸ್ಪಿನ್ ಮ್ಯಾಜಿಕ್ ಮೂಲಕ ಆಸೀಸ್ ಬೌಲರ್ಗಳನ್ನು ಕಾಡುತ್ತಿದ್ದಾರೆ.