ನವದೆಹಲಿ: ಆಸ್ಟ್ರೇಲಿಯಾ(IND VS AUS) ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಭಾರತ ಮಹತ್ವದ ಬದಲಾವಣೆ ಮಾಡಲಿದೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್(Wasim Jaffer) ಅಭಿಪ್ರಾಯಪಟ್ಟಿದ್ದಾರೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಿಸಲು ಭಾರತ ತಂಡಕ್ಕೆ ಈ ಸರಣಿಯಲ್ಲಿ ಗೆಲುವು ಅತ್ಯಗತ್ಯ. ಆದ್ದರಿಂದ ಕಳಪೆ ಬ್ಯಾಟಿಂಗ್ ಮುಂದುವರಿಸುತ್ತಿರುವ ಉಪನಾಯಕ ಕೆ.ಎಲ್. ರಾಹುಲ್(kl rahul) ಮತ್ತು ಸೂರ್ಯಕುಮಾರ್ ಯಾದವ್(suryakumar yadav) ಅವರನ್ನು ಈ ಪಂದ್ಯದಿಂದ ಕೈ ಬಿಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಬೆನ್ನು ನೋವಿನಿಂದ ಗುಣಮುಖರಾಗಿ ತಂಡ ಸೇರಿರುವ ಶ್ರೇಯಸ್ ಅಯ್ಯರ್ ಈ ಪಂದ್ಯದಲ್ಲಿ ಆಡುವುದು ಖಚಿತವಾಗಿದೆ. ಹೀಗಾಗಿ ಸೂರ್ಯಕುಮಾರ್ ತಂಡದಿಂದ ಹೊರಗುಳಿಯಬೇಕಿದೆ. ಇನ್ನೊಂದೆಡೆ ರಾಹುಲ್ ಬದಲು ಈ ಪಂದ್ಯದಲ್ಲಿ ಶುಭಮನ್ ಗಿಲ್ ಕಣಕ್ಕಿಳಿಯಲಿದ್ದಾರೆ ಎಂದು ವಾಸಿಂ ಜಾಫರ್ ಹೇಳಿದ್ದಾರೆ.
ಇದನ್ನೂ ಓದಿ IND VS AUS: ಭಾರತ-ಆಸೀಸ್ ದ್ವಿತೀಯ ಟೆಸ್ಟ್ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
ದ್ವಿತೀಯ ಟೆಸ್ಟ್ ಪಂದ್ಯಕ್ಕೆ ವಾಸಿಂ ಜಾಫರ್ ತಂಡ
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಸ್ ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.