ನಾಗ್ಪುರ: ಗುರುವಾರ ಆರಂಭಗೊಂಡ ಆಸ್ಟ್ರೇಲಿಯಾ(IND VS AUS) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್(Ravichandran Ashwin) ವಿಶ್ವ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಅತಿ ವೇಗವಾಗಿ ಟೆಸ್ಟ್ನಲ್ಲಿ 450 ವಿಕೆಟ್ ಕಿತ್ತ ವಿಶ್ವದ ಎರಡನೇ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ನಾಗ್ಪುರ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯತ್ತಿರುವ ಈ ಪಂದ್ಯದಲ್ಲಿ ಆರ್. ಅಶ್ವಿನ್ ಮೂರು ವಿಕೆಟ್ ಕಿತ್ತು ಮಿಂಚಿದ್ದಾರೆ. ಇದೇ ವೇಳೆ ಅವರು ಅತಿ ವೇಗದಲ್ಲಿ 450 ವಿಕೆಟ್ ಕಿತ್ತ ಭಾರತದ ಮೊದಲ ಬೌಲರ್ ಎಂಬ ಸಾಧನೆ ಮಾಡಿದ್ದಾರೆ. ಜತೆಗೆ ಈ ಸಾಧನೆ ಮಾಡಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಬರೆದರು. ಶ್ರೀಲಂಕಾ ತಂಡದ ಮಾಜಿ ಆಟಗಾರ ಮುತ್ತಯ್ಯ ಮುರಳೀಧರನ್ ಈ ಸಾಧನೆ ಮಾಡಿದ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.
ಇದನ್ನೂ ಓದಿ INDvsAUS : ಐದು ತಿಂಗಳ ಹಿಂದೆ ಗಾಯಾಳು, ಈಗ ಐದು ವಿಕೆಟ್ಗಳ ಸರದಾರ; ಜಡೇಜಾ ಸಾಧನೆಗೆ ಅಭಿಮಾನಿಗಳ ಮೆಚ್ಚುಗೆ
ಮುತ್ತಯ್ಯ ಮುರಳೀಧರನ್ ಅವರು ಕೇವಲ 80 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಶ್ವಿನ್ 89 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಜತೆಗೆ ಅತಿ ಕಡಿಮೆ ಪಂದ್ಯಗಳನ್ನಾಡಿ ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ ಎಂಬ ಸಾಧನೆಗೆ ಅಶ್ವಿನ್ ಪಾತ್ರರಾಗಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿದರು. ಕುಂಬ್ಳೆ ಅವರು 93 ಟೆಸ್ಟ್ ಪಂದ್ಯಗಳನ್ನಾಡಿ ಈ ಸಾಧನೆ ಮಾಡಿದ್ದರು. ಆದರೆ ಇದೀಗ ಅಶ್ವಿನ್ 89 ಟೆಸ್ಟ್ ಆಡಿ 450 ವಿಕೆಟ್ ಕೀಳುವ ಮೂಲಕ ಕುಂಬ್ಳೆ ದಾಖಲೆಯನ್ನು ಹಿಂದಿಕ್ಕಿದರು.