ನವದೆಹಲಿ: ಆಸ್ಟ್ರೇಲಿಯಾ(IND VS AUS) ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ(Virat Kohli) ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್(Sachin Tendulkar) ಅವರ ದಾಖಲೆಯೊಂದು ಪತನಗೊಂಡಿತು.
ವಿರಾಟ್ ಕೊಹ್ಲಿ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಸ್ವರೂಪಗಳಲ್ಲಿ ವೇಗವಾಗಿ 25 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಎಂಬ ಹಿರಿಮೆ ಪಾತ್ರರಾದರು. ಈ ಮೂಲಕ ಸಚಿನ್ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದರು. ಆಸೀಸ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಕೊಹ್ಲಿಗೆ ಈ ದಾಖಲೆ ಮುರಿಯಲು 64 ರನ್ಗಳ ಅವಶ್ಯಕತೆ ಇತ್ತು. ಆದರೆ ಕೊಹ್ಲಿ ಮೊದಲ ಟೆಸ್ಟ್ ನಲ್ಲಿ ಕಳಪೆ ಬ್ಯಾಟಿಂಗ್ ಮಾಡಿ ಈ ದಾಖಲೆ ನಿರ್ಮಿಸುವಲ್ಲಿ ಎಡವಿದ್ದರು. ಆದರೆ ದ್ವಿತೀಯ ಪಂದ್ಯದಲ್ಲಿ ಈ ಸಾಧನೆಯನ್ನು ತಮ್ಮ ಹೆಸರಿಗೆ ಬರೆಯುವಲ್ಲಿ ಯಶಸ್ವಿಯಾದರು.
ವಿರಾಟ್ ಕೊಹ್ಲಿ 549 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರು. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್(sachin tendulkar) ಅವರು 577 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿ ಮೊದಲ ಸ್ಥಾನದಲ್ಲಿದ್ದರು. ಆದರೆ ಇದೀಗ ಕೊಹ್ಲಿ ಕಡಿಮೆ ಇನಿಂಗ್ಸ್ ಮೂಲಕ ಈ ದಾಖಲೆಯನ್ನು ಮುರಿದಿದ್ದಾರೆ.