ಅಹಮದಾಬಾದ್: ಆಸ್ಟ್ರೇಲಿಯಾ(IND VS AUS) ವಿರುದ್ಧ ಸಾಗುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಶುಭಮನ್ ಗಿಲ್ ಅಜೇಯ ಶತಕ ಬಾರಿಸಿ ಮಿಂಚಿದ್ದಾರೆ. ಇದು ಅವರ ಟೆಸ್ಟ್ ವೃತ್ತಿಜೀವನದ ದ್ವಿತೀಯ ಶತಕವಾಗಿದೆ.
ಕೆ.ಎಲ್ ರಾಹುಲ್ ಬದಲಿಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ಗಿಲ್ ಮೂರನೇ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್ ನಡೆಸುವಲ್ಲಿ ವಿಫಲರಾಗಿದ್ದರು. ಆದರೆ ಇದೀಗ ನಾಲ್ಕನೇ ಟೆಸ್ಟ್ನಲ್ಲಿ ಶತಕ ಬಾರಿಸುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.
ಇದನ್ನೂ ಓದಿ IND VS AUS: ಅಂತಿಮ ಟೆಸ್ಟ್ ಪಂದ್ಯಕ್ಕೂ ಮುನ್ನ ಹೋಳಿ ಆಡಿ ಸಂಭ್ರಮಿಸಿದ ಆಸ್ಟ್ರೇಲಿಯಾ ತಂಡ
ಆಸ್ಟ್ರೇಲಿಯಾದ ಮೊದಲ ಇನಿಂಗ್ಸ್ನ 480 ರನ್ಗಳನ್ನು ಬೆನ್ನಟ್ಟುತ್ತಿರುವ ಭಾರತ ಸದ್ಯ ಟೀ ವಿರಾಮಕ್ಕೆ 2 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿ ಆಟ ಮುಂದುವರಿಸಿದೆ. ಶುಭಮನ್ ಗಿಲ್ ಅಜೇಯ 103 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಚೇತೇಶ್ವರ್ ಪೂಜಾರ 42 ರನ್ ಗಳಿಸಿ ಟಾಡ್ ಮಾರ್ಫಿಗೆ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿ ಖಾತೆ ತೆರೆಯದೆ ಕ್ರೀಸ್ನಲ್ಲಿದ್ದಾರೆ.