IND VS AUS: ಸ್ಮಿತ್ ಸೂಪರ್​ ಮ್ಯಾನ್​​ ಕ್ಯಾಚ್​ ಕಂಡು ಬೆರಗಾದ ಪ್ರೇಕ್ಷಕರು; ವಿಡಿಯೊ ವೈರಲ್​ - Vistara News

ಕ್ರಿಕೆಟ್

IND VS AUS: ಸ್ಮಿತ್ ಸೂಪರ್​ ಮ್ಯಾನ್​​ ಕ್ಯಾಚ್​ ಕಂಡು ಬೆರಗಾದ ಪ್ರೇಕ್ಷಕರು; ವಿಡಿಯೊ ವೈರಲ್​

ದ್ವಿತೀಯ ಏಕದಿನ ಪಂದ್ಯದಲ್ಲಿ ಸ್ಟೀವನ್​ ಸ್ಮಿತ್​ ಅವರು ಹಿಡಿದ ಕ್ಯಾಚ್​ನ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

VISTARANEWS.COM


on

IND VS AUS: Spectators are amazed to see Smith catch Superman!
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶಾಖಪಟ್ಟಣ: ಭಾರತ(IND VS AUS) ಮತ್ತು ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯ ವಿಶಾಖಪಟ್ಟಣದ ವೈ.ಎಸ್.ರಾಜಶೇಖರ ರೆಡ್ಡಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಸ್ಟೀವನ್​ ಸ್ಮಿತ್(Steven Smith)​ ಹಿಡಿದ ಕ್ಯಾಚ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸುತ್ತಿರುವ ಭಾರತಕ್ಕೆ ಆಸೀಸ್​ ವೇಗಿ ಮಿಚೆಲ್​ ಸ್ಟಾರ್ಕ್​ ಅವರು ತಮ್ಮ ಘಾತಕ ಬೌಲಿಂಗ್​ ಮೂಲಕ ಆಘಾತವಿಕ್ಕಿದರು. ಮೊದಲ ನಾಲ್ಕು ವಿಕೆಟ್​ ಕೂಡ ಸ್ಟಾರ್ಕ್​ ಪಾಲಾಯಿತು. ಆದರೆ ಸೀನ್​ ಅಬೋಟ್​ ಅವರ ಓವರ್​ನಲ್ಲಿ ಹಾರ್ದಿಕ್​ ಪಾಂಡ್ಯ ಅವರ ಕ್ಯಾಚ್​ವೊಂದನ್ನು ಸೂಪರ್​ ಮ್ಯಾನ್​ ರೀತಿಯಲ್ಲಿ ಹಾರಿ ಹಿಡಿಯುವ ಮೂಲಕ ಸ್ಟೀವನ್​ ಸ್ಮಿತ್​ ಒಂದು ಕ್ಷಣ ಎಲ್ಲರನ್ನು ನಿಬ್ಬೆರಗಾಗಿಸಿದರು.

ಸ್ಮಿತ್​ ಅವರ ಈ ಕ್ಯಾಚ್​ ಕಂಡು ಹಾರ್ದಿಕ್​ ಪಾಂಡ್ಯ ಮಾತ್ರವಲ್ಲದೆ ಆಸೀಸ್​ ಆಟಗಾರರು ಹಾಗೂ ಅಂಪೈರ್​ ಕೂಡ ಒಂದು ಕ್ಷಣ ದಂಗಾದರು. ಸ್ಮಿತ್​ ಅವರ ಈ ಕ್ಯಾಚ್​ನ ವಿಡಿಯೊವನ್ನು ಹಲವು ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ವಿವಿಧ ಕಾಮೆಂಟ್​ ಮಾಡಲಾರಂಭಿಸಿದ್ದಾರೆ.

ಇದನ್ನೂ ಓದಿ IND VS AUS: ಟಾಸ್​ ಗೆದ್ದ ಆಸ್ಟ್ರೇಲಿಯಾ; ಭಾರತಕ್ಕೆ ಬ್ಯಾಟಿಂಗ್​ ಆಹ್ವಾನ

ಸದ್ಯ ಭಾರತ 94 ರನ್​ಗೆ 7 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್​ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ನಾಯಕತ್ವ ವಹಿಸಿಕೊಂಡರು. ಆದರೆ ಅವರ ಆಗಮನ ತಂಡಕ್ಕೆ ಯಾವುದೇ ಪ್ರಯೋಜನಾಗಲಿಲ್ಲ ಅವರು 13 ರನ್​ಗೆ ಆಟ ಮುಗಿಸಿದರು. ಇನ್ನೊಂದೆಡೆ ಸೂರ್ಯಕುಮಾರ್​ ಯಾದವ್​ ಈ ಪಂದ್ಯದಲ್ಲಿಯೂ ಶೂನ್ಯಕ್ಕೆ ಔಟಾಗುವ ಮೂಲಕ ಘೋರ ವೈಫಲ್ಯ ಕಂಡರು. ಮೊದಲ ಪಂದ್ಯದಲ್ಲಿಯೂ ಅವರು ಸ್ಟಾರ್ಕ್​ ಎಸೆತಕ್ಕೆ ಶೂನ್ಯ ಸುತ್ತಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Virat Kohli: ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡಿದ 7 ಪಂದ್ಯಗಳಲ್ಲಿ 361 ರನ್​ ಬಾರಿಸಿ ಸದ್ಯ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳಿಸಿ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

VISTARANEWS.COM


on

virat kohli
Koo

ಜೈಪುರ: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿಗೆ(Virat Kohli) ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅದರಲ್ಲಿಯೂ ಕೊಹ್ಲಿಯನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಕೊಹ್ಲಿ ಮೇಲಿನ ಅಭಿಮಾನಕ್ಕೋಸ್ಕರ ಜೈಪುರದಲ್ಲಿ ಕೊಹ್ಲಿಯ ಮೇಣದ ಪ್ರತಿಮೆಯೊಂದನ್ನು(Virat Kohli wax statue) ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆ ಜೈಪುರದ ವ್ಯಾಕ್ಸ್‌ ಮ್ಯೂಸಿಯಂನಲ್ಲಿದೆ. ಗುರುವಾರ ಇದನ್ನು ಅನಾವರಣಗೊಳಿಸಲಾಗಿತ್ತು.

35 ಕೆ.ಜಿ. ತೂಕದ ಕೊಹ್ಲಿ ಅವರ ಪ್ರತಿಮೆಯನ್ನು ಸುಮಾರು ಎರಡು ತಿಂಗಳಲ್ಲಿ ಕೆತ್ತಲಾಗಿದೆ. ಈ ಮ್ಯೂಸಿಯಂನಲ್ಲಿ ಈಗಾಗಗಲೇ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಸಚಿನ್‌ ತೆಂಡೂಲ್ಕರ್‌ ಮತ್ತು ಎಂ.ಎಸ್‌. ಧೋನಿ ಸಹಿತ 44 ಮಂದಿಯ ಮೇಣದ ಪ್ರತಿಮೆಗಳಿವೆ. ಮಹಾತ್ಮಾ ಗಾಂಧಿ, ಜವಾಹರ್‌ಲಾರ್‌ ನೆಹರೂ, ಎಪಿಜೆ ಅಬ್ದುಲ್‌ ಕಲಾಂ, ಸುಭಾಷ್‌ಚಂದ್ರ ಬೋಸ್‌, ಭಗತ್‌ ಸಿಂಗ್‌, ಕಲ್ಪನಾ ಚಾವ್ಲಾ, ಅಮಿತಾಭ್‌ ಬಚ್ಚನ್‌ ಮತ್ತು ಮದರ್‌ ತೆರೇಸಾ ಅವರ ಪ್ರತಿಮೆಯಿದೆ. ಕೊಹ್ಲಿಯ ಪ್ರತಿಮೆಯನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಬರುತ್ತಿದ್ದಾರೆ ಎಂದು ಮ್ಯೂಸಿಯಂನ ಸಂಸ್ಥಾಪಕ ನಿರ್ದೇಶಕ ಅನೂಪ್‌ ಶ್ರೀವಾಸ್ತವ ಹೇಳಿದ್ದಾರೆ.

ಕಳೆದ ವರ್ಷ ದೆಹಲಿಯ ಮೇಡಮ್ ಟುಸ್ಸಾಡ್ಸ್‌ನಲ್ಲಿರುವ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಗೆ ಯುವತಿಯೊಬ್ಬಳು ಲಿಪ್ ಕಿಸ್ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಜತೆಗೆ ಮೇಣದ ಪ್ರತಿಮೆಯೊಂದಿಗೆ ಯುವತಿ ಪೋಸ್ ನೀಡಿರುವ ಫೋಟೋಗಳು ಕೂಡ ವೈರಲ್ ಆಗಿತ್ತು.

ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡಿದ 7 ಪಂದ್ಯಗಳಲ್ಲಿ 361 ರನ್​ ಬಾರಿಸಿ ಸದ್ಯ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳಿಸಿ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ವಿರಾಟ್​ ಅವರು ರೋಹಿತ್​ ಜತೆ ಆರಂಭಿಕನಾಗಿ ಆಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

ಏಕದಿನ ವಿಶ್ವಕಪ್​ನಲ್ಲಿ ಹಲವು ದಾಖಲೆ


ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಬ್ಯಾಟಿಂಗ್​ ವಿರಾಟ ದರ್ಶನ ತೋರಿದ್ದ ಕೊಹ್ಲಿ ಟೂರ್ನಿಯ ಟಾಪ್‌ ಸ್ಕೋರರ್‌ ಆಗಿ ಹೊರಮೊಮ್ಮಿದ್ದರು. ಅಲ್ಲದೆ ತಮ್ಮ ಹೆಸರಿಗೆ ನಾನಾ ದಾಖಲೆಗಳನ್ನೂ ಬರೆದಿದ್ದರು. ಲೀಗ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 101 ರನ್‌ ಗಳಿಸಿ ಸಚಿನ್​ ಅವರ 49ನೇ ಶತಕವನ್ನು ಸರಿಗಟ್ಟಿದ್ದರು. ನ್ಯೂಜಿಲ್ಯಾಂಡ್‌ ವಿರುದ್ಧದ ಸೆಮಿಫೈನಲ್‌ನಲ್ಲಿ 117 ರನ್‌ ಗಳಿಸಿದ ಕೊಹ್ಲಿ, ಸಚಿನ್​ ಅವರ ದಾಖಲೆ ಮುರಿದು 50ನೇ ಸೆಂಚುರಿ ಬಾರಿಸಿ ದಾಖಲೆ ನಿರ್ಮಿಸಿದ್ದರು. ಒಟ್ಟಾರೆಯಾಗಿ ಟೂರ್ನಿಯಲ್ಲಿ ಆಡಿದ 11 ಪಂದ್ಯಗಳಲ್ಲಿ 765 ರನ್​ ಬಾರಿಸಿದ್ದರು.

Continue Reading

ಕ್ರೀಡೆ

IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

IPL 2024: ಈ ಬಾರಿಯ ಗ್ರೀನ್‌ ಜೆರ್ಸಿಯ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಹಸಿರಿನ ಜತೆಗೆ ಕಡು ನೀಲಿ ಬಣ್ಣವನ್ನು ಸೇರಿಸಿಲಾಗಿದೆ. ಹಿಂದಿನ ಆವೃತ್ತಿಯಲ್ಲಿ ಹಸಿರು ಮತ್ತು ಕಪ್ಪು ಬಣ್ಣ ವಿಶ್ರಿತ ಜೆರ್ಸಿಯನ್ನು ಬಳಸಲಾಗಿತ್ತು.

VISTARANEWS.COM


on

IPL 2024
Koo

ಕೋಲ್ಕತ್ತಾ: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತಂಡ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಆಡಿದ 7 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಸೋತು ಕೊನೆಯ ಸ್ಥಾನಿಯಾಗಿದೆ. ಮುಂದಿನ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್​ ಪ್ರವೇಶ ಪಡೆಯಬಹುದು. ಮುಂದಿನ ಪಂದ್ಯವನ್ನು ಕೆಕೆಆರ್(KKR)​ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೋ ಗ್ರೀನ್‌ ಅಭಿಯಾನದ ಭಾಗವಾಗಿ ಹಸಿರು(RCB Green Jersey) ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಎಂದು ಫ್ರಾಂಚೈಸಿ ಅಧಿಕೃತ ಮಾಹಿತಿ ನೀಡಿದೆ. ಈ ಮೂಲಕ ಈ ಐಪಿಎಲ್‌ನಲ್ಲೂ(IPL 2024) ಆರ್​ಸಿಬಿಯ ಗೋ ಗ್ರೀನ್‌ ಅಭಿಯಾನ ಮುಂದುವರಿಯಲಿದೆ. ಸ್ವಚ್ಛ ಹಾಗೂ ಹಸಿರು ಪರಿಸರವೇ ಈ ಬಾರಿಯ ಪ್ರಮುಖ ಉದ್ದೇಶ.

“ಬಣ್ಣಗಳ ಬದಲಾವಣೆಯು ಅದೃಷ್ಟದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಭಾವಿಸುತ್ತೇವೆ!” ಎಂದು ಬರೆದಿಕೊಂಡು ಮುಂದಿನ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ತಂಡ ಕಣಕ್ಕಿಳಿಯಲಿದೆ ಎನ್ನುವ ವಿಚಾರವನ್ನು ಫ್ರಾಂಚೈಸಿ ತನ್ನ ಟ್ವಿಟರ್ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ. ಕೆಕೆಆರ್​ ಮತ್ತು ಆರ್​ಸಿಬಿ ನಡುವಣ ಪಂದ್ಯ ಏಪ್ರಿಲ್​ 21ರಂದು ನಡೆಯಲಿದೆ. ಈಡನ್​ ಗಾರ್ಡನ್ಸ್​ನಲ್ಲಿ ಪಂದ್ಯ ನಡೆಯಲಿದೆ. ಇದು ಹಗಲು ಪಂದ್ಯವಾಗಿದೆ.

​2011 ರಿಂದ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್​ಸಿಬಿ ತಮ್ಮ ‘ಗೋ ಗ್ರೀನ್’ ಅಭಿಯಾನದಲ್ಲಿ ತೊಡಗಿಕೊಂಡಿತ್ತು. ಇದೇ ಕಾರಣಕ್ಕೆ ಪ್ರತಿ ಆವೃತ್ತಿಯಲ್ಲಿಯೂ ಒಂದು ಪಂದ್ಯವನ್ನು ಹಸಿರು ಜೆರ್ಸಿಯಲ್ಲಿ ಆಡುತ್ತಿದೆ. ಆದರೆ 2021ರಲ್ಲಿ, ಹಸಿರು ಜರ್ಸಿಯಲ್ಲಿ ಆಡುವ ಬದಲು ತಂಡವು ಒಂದು ಪಂದ್ಯದಲ್ಲಿ ನೀಲಿ ಜರ್ಸಿಯಲ್ಲಿ ಆಡಿತ್ತು. ಇದಕ್ಕೆ ಕಾರಣ ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಂಚೂಣಿಯಲ್ಲಿರುವ ಕಾರ್ಮಿಕರಿಗೆ ಅವರ ತ್ಯಾಗ ಮತ್ತು ಕಠಿಣ ಪರಿಶ್ರಮಕ್ಕೆ ಗೌರವ ಸಲ್ಲಿಸಲು ಈ ನೀಲಿ ಜೆರ್ಸಿ ಧರಿಸಿ ಆಡಿತ್ತು.

ಇದನ್ನೂ ಓದಿ IPL 2024 Points Table: 3ನೇ ಗೆಲುವು ಸಾಧಿಸಿದ ಬಳಿಕ ಮುಂಬೈಗೆ ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ?

ಈ ಬಾರಿಯ ಗ್ರೀನ್‌ ಜೆರ್ಸಿಯ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಹಸಿರಿನ ಜತೆಗೆ ಕಡು ನೀಲಿ ಬಣ್ಣವನ್ನು ಸೇರಿಸಿಲಾಗಿದೆ. ಹಿಂದಿನ ಆವೃತ್ತಿಯಲ್ಲಿ ಹಸಿರು ಮತ್ತು ಕಪ್ಪು ಬಣ್ಣ ವಿಶ್ರಿತ ಜೆರ್ಸಿಯನ್ನು ಬಳಸಲಾಗಿತ್ತು.

ಪ್ಲೇ ಆಫ್ ಆಸೆ ಜೀವಂತ

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್‌ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

Continue Reading

ಕ್ರೀಡೆ

IPL 2024 Points Table: 3ನೇ ಗೆಲುವು ಸಾಧಿಸಿದ ಬಳಿಕ ಮುಂಬೈಗೆ ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ?

IPL 2024 Points Table: ಮುಂಬೈ ಇಂಡಿಯನ್ಸ್​(Mumbai Indians) ತಂಡ ಗುರುವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(Punjab Kings)​ ವಿರುದ್ಧ ರೋಚಕ 9 ರನ್​ಗಳ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ(IPL 2024 Points Table) ಪ್ರಗತಿ ಸಾಧಿಸಿ 7ನೇ ಸ್ಥಾನಕ್ಕೇರಿದೆ.

VISTARANEWS.COM


on

IPL 2024 Points Table
Koo

ಮುಲ್ಲಾನ್‌ಪುರ್‌: ಮಾಜಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​(Mumbai Indians) ತಂಡ ಗುರುವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(Punjab Kings)​ ವಿರುದ್ಧ ರೋಚಕ 9 ರನ್​ಗಳ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ(IPL 2024 Points Table) ಪ್ರಗತಿ ಸಾಧಿಸಿದೆ. ಈ ಪಂದ್ಯಕ್ಕೂ ಮುನ್ನ 9ನೇ ಸ್ಥಾನದಲ್ಲಿದ್ದ ಮುಂಬೈ ಈ ಗೆಲುವಿನೊಂದಿಗೆ 7ನೇ ಸ್ಥಾನಕ್ಕೇರಿದೆ. ಸೋಲು ಕಂಡ ಪಂಜಾಬ್​ 9ನೇ ಸ್ಥಾನಕ್ಕೆ ಕುಸಿದಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​76112 (+0.677)
ಕೆಕೆಆರ್​​6428 (+1.399)
ಚೆನ್ನೈ ಸೂಪರ್​ ಕಿಂಗ್ಸ್​​6428 (+0.726)
ಹೈದರಾಬಾದ್​​6428(+0.502)
ಲಕ್ನೋ6336 (+0.038)
ಡೆಲ್ಲಿ ಕ್ಯಾಪಿಟಲ್ಸ್​​7346 (-0.074)
ಮುಂಬೈ​7346 (-0.133)
ಗುಜರಾತ್7346 (-1.303)
ಪಂಜಾಬ್​7254 (-0.251)
ಆರ್​ಸಿಬಿ7162 (-1.185)

ಪಂದ್ಯ ಗೆದ್ದ ಮುಂಬೈ


ಅಶುತೋಷ್​ ಶರ್ಮಾ (61 ರನ್​, 28 ಎಸೆತ, 2 ಫೋರ್​, 7 ಸಿಕ್ಸರ್​), ಶಶಾಂಕ್ ಸಿಂಗ್​ (25 ಎಸೆತ, 41 ರನ್​, 2 ಫೋರ್​, 3 ಸಿಕ್ಸರ್​ ಮಧ್ಯಮ ಕ್ರಮಾಂಕದಲ್ಲಿ ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಅಗ್ರ ಕ್ರಮಾಂಕದ ಬ್ಯಾಟರ್​ಗಳ ತೀವ್ರ ವೈಫಲ್ಯದ ಹಿನ್ನೆಲೆಯಲ್ಲಿ ಪಂಜಾಬ್ ಕಿಂಗ್ಸ್​ ತಂಡ ಐಪಿಎಲ್​ 2024ನೇ (IPL 2024) ಆವೃತ್ತಿಯಲ್ಲಿ ಮತ್ತೊಂದು ಸೋಲಿಗೆ ಒಳಗಾಯಿತು. ಮಹಾರಾಜಾ ಯಾದವೀಂದ್ರ ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಕೇವಲ 9 ರನ್​ ಅಂತರದಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

ಮೊದಲು ಬ್ಯಾಟ್ ಮಾಡಿದ ಮುಂಬಯಿ ಪರ ಸೂರ್ಯಕುಮಾರ್​ ಅರ್ಧ ಶತಕ (78 ರನ್​) ಬಾರಿಸಿದರು. ಆದರೆ ಅವರ ಸ್ಕೋರ್ ಹೆಚ್ಚು ವೇಗವಾಗಿರಲಿಲ್ಲ. ರೋಹಿತ್ ಶರ್ಮಾ 36 ರನ್ ಬಾರಿಸಿದರೆ ತಿಲಕ್ ವರ್ಮಾ 34 ರನ್​ ಗಳಿಸಿದರು. ಹಾರ್ದಿಕ್ ಪಾಂಡ್ಯ 10 ರನ್ ಗೆ ಸೀಮಿತಗೊಂಡರೆ ಟಿಮ್ ಡೇವಿಡ್​ 14 ರನ್ ಬಾರಿಸಿದರು. ಆರಂಭಿಕ ಆಟಗಾರ ಇಶಾನ್ ಕಿಶನ್​ 8 ರನ್ ಬಾರಿಸಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಎದುರಿಸಿದರು.

Continue Reading

ಪ್ರಮುಖ ಸುದ್ದಿ

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

IPL 2024: ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಮಲ್ಲಾನ್​ಪುರ: ಅಶುತೋಷ್​ ಶರ್ಮಾ (61 ರನ್​, 28 ಎಸೆತ, 2 ಫೋರ್​, 7 ಸಿಕ್ಸರ್​), ಶಶಾಂಕ್ ಸಿಂಗ್​ (25 ಎಸೆತ, 41 ರನ್​, 2 ಫೋರ್​, 3 ಸಿಕ್ಸರ್​ ಮಧ್ಯಮ ಕ್ರಮಾಂಕದಲ್ಲಿ ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಅಗ್ರ ಕ್ರಮಾಂಕದ ಬ್ಯಾಟರ್​ಗಳ ತೀವ್ರ ವೈಫಲ್ಯದ ಹಿನ್ನೆಲೆಯಲ್ಲಿ ಪಂಜಾಬ್ ಕಿಂಗ್ಸ್​ ತಂಡ ಐಪಿಎಲ್​ 2024ನೇ (IPL 2024) ಆವೃತ್ತಿಯಲ್ಲಿ ಮತ್ತೊಂದು ಸೋಲಿಗೆ ಒಳಗಾಗಿದೆ. ಮುಂಬಯಿ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ 9 ರನ್​ಗಳ ವಿರೋಚಿತ ಸೋಲಿಗೆ ಒಳಗಾಗಿದೆ. ಪಂಜಾಬ್ ತಂಡಕ್ಕೆ ಇದು ಐದನೇ ಸೋಲಾಗಿದೆ. ಇದೇ ವೇಳೆ ಮುಂಬಯಿ ತಂಡ ಮತ್ತೆ ಗೆಲುವಿನ ಹಳಿಗೆ ಮರಳಿದೆ. ಆಡಿರುವ ಏಳು ಪಂದ್ಯಗಳಲ್ಲಿ ಮುಂಬಯಿಗೆ ದೊರೆತ ಮೂರನೇ ಗೆಲುವು ಇದು.

ಇಲ್ಲಿನ ಮಹಾರಾಜಾ ಯಾದವೀಂದ್ರ ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

ಮೊದಲು ಬ್ಯಾಟ್ ಮಾಡಿದ ಮುಂಬಯಿ ಪರ ಸೂರ್ಯಕುಮಾರ್​ ಅರ್ಧ ಶತಕ (78 ರನ್​) ಬಾರಿಸಿದರು. ಆದರೆ ಅವರ ಸ್ಕೋರ್ ಹೆಚ್ಚು ವೇಗವಾಗಿರಲಿಲ್ಲ. ರೋಹಿತ್ ಶರ್ಮಾ 36 ರನ್ ಬಾರಿಸಿದರೆ ತಿಲಕ್ ವರ್ಮಾ 34 ರನ್​ ಗಳಿಸಿದರು. ಹಾರ್ದಿಕ್ ಪಾಂಡ್ಯ 10 ರನ್ ಗೆ ಸೀಮಿತಗೊಂಡರೆ ಟಿಮ್ ಡೇವಿಡ್​ 14 ರನ್ ಬಾರಿಸಿದರು. ಆರಂಭಿಕ ಆಟಗಾರ ಇಶಾನ್ ಕಿಶನ್​ 8 ರನ್ ಬಾರಿಸಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಎದುರಿಸಿದರು.

ಅಶುತೋಷ್​ ಮಿಂಚಿನ ಬ್ಯಾಟಿಂಗ್

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಪಂಜಾಬ್ ತಂಡ ಆರಂಭ ಹೀನಾಯವಾಗಿತ್ತು. 14 ರನ್​ಗಳಿಗೆ ಪ್ರಮುಖ 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಕರ್ರನ್​ 6 ರನ್ ಬಾರಿಸಿದರೆ, ಪ್ರಭ್​ಸಿಮ್ರಾನ್ ಸಿಂಗ್ ಶೂನ್ಯಕ್ಕೆ ಔಟಾದರು. ರೀಲಿ ರೊಸ್ಸೊ ಹಾಗೂ ಲಿಯಾಮ್ ಲಿವಿಂಗ್​ಸ್ಟನ್​ ತಲಾ ಒಂದು ರನ್ ಬಾರಿಸಿ ಔಟಾದರು. ಹರ್ಪ್ರೀತ್ ಸಿಂಗ್​ 13 ರನ್​ಗೆ ಸೀಮಿತಗೊಂಡರು. ಈ ವೇಳೆ ಶಶಾಂಕ್ ಸಿಂಗ್ ವಿಕೆಟ್​ ಪತನವಾಗುವುದನ್ನು ತಪ್ಪಿಸಿ 41 ರನ್ ಬಾರಿಸಿದರು. ಆದರೆ ಸ್ಫೋಟಕ ಬ್ಯಾಟರ್​ ಜಿತೇಶ್ ಶರ್ಮಾ 9 ರನ್​ಗೆ ಸೀಮಿತಗೊಂಡರು.

77 ರನ್​ಗೆ 6 ವಿಕೆಟ್​ಕಳೆದುಕೊಂಡ ಪಂಜಾಬ್​ 100 ರನ್ ಒಳಗೆ ಆಲ್​ಔಟ್ ಆಗುವುದಾಗಿ ಭಾವಿಸಲಾಗಿತ್ತು. ಆದರೆ ಅಶುತೋಷ್​ ಸ್ಟೈಲಿಶ್​ ಬೌಂಡರಿ ಹಾಗೂ ಸಿಕ್ಸರ್​ಗಳ ಮೂಲಕ ಪಂದ್ಯದ ಗತಿಯನ್ನು ಬದಲಾಯಿಸಿದರು. ಪಂಜಾಬ್ ಗೆಲ್ಲುತ್ತದೆ ಎಂಬ ಹಂತಕ್ಕೆ ಹೋಯಿತು. ಈ ವೇಳೆ ಅಶುತೋಷ್​ ಔಟಾದರು. ಜತೆಗೆ ಹರ್ಪ್ರೀತ್ ಬ್ರಾರ್ ಕೂಡ ಔಟಾದರು. ಕೊನೆಯಲ್ಲಿ ರಬಾಡ ಗೆಲ್ಲಿಸುವರೆಂಬ ಆಶಾಭಾವ ಉಂಟಾಗಿತ್ತು. ಆದರೆ ಅವರು ರನ್ಔಟ್ ಆದರು.

ಮುಂಬಯಿ ಪರ ಬುಮ್ರಾ ಹಾಗೂ ಕೋಜಿ ತಲಾ 3 ವಿಕೆಟ್​ ಉರುಳಿಸಿದರು.

Continue Reading
Advertisement
virat kohli
ಕ್ರೀಡೆ4 mins ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ7 mins ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ28 mins ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Solution For Pimple
ಆರೋಗ್ಯ32 mins ago

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

indian navy chief of naval staff dinesh tripathi
ಪ್ರಮುಖ ಸುದ್ದಿ41 mins ago

Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

IPL 2024
ಕ್ರೀಡೆ45 mins ago

IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

Masaba Gupta, Satyadeep Misra expecting 1st child
ಸಿನಿಮಾ52 mins ago

Masaba Gupta: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನೀನಾ ಗುಪ್ತಾ ಮಗಳು ಮಸಾಬಾ!

Modi in Karnataka on April 20 Massive rallies in Chikkaballapura and Bengaluru
Lok Sabha Election 202453 mins ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

IPL 2024 Points Table
ಕ್ರೀಡೆ1 hour ago

IPL 2024 Points Table: 3ನೇ ಗೆಲುವು ಸಾಧಿಸಿದ ಬಳಿಕ ಮುಂಬೈಗೆ ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ?

open sump drowned
ಕ್ರೈಂ1 hour ago

Drowned: ನೀರಿನ ಸಂಪ್‌ನಲ್ಲಿ ಮುಳುಗಿ ತಾಯಿ- ಮಗು ಸಾವು, ಮುಚ್ಚಳ ಹಾಕದೆ ಬಿಟ್ಟಿದ್ದ ಮಾಲಿಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ5 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌