ನಾಗ್ಪುರ: ಆಸ್ಟ್ರೇಲಿಯಾ(IND VS AUS) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ ಶ್ರೀಕರ್ ಭರತ್(srikar bharat) ತಮ್ಮ ಚೊಚ್ಚಲ ಪಂದ್ಯದಲ್ಲೇ ಮಿಂಚಿನ ವೇಗದ ಸ್ಟಂಪಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ಅವರು ಮಾಡಿದ ಒಂದು ಸ್ಡಂಪಿಂಗ್ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಬದಲು ಟೀಮ್ ಇಂಡಿಯಾ ಕ್ಯಾಪ್ ಪಡೆದ ಭರತ್ ಅವರು, ಜಡೇಜಾ ಎಸೆದ ಓವರ್ನಲ್ಲಿ ಮಿಂಚಿನ ವೇಗದಲ್ಲಿ ಮಾರ್ನಸ್ ಲಬುಶೇನ್ ಅವರನ್ನು ಸ್ಟಂಪ್ಡ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ IND VS AUS: ಟೆಸ್ಟ್ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದ ರವಿಚಂದ್ರನ್ ಅಶ್ವಿನ್
ಭರತ್ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದರೂ ಅವರ ಕೆಲ ಡಿಆರ್ಎಸ್ ನಿರ್ಧಾರ ಮತ್ತು ಕೀಪಿಂಗ್ ಕಂಡ ಮಾಜಿ ಆಟಗಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭರತ್ ಇದೇ ಪ್ರದರ್ಶನವನ್ನು ಸರಣಿಯುದ್ದಕ್ಕೂ ತೋರ್ಪಡಿಸಿದರೆ ಮೂರು ಮಾದರಿಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಆಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ನಾಯಕ ರೋಹಿತ್ ಶರ್ಮಾ ಕೂಡ ಭರತ್ ಕೀಪಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.