ಮುಂಬಯಿ: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯ ಮುಕ್ತಾಯ ಕಂಡ ಬೆನ್ನಲ್ಲೇ ಬಿಸಿಸಿಐ ಮುಂದಿನ ಎರಡು ಟೆಸ್ಟ್ ಮತ್ತು ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮುಂದಿನ 2 ಪಂದ್ಯಗಳಿಗೆ ತಂಡದಲ್ಲಿ ಭಾರಿ ಬದಲಾವಣೆ ಸಂಭವಿಸಿಲ್ಲ. ಈ ಮೊದಲು ಟೆಸ್ಟ್ ಸರಣಿಯಲ್ಲಿ ತಂಡದಲ್ಲಿ ಅವಕಾಶ ಪಡೆದಿದ್ದ ಜೈದೇವ್ ಉನಾದ್ಕತ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಲಾಗಿದೆ. ರಣಜಿ ಫೈನಲ್ ಪಂದ್ಯದ ನಿಮಿತ್ತ ಅವರನ್ನು ದ್ವಿತೀಯ ಟೆಸ್ಟ್ ಪಂದ್ಯದಿಂದ ಕೈ ಬಿಡಲಾಗಿತ್ತು. ಆದರೆ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ಕುಟುಂಬ ಕಾರ್ಯಕ್ರಮದ ನಿಮಿತ್ತ ಗೈರಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ ತಂಡದ ನಾಯಕತ್ವ ವಹಿಸಲಿದ್ದಾರೆ.
ದ್ವಿತೀಯ ಏಕದಿನ ಪಂದ್ಯದ ವೇಳೆ ರೋಹಿತ್ ತಂಡಕ್ಕೆ ಮತ್ತೆ ಮರಳಿ ನಾಯಕತ್ವ ವಹಿಸಲಿದ್ದಾರೆ. ಪ್ರಸಕ್ತ ಸಾಲಿನ ರಣಜಿ ವಿಜೇತ ಸೌರಾಷ್ಟ್ರ ತಂಡದ ನಾಯಕ ಜೈದೇವ್ ಉನಾದ್ಕತ್ ಅಚ್ಚರಿ ಎಂಬಂತೆ ಏಕ ದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆನ್ನು ನೋವಿನಿಂದ ಚೇತರಿಕೆ ಕಾಣುತ್ತಿರುವ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೂ ಅವರು ಏಕದಿನ ಸರಣಿಯಲ್ಲಿ ತಂಡಕ್ಕೆ ಮರಳುವ ನಿರೀಕ್ಷೆ ಇತ್ತು. ಆದರೆ ಇದು ಹುಸಿಗೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಗೆ ಪ್ರಕಟಗೊಂಡ ತಂಡದಲ್ಲಿ ಅವರು ಅವಕಾಶ ಪಡೆದಿಲ್ಲ. ಇನ್ನೊಂದೆಡೆ ರವೀಂದ್ರ ಜಡೇಜಾ ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ.
ಆಸೀಸ್ ವಿರುದ್ಧದ ಮುಂದಿನ ಎರಡು ಟೆಸ್ಟ್ ಪಂದ್ಯಕ್ಕೆ ಭಾರತ ತಂಡ
ಭಾರತ: ರೋಹಿತ್ ಶರ್ಮಾ(ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಸ್ ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಉಮೇಶ್ ಯಾದವ್, ಜೈದೇವ್ ಉನಾದ್ಕತ್, ಇಶಾನ್ ಕಿಶನ್.
ಇದನ್ನೂ ಓದಿ IND VS AUS: 100ನೇ ಟೆಸ್ಟ್ ಪಂದ್ಯವನ್ನಾಡಿದ ಪೂಜಾರಗೆ ವಿಶೇಷ ಉಡುಗೊರೆ ನೀಡಿದ ಆಸೀಸ್ ತಂಡ
ಆಸೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಜೈದೇವ್ ಉನಾದ್ಕತ್. ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಹಲ್, ವಾಷಿಂಗ್ಟನ್ ಸುಂದರ್. (ಮೊದಲ ಪಂದ್ಯಕ್ಕೆ ರೋಹಿತ್ ಅಲಭ್ಯ)