ಸಿಡ್ನಿ: ಇದೇ ವರ್ಷಾಂತ್ಯದಲ್ಲಿ ನಡೆಯುವ ಬಹು ನಿರೀಕ್ಷಿತ ಭಾರತ ಮತ್ತು ಆಸ್ಟ್ರೇಲಿಯಾ(IND vs AUS Test) ನಡುವಿನ ಟೆಸ್ಟ್ ಸರಣಿಯ(IND vs AUS Test series 2024-25) ವೇಳಾಪಟ್ಟಿ(IND vs AUS Test series schedule) ಈಗಾಗಲೇ ಬಿಡುಗಡೆಯಾಗಿದೆ. ಈ ಬಾರಿ ಬಾರ್ಡರ್– ಗಾವಸ್ಕರ್ ಟೆಸ್ಟ್(border gavaskar trophy) ಸರಣಿಯಲ್ಲಿ ಐದು ಪಂದ್ಯಗಳು ನಡೆಯಲಿದೆ. 32 ವರ್ಷಗಳ ಬಳಿಕ ಇತ್ತಂಡಗಳ ನಡುವೆ ನಡೆಯುವ 5 ಪಂದ್ಯಗಳ ಟೆಸ್ಟ್ ಸರಣಿ ಇದಾಗಿದೆ. ಇದೀಗ ಟೆಸ್ಟ್ ಸರಣಿ ವೇಳೆ, ಭಾರತೀಯ ಅಭಿಮಾನಿಗಳಿಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡುವುದಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಹೇಳಿದೆ.
ಮೆಲ್ಬರ್ನ್, ಸಿಡ್ನಿ ಸೇರಿದಂತೆ 5 ಮೈದಾನಗಳಲ್ಲಿ ನಡೆಯುವ ಇತ್ತಂಡಗಳ ಪಂದ್ಯದ ವೇಳೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗಾಗಿಯೇ “ಇಂಡಿಯನ್ ಫ್ಯಾನ್ ಪಾರ್ಕ್’ ಎಂಬ ವಿಶೇಷ ಆಸನ ವ್ಯವಸ್ಥೆಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಮಾಡಿದೆ. ಭಾರತ ತಂಡದ ಅಭಿಮಾನಿಗಳು ಮಾತ್ರ ಇಲ್ಲಿ ತಮ್ಮ ಆಸನವನ್ನು ಕಾದಿರಿಸಬಹುದಾಗಿದೆ. ಇದು ಮಾತ್ರವಲ್ಲದೆ ಇತರ ಜಾಗದಲ್ಲೂ ಭಾರತೀಯರಿಗೆ ಟಿಕೆಟ್ ಖರೀದಿಸಲು ಅವಕಾಶವಿದೆ. ಆದರೆ, ಇಂಡಿಯನ್ ಫ್ಯಾನ್ ಪಾರ್ಕ್ ಕೇವಲ ಭಾರತೀಯರಿಗೆ ಮಾತ್ರ ಸೀಮಿತವಾಗಿದೆ.
1991-92ರ ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಿತ್ತು. ಅಂದು ಆಸ್ಟ್ರೇಲಿಯಾ 4-0 ಅಂತರದ ಗೆಲುವು ಸಾಧಿಸಿತ್ತು. ಇದೀಗ 32 ವರ್ಷಗಳ ಬಳಿಕ ಮತ್ತೆ 5 ಪಂದ್ಯಗಳ ಸರಣಿಯನ್ನಾಡಲಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನ ಮಹತ್ವವನ್ನು ಸಾರುವ ಕೆಲಸ ಉಭಯ ಕ್ರಿಕೆಟ್ ಮಂಡಳಿ ಮಾಡಲಿದೆ.
ಇದನ್ನೂ ಓದಿ IND vs AUS: ಈ ಬಾರಿಯ ಭಾರತ- ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವಿಶೇಷತೆ ಏನು?
5 ಪಂದ್ಯಗಳ ಈ ಟೆಸ್ಟ್ ಸರಣಿ ನವೆಂಬರ್ 22ರಿಂದ ಜನವರಿ(2025) 7ರವರೆಗೆ ನಡೆಯಲಿದೆ. ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ಈ ಪಂದ್ಯಗಳು ನಡೆಯಲಿದೆ. ಅಡಿಲೇಡ್ ಪಂದ್ಯ ಪಿಂಕ್ ಬಾಲ್ ಟೆಸ್ಟ್ ಆಗಿದೆ.
ಭಾರತವು ಇತ್ತೀಚಿನ ಕೆಲ ವರ್ಷಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಲೇ ಬಂದಿದೆ. ಕಳೆದ 4 ಸರಣಿಗಳಲ್ಲಿ ಭಾರತವೇ ಗೆದ್ದು ಬಂದಿದೆ. 2016-17ರಲ್ಲಿ 2-1 (ತವರಿನ ಸರಣಿ), 2018-19ರಲ್ಲಿ 2-1 (ಆಸ್ಟ್ರೇಲಿಯದಲ್ಲಿ), 2020- 21ರಲ್ಲಿ 2-1 (ಆಸ್ಟ್ರೇಲಿಯದಲ್ಲಿ) ಹಾಗೂ 2022-23ರಲ್ಲಿ 2-1 (ತವರಿನ ಸರಣಿ) ಅಂತರದಿಂದ ಭಾರತ ಜಯ ಸಾಧಿಸಿತ್ತು. ಆದಾಗ್ಯೂ, 2023ರಲ್ಲಿ ಲಂಡನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಪ್ಯಾಟ್ ಕಮಿನ್ಸ್ ತಂಡವು ಭಾರತವನ್ನು ಸೋಲಿಸಿತ್ತು.
5 ಟೆಸ್ಟ್ ಪಂದ್ಯ ವೇಳಾಪಟ್ಟಿ
ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್
ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಪಿಂಕ್ ಬಾಲ್ ಟೆಸ್ಟ್)
ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್
ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್
ಐದನೇ ಟೆಸ್ಟ್: ಜನವರಿ 3-7, ಸಿಡ್ನಿ