ಮೀರತ್: ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಟೀಕೆಗೆ ಗುರಿಯಾಗುತ್ತಿರುವ ಟೀಮ್ ಇಂಡಿಯಾದ ಆಟಗಾರ ಕೆ.ಎಲ್ ರಾಹುಲ್(KL Rahul) ಬ್ಯಾಟ್ ತಯಾರಿಕೆ ಕಂಪನಿಯೊಂದಕ್ಕೆ ಭೇಟಿ ನೀಡಿದ್ದಾರೆ. ರಾಹುಲ್ ಬ್ಯಾಟ್ ಕಂಪನಿಗೆ ಭೇಟಿ ನೀಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಸಕ್ತ ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿದ ರಾಹುಲ್ ಅವರನ್ನು ಉಪನಾಯಕನ ಸ್ಥಾನದಿಂದ ಕೆಳಗಿಳಿಸಲಾಗಿದೆ. ಮೂರನೇ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ. ಇದರ ಬೆನ್ನಲ್ಲೇ ಅವರು ಉತ್ತರಪ್ರದೇಶದ ಮೀರಾತ್ನಲ್ಲಿರುವ ಪ್ರಸಿದ್ಧ ಬ್ಯಾಟ್ ತಯಾರಿಕೆ ಕಂಪನಿಯೊಂದಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ IND VS AUS: ಭಾರತ-ಆಸೀಸ್ ನಡುವಿನ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ
ರಾಹುಲ್ ಎಸ್ಜಿ ಬ್ಯಾಟ್ ಕಂಪನಿಗೆ ಭೇಟಿ ಸಹ ಮಾಲೀಕ ಪರಾಸ್ ಆನಂದ್ ಜತೆ ಕೆಲ ಕಾಲ ಚರ್ಚೆ ನಡೆಸಿದರು. ಕಳಪೆ ಫಾರ್ಮ್ನಿಂದ ಹೊರಬರುವ ಸಲುವಾಗಿ ನೂತನ ಬ್ಯಾಟ್ಗೆ ಮೊರೆಹೋಗಲಿದ್ದಾರೆ ಎನ್ನಲಾಗಿದೆ. ಜತೆಗೆ ತಮ್ಮ ಬ್ಯಾಟ್ನ ಗಾತ್ರ, ತೂಕದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರಾಹುಲ್ ಜತೆ ವೇಗಿ ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್ ಕೂಡ ಬ್ಯಾಟ್ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಹುಲ್ ಪರಾಸ್ ಆನಂದ್ ಜತೆ ಮಾತುಕತೆ ನಡೆಸುತ್ತಿರುವ ವಿಡಿಯೊವನ್ನು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಾಕಿದ್ದಾರೆ.