IND VS AUS: ಸಿಕ್ಸರ್​ ಬಾರಿಸಿ ರವಿ ಶಾಸ್ತ್ರಿ ದಾಖಲೆ ಮುರಿದ ವೇಗಿ ಉಮೇಶ್​ ಯಾದವ್​​ - Vistara News

ಕ್ರಿಕೆಟ್

IND VS AUS: ಸಿಕ್ಸರ್​ ಬಾರಿಸಿ ರವಿ ಶಾಸ್ತ್ರಿ ದಾಖಲೆ ಮುರಿದ ವೇಗಿ ಉಮೇಶ್​ ಯಾದವ್​​

ಆಸೀಸ್​(IND VS AUS) ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಉಮೇಶ್​ ಯಾದವ್​ 2 ಸಿಕ್ಸರ್​ ಬಾರಿಸುವ ಮೂಲಕ ವಿರಾಟ್​ ಕೊಹ್ಲಿಯ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

VISTARANEWS.COM


on

IND VS AUS: Umesh Yashdav breaks Ravi Shastri's record with a six
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್​: ಟೀಮ್​ ಇಂಡಿಯಾದ ವೇಗಿ ಉಮೇಶ್​ ಯಾದವ್(Umesh Yadav)​ ಅವರು ಆಸೀಸ್​(IND VS AUS) ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟ್​ ದಿಗ್ಗಜ ರವಿ ಶಾಸ್ತ್ರಿ(Ravi Shastri) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

ಇಂದೋರ್​ನಲ್ಲಿ ಆರಂಭವಾದ ಈ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ಮೊದಲ ಇನಿಂಗ್ಸ್​ನಲ್ಲಿ 109 ರನ್​ಗೆ ಆಲೌಟ್​ ಆಯಿತು. ಗುರಿ ಬೆನ್ನಟ್ಟಿದ ಆಸೀಸ್ 4 ವಿಕೆಟ್​ಗೆ 156 ರನ್​ ಗಳಿಸಿ ಸದ್ಯ 47 ರನ್​ಗಳ ಇನಿಂಗ್ಸ್​ ಮುನ್ನಡೆ ಸಾಧಿಸಿದೆ.

ಇದೇ ಪಂದ್ಯದಲ್ಲಿ ಎರಡು ಸಿಕ್ಸರ್​ ಸಿಡಿಸಿ ಮಿಂಚಿದ ಉಮೇಶ್​ ಯಾದವ್​ ನೂತನ ದಾಖಲೆಯೊಂದನ್ನು ಬರೆದರು. 2 ಸಿಕ್ಸರ್​ ಬಾರಿಸಿದ ಅವರು ಟೆಸ್ಟ್​ ಕ್ರಿಕೆಟ್​ನಲ್ಲಿ 24 ಸಿಕ್ಸರ್​ಗಳನ್ನು​ ಪೂರ್ತಿಗೊಳಿಸಿದರು. ಇದರೊಂದಿಗೆ ರವಿ ಶಾಸ್ತ್ರಿ ಹೆಸರಿನಲ್ಲಿದ್ದ ದಾಖಲೆ ಪತನಗೊಂಡಿತು. ಶಾಸ್ತ್ರಿ ಟೀಮ್ ಇಂಡಿಯಾ ಪರ 121 ಟೆಸ್ಟ್ ಇನಿಂಗ್ಸ್ ಆಡಿ 22 ಸಿಕ್ಸರ್​ ಬಾರಿಸಿದ್ದರು. ಇದೀಗ ಉಮೇಶ್​ 24 ಸಿಕ್ಸರ್​ನೊಂದಿಗೆ ಮುನ್ನುಗ್ಗಿದ್ದಾರೆ.

ಇದನ್ನೂ ಓದಿ IND VS AUS: ತಂಡದ ಕಳಪೆ ಪ್ರದರ್ಶನದ ಮಧ್ಯೆಯೂ ಮೈದಾನದಲ್ಲಿ ನೃತ್ಯ ಮಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ಈ ಸಾಧನೆಯ ಜತೆಗೆ ಉಮೇಶ್​ ಅವರು ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೊಹ್ಲಿ 181 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 24 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಇದೀಗ 64 ಇನಿಂಗ್ಸ್​ ಮೂಲಕ ಉಮೇಶ್ ಯಾದವ್ ಕೂಡ 24 ಸಿಕ್ಸರ್​ ಬಾರಿಸಿ ಕೊಹ್ಲಿಯ ಸಾಧನೆಯನ್ನು ಸರಿಗಟ್ಟಿದ್ದಾರೆ. ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ದಾಖಲೆ ಹಾರ್ಡ್​ ಹಿಟ್ಟರ್​ ವೀರೇಂದ್ರ ಸೆಹವಾಗ್​ ಹೆಸರಿನಲ್ಲಿದೆ. ಅವರು ಭಾರತ ಪರ 180 ಟೆಸ್ಟ್ ಇನಿಂಗ್ಸ್ ಆಡಿ ಒಟ್ಟು 91 ಸಿಕ್ಸರ್​ಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Self Harming: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಪತಿಯೊಬ್ಬ ಸಾಲಗಾರರ ಕಾಟಕ್ಕೆ ಪತ್ನಿ ಹಾಗೂ ಮಕ್ಕಳಿಬ್ಬರಿಗೆ ವಿಷವಿಕ್ಕಿ ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥನಾಗಿದ್ದು, ಆಸ್ಪತ್ರೆಪಾಲಾಗಿದ್ದಾನೆ.

VISTARANEWS.COM


on

By

IPL Betting
Koo

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

IPL 2024: ಕಾನ್ವೆ ಬದಲಿಗೆ ಚೆನ್ನೈ ತಂಡ ಸೇರ್ಪಡೆಗೊಂಡ ರಿಚರ್ಡ್ ಗ್ಲೀಸನ್

IPL 2024: ಬಾಂಗ್ಲಾ ವೇಗಿ ಮುಸ್ತಫಿಜುರ್ ರೆಹಮಾನ್ ಅವರು ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ. ಮೇ 3 ರಿಂದ ಬಾಂಗ್ಲಾದೇಶ ತಂಡ ತನ್ನ ತವರಿನಲ್ಲಿ ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯನ್ನಾಡಲು ಅವರು ತವರಿಗೆ ಮರಳಲಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಅವರು ಚೆನ್ನೈ ತಂಡದಿಂದ ಹೊರಗುಳಿದರೆ ಅವರ ಸ್ಥಾನದಲ್ಲಿ ಗ್ಲೀಸನ್ ಆಡುವ ಅವಕಾಶ ಪಡೆಯಬಹುದು.

VISTARANEWS.COM


on

IPL 2024
Koo

ಚೆನ್ನೈ: ನ್ಯೂಜಿಲ್ಯಾಂಡ್​ನ ಆರಂಭಿಕ ಬ್ಯಾಟರ್​, ಚೆನ್ನೈ ತಂಡದ ಆಟಗಾರನಾಗಿದ್ದ ಡೆವೊನ್ ಕಾನ್ವೆ(Devon Conway) ಅವರು ಸಂಪೂರ್ಣವಾಗಿ ಗಾಯದಿಂದ ಚೇತರಿಕೆ ಕಾಣದೆ ಐಪಿಎಲ್​ನಿಂದ(IPL 2024) ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಇಂಗ್ಲೆಂಡ್ ವೇಗಿ ರಿಚರ್ಡ್ ಗ್ಲೀಸನ್(Richard Gleeson) ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಅವರನ್ನು ಮೂಲ ಬೆಲೆ 50 ಲಕ್ಷಕ್ಕೆ ತಂಡಕ್ಕೆ ಸೇರಿಸಲಾಗಿದೆ ಎಂದು ಚೆನ್ನೈ ಫ್ರಾಂಚೈಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಟೂರ್ನಿ ಆರಂಭಕ್ಕೂ ಮುನ್ನವೇ ಕಾನ್ವೆ ಹೆಬ್ಬೆರಳಿನ ಗಾಯಕ್ಕೀಡಾಗಿದ್ದರು. ಮೊದಲ ಹಂತದ ವೇಳಾಪಟ್ಟಿಯ ಬಳಿಕ ತಂಡ ಸೇರುವ ನಿರೀಕ್ಷೆಯಲ್ಲಿದ್ದರು. ಹೀಗಾಗಿ ಇಷ್ಟು ದಿನ ಚೆನ್ನೈ ಕಾದು ನೋಡುವ ತಂತ್ರ ಮಾಡಿತ್ತು. ಆದರೆ ಅವರು ಗಾಯದಿಂದ ಚೇತರಿಕೆ ಕಾಣುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅವರನ್ನು ತಂಡದಿಂದ ಈ ಆವೃತ್ತಿಗೆ ಕೈಬಿಡಲಾಗಿದೆ. ಕಳೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ವೇಳೆ ಕಾನ್ವೆ ಹೆಬ್ಬೆರಳಿನ ಗಾಯಕ್ಕೀಡಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಗ್ಲೀಸನ್ ಇಂಗ್ಲೆಂಡ್​ ಪರ 6 ಟಿ20 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. 9 ವಿಕೆಟ್​ ಕೂಡ ಪಡೆದಿದ್ದಾರೆ.

ಕಾನ್ವೆ ವಿಡಿಯೊ ಮೂಲಕ ತಮ್ಮ ಅಲಭ್ಯತೆಯನ್ನು ಸ್ಪಷ್ಟಪಡಿಸಿದ್ದು, ಚೆನ್ನೈ ತಂಡದ ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ. ಈ ಬಾರಿಯೂ ತಂಡ ಕಪ್​ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದೆ ಎಂದು ಆತ್ಮವಿಶ್ವಾಸದ ನುಡಿಗಳನ್ನಾಡಿದ್ದಾರೆ. ಚೆನ್ನೈ ತಂಡ ಈಗಾಗಲೇ 6 ಪಂದ್ಯಗಳಿಂದ ನಾಲ್ಕು ಪಂದ್ಯಗಳನ್ನು ಗೆದ್ದು 8 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

ಬಾಂಗ್ಲಾ ವೇಗಿ ಮುಸ್ತಫಿಜುರ್ ರೆಹಮಾನ್ ಅವರು ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ. ಮೇ 3 ರಿಂದ ಬಾಂಗ್ಲಾದೇಶ ತಂಡ ತನ್ನ ತವರಿನಲ್ಲಿ ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯನ್ನಾಡಲು ಅವರು ತವರಿಗೆ ಮರಳಲಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಅವರು ಚೆನ್ನೈ ತಂಡದಿಂದ ಹೊರಗುಳಿದರೆ ಅವರ ಸ್ಥಾನದಲ್ಲಿ ಗ್ಲೀಸನ್ ಆಡುವ ಅವಕಾಶ ಪಡೆಯಬಹುದು.

ನಾಳೆ(ಶುಕ್ರವಾರ) ನಡೆಯುವ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​(hennai Super Kings) ತಂಡ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಆಡಲಿದೆ. ಲಕ್ನೋಗೆ(Lucknow Super Giants) ತವರಿನ ಪಂದ್ಯವಾಗಿದೆ. ಪ್ಲೇ ಆಫ್​​ ಪ್ರವೇಶದ ಹಿನ್ನೆಲೆ ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯ.

Continue Reading

ಕ್ರೀಡೆ

LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

LSG vs CSK: ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ಇದುವರೆಗೆ ಐಪಿಎಲ್​ನಲ್ಲಿ ಮೂರು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ತಲಾ ಒಂದು ಪಂದ್ಯಗಳಲ್ಲಿ ಉಭಯ ತಮಡಗಳು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.​

VISTARANEWS.COM


on

LSG vs CSK
Koo

ಲಕ್ನೋ: ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಲಕ್ನೋ ಸೂಪರ್​ ಜೈಂಟ್ಸ್(LSG vs CSK)​ ಗೆಲುವಿನಿ ಹಳಿ ಏರುವ ವಿಶ್ವಾಸದಲ್ಲಿ ನಾಳೆ(ಶುಕ್ರವಾರ) ನಡೆಯುವ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​(hennai Super Kings) ವಿರುದ್ಧ ಆಡಲಿಳಿಯಲಿದೆ. ಈ ಪಂದ್ಯ ಲಕ್ನೋಗೆ(Lucknow Super Giants) ತವರಿನ ಪಂದ್ಯವಾಗಿದೆ. 6ನೇ ಸ್ಥಾನಿಯಾಗಿರುವ ಲಕ್ನೋಗೆ ಪ್ಲೇ ಆಫ್​​ ಪ್ರವೇಶದ ಹಿನ್ನೆಲೆ ಲಕ್ನೋಗೆ ಇದು ಮಹತ್ವದ ಪಂದ್ಯ.

ಪಿಚ್​ ರಿಪೋರ್ಟ್​


ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಮೈದಾನದ ಔಟ್​ ಫೀಲ್ಡ್​ ದೊಡ್ಡದಾಗಿರುವ ಕಾರಣ ಇಲ್ಲಿ ಸಿಕ್ಸರ್​ ಮತ್ತು ಬೌಂಡರಿ ಬಾರಿಸುವುದು ಅಷ್ಟು ಸುಲಭವಲ್ಲ. ಪಿಚ್​ ಕೂಡ ಬ್ಯಾಟಿಂಗ್​ಗೆ ಅಷ್ಟು ಯೋಗ್ಯವಾಗಿಲ್ಲ. 160 ರನ್​ ಬಾರಿಸಿದರೂ ಇದನ್ನು ಹಿಡಿದು ನಿಲ್ಲಸಬಹುದು. ವೇಗಿಗಳಿಗೆ ಇದು ಹೇಳಿ ಮಾಡಿಸಿದ ಪಿಚ್​. ಇಲ್ಲಿ ನಡೆದ ಹಲವು ಪಂದ್ಯಗಳು ಲೋ ಸ್ಕೋರ್​ ಪಂದ್ಯಗಳಾಗಿವೆ. ಹೀಗಾಗಿ ಈ ಪಂದ್ಯವನ್ನು ಸಣ್ಣ ಮೊತ್ತದ ಹೋರಾಟ ಎಂದು ನಿರೀಕ್ಷಿಸಬಹುದು.

ಮುಖಾಮುಖಿ


ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ಇದುವರೆಗೆ ಐಪಿಎಲ್​ನಲ್ಲಿ ಮೂರು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ತಲಾ ಒಂದು ಪಂದ್ಯಗಳಲ್ಲಿ ಉಭಯ ತಮಡಗಳು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.​

ಮಯಾಂಕ್​ ಆಗಮನ


ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಮಾಯಾಂಕ್‌ ಯಾದವ್‌ ಗಾಯಾಳಾಗಿ ಕಳೆದ 3 ಪಂದ್ಯಗಳಲ್ಲಿ ಆಡಿರಲಿಲ್ಲ. ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಅಧಿಕವಾಗಿದೆ ಎಂದು ತಂಡದ ಕೋಚ್​ ಮಾಹಿತಿ ನೀಡಿದ್ದಾರೆ. ಆಡಿದ 6 ಪಂದ್ಯಗಳಲ್ಲಿ ಒಂದಂಕಿ ಗಡಿ ದಾಟದ ದೇವತ್ತ ಪಡಿಕ್ಕಲ್​ ಈ ಪಂದ್ಯದಿಂದ ಹೊರಗುಳಿಯುವುದು ಖಚಿತ. ಡಿ ಕಾಕ್​ ಬದಲು ಕೈಲ್​ ಮೇಯರ್ಸ್​, ಮಾರ್ಕಸ್​ ಸ್ಟೋಯಿನಿಸ್​ ಬದಲಿಗೆ ಮ್ಯಾಟ್​ ಹೆನ್ರಿ ಕಣಕ್ಕಿಳಿಯಬಹುದು. ಕೃಣಾಲ್​ ಪಾಂಡ್ಯ ಸ್ಥಾನದಲ್ಲಿ ಕನ್ನಡಿಗ ಕೃಷ್ಣಪ್ಪ ಗೌತಮ್​ಗೆ ಅವಕಾಶ ಸಿಗಬಹುದು. ನಾಯಕ ರಾಹುಲ್ ಅತಿಯಾದ ರಕ್ಷಣಾತ್ಮಕ ಆಟದಿಂದ ಹೊರಬಂದು ಬಿರುಸಿನ ಬ್ಯಾಟಿಂಗ್​ ನಡೆಸುವ ಅನಿವಾರ್ಯತೆ ಇದೆ.

ಇದನ್ನೂ ಓದಿ IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

ಇದನ್ನೂ ಓದಿ IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

ಚೆನ್ನೈ ತಂಡ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಬಲಿಷ್ಠವಾಗಿದೆ. ಇಂಪ್ಯಾಕ್ಟ್​ ಪ್ಲೇಯರ್​ ಶಿವಂ ದುಬೆ ಮಧ್ಯಮ ಕ್ರಮಾಂಕದಲ್ಲಿ ಸಿಡಿದು ನಿಂತು ತಂಡದ ಬೃಹತ್​ ಮೊತ್ತಕ್ಕೆ ಕಾರಣರಾಗುತ್ತಿದ್ದಾರೆ. ಡೇರಿಯಲ್​ ಮಿಚೆಲ್​, ರಚೀನ್​ ರವೀಂದ್ರ, ನಾಯಕ ಗಾಯಕ್ವಾಡ್​ ಮತ್ತು ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ ತಂಡದ ಬ್ಯಾಟಿಂಗ್​ ಬಲವಾಗಿದ್ದಾರೆ. ವಯಸ್ಸು 40 ದಾಡಿದರೂ ಧೋನಿಯ ಬ್ಯಾಟಿಂಗ್​ ಫಾರ್ಮ್​ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಹಿಂದೆ ಆಡುತ್ತಿದ್ದ ರೀತಿಯಲ್ಲೇ ಬ್ಯಾಟಿಂಗ್​ ನಡೆಸುತ್ತಿದ್ದಾರೆ. ಇದಕ್ಕೆ ಕಳೆದ ಮುಂಬೈ ವಿರುದ್ಧದ ಪಂದ್ಯವೇ ಸಾಕ್ಷಿ. ಪಾಂಡ್ಯ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್​ ಬಾರಿಸಿದ್ದರು.

​ಸಂಭಾವ್ಯ ತಂಡ

ಚೆನ್ನೈ ಸೂಪರ್​ ಕಿಂಗ್ಸ್​: ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್​ ಕೀಪರ್​), ಶಾರ್ದೂಲ್ ಠಾಕೂರ್, ಮುಸ್ತಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.

ಲಕ್ನೋ: ಕೈಲ್​ ಮೇಯರ್ಸ್, ಕೆಎಲ್ ರಾಹುಲ್ (ನಾಯಕ), ದೀಪಕ್​ ಹೂಡಾ, ಮ್ಯಾಟ್​ ಹೆನ್ರಿ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೆ. ಗೌತಮ್​, ರವಿ ಬಿಷ್ಣೋಯ್, ಶಮರ್​ ಜೋಸೆಫ್​, ಯಶ್ ಠಾಕೂರ್, ಮಯಾಂಕ್​ ಯಾದವ್​.

Continue Reading

ಕ್ರಿಕೆಟ್

IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

IPL 2024: ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ 100ನೇ ಟೆಸ್ಟ್ ಪಂದ್ಯವನ್ನಾಡಿದ ಆರ್​.ಅಶ್ವಿನ್​ ಅವರ ಬಗ್ಗೆಯೂ ಶಿವರಾಮಕೃಷ್ಣನ್ ಗಂಭೀರ ಆರೋಪ ಮಾಡಿದ್ದರು. ಅಶ್ವಿನ್​ ಹಿರಿಯ ಆಟಗಾರರಿಗೆ ಗೌರವ ನೀಡುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಕೂಡ ಮಾಡಿದ್ದರು.

VISTARANEWS.COM


on

IPL 2024
Koo

ಚೆನ್ನೈ: ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಮತ್ತು ತಮಿಳುನಾಡು ಮೂಲದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್(Laxman Sivaramakrishnan) ಅವರು ಕ್ರಿಕೆಟ್ ವೀಕ್ಷಕ ವಿವರಣೆಗಾರ ಮತ್ತು ವಿಶ್ಲೇಷಕ ಹರ್ಷ ಭೋಗ್ಲೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಕಾರಣ ಹರ್ಷ ಭೋಗ್ಲೆ(Harsha Bhogle) ಅವರು ಚೆನ್ನೈ ಸೂಪರ್​ ಸಿಂಗ್ಸ್ ತಂಡದ(IPL 2024)​ ವಿರುದ್ಧ ಮಾಡಿದ ಒಂದು ಟ್ವೀಟ್​.

ಭಾನುವಾರ ಚೆನ್ನೈ ಮತ್ತು ಮುಂಬೈ(MI vs CSK) ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ 6 ವಿಕೆಟ್​ಗೆ 206 ರನ್​ ಬಾರಿಸಿತು. ಈ ವೇಳೆ ಟ್ವೀಟ್​ ಮಾಡಿದ ಭೋಗ್ಲೆ, “206 ಉತ್ತಮ ಸ್ಕೋರ್. ಆದರೆ, ಈ ಸ್ಟೇಡಿಯಂನಲ್ಲಿ ಸ್ವಲ್ಪ ಇಬ್ಬನಿ ಸಮಸ್ಯೆಯಿದೆ. ಚೆನ್ನೈ ತಂಡದಲ್ಲಿ ಹೆಚ್ಚಿನ ಬೌಲಿಂಗ್ ಆಯ್ಕೆಗಳಿಲ್ಲದಿರುವುದರಿಂದ ತಂಡಕ್ಕೆ ಇನ್ನೂ 20ರನ್​ಗಳ ಅಗತ್ಯವಿತ್ತು ಎಂದು ಭಾವಿಸುತ್ತದೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.


ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಣ್ ಶಿವರಾಮಕೃಷ್ಣನ್, ನೀವು ಚೆನ್ನೈ ಆಟಗಾರರನ್ನು ಯಾವಾಗಲೂ ಕಡೆಗಣಿಸುತ್ತೀರಿ. ಭಾರತೀಯ ಕ್ರಿಕೆಟ್‌ಗೆ ನಿಮ್ಮ ಕೊಡುಗೆ ಏನು ಎಂದು ನಿಜವಾಗಿಯೂ ಆಶ್ಚರ್ಯವಾಗುತ್ತದೆ” ಎಂದು ಖಾರವಾಗಿಯೇ ಉತ್ತರಿಸಿದ್ದಾರೆ. ಈ ಟ್ವೀಟ್​ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಶಿವರಾಮಕೃಷ್ಣನ್ ಅವರು ಇದನ್ನು ಡಿಲಿಟ್​ ಮಾಡಿದ್ದಾರೆ. ಆದರೂ ಕೆಲವು ಸ್ಕ್ರೀನ್​ ಶಾಟ್​ಗಳು ಈಗ ವೈರಲ್​ ಆಗುತ್ತಿದೆ.

ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ 100ನೇ ಟೆಸ್ಟ್ ಪಂದ್ಯವನ್ನಾಡಿದ ಆರ್​.ಅಶ್ವಿನ್​ ಅವರ ಬಗ್ಗೆಯೂ ಶಿವರಾಮಕೃಷ್ಣನ್ ಗಂಭೀರ ಆರೋಪ ಮಾಡಿದ್ದರು. ಅಶ್ವಿನ್​ ಹಿರಿಯ ಆಟಗಾರರಿಗೆ ಗೌರವ ನೀಡುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಕೂಡ ಮಾಡಿದ್ದರು.

“100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಅಶ್ವಿನ್​ಗೆ ಶುಭ ಕೋರಲು ನಾನು ಹಲವು ಕರೆಗಳನ್ನು ಮಾಡಿದೆ. ಆದರೆ ಅವರು ಈ ಕರೆಗಳನ್ನು ಸ್ವೀಕರಿಸಿಲ್ಲ. ನ್ನನ ಕರೆಗಳನ್ನು ಕಟ್​ ಮಾಡುವ ಮೂಲಕ ಅಗೌರವ ತೋರಿದ್ದಾರೆ ಎಂದು ಲಕ್ಷ್ಮಣ್ ಶಿವರಾಮಕೃಷ್ಣನ್ ಆರೋಪಿಸಿದ್ದಾರೆ. “ನನ್ನ ಕರೆಯನ್ನು ಕಟ್ ಮಾಡಿದ ಬಳಿಕ ನಾನು ಆತನಿಗೆ ಸಂದೇಶ ಕಳುಹಿಸಿದೆ, ಅದಕ್ಕೂ ಯಾವುದೇ ಉತ್ತರವಿಲ್ಲ. ಇದು ನಮ್ಮಂತಹ ಮಾಜಿ ಕ್ರಿಕೆಟಿಗರು ಪಡೆಯುತ್ತಿರುವ ಗೌರವ” ಎಂದು ಪೋಸ್ಟ್​ನಲ್ಲಿ ಬರೆದಿದ್ದರು.

ಇದನ್ನೂ ಓದಿ IPL 2024: ಕೆಕೆಆರ್ ಸೋಲು ಕಂಡು ಕಣ್ಣೀರು ಸುರಿಸಿದ ನಟ ಶಾರೂಖ್ ಖಾನ್‌; ಫೋಟೊ ವೈರಲ್​

ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ಭಾರತ ಪರ 9 ಟೆಸ್ಟ್ ಮತ್ತು 16 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್​ನಲ್ಲಿ 130, ಏಕದಿನದಲ್ಲಿ ಕೇವಲ 5 ರನ್​ ಗಳಿಸಿದ್ದಾರೆ. ಬೌಲಿಂಗ್​ನಲ್ಲಿ ಒಟ್ಟು 41 ವಿಕೆಟ್​ ಉರುಳಿಸಿದ್ದಾರೆ. ಹೆಚ್ಚಾಗಿ ವಿವಾದಾತ್ಮಕ ಹೇಳಿಕೆಯಿಂದಲೇ ಇವರು ಗುರುತಿಸಿಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ಕಾಮೆಂಟರಿಯಲ್ಲಿ ಹರ್ಷ ಭೋಗ್ಲೆ ಚಿರಪರಿಚಿತ ಹೆಸರು. ಕಂಚಿನ ಕಂಠದ ಮೂಲಕ ವಿಶ್ಲೇಷಣೆ ಮಾಡುವ ಚಾಕಚಕ್ಯತೆ, ಭಾಷೆಯ ಮೇಲಿನ ಹಿಡಿತ ಅತ್ಯದ್ಭುತ. ಇವರ ಧ್ವನಿಯನ್ನು ಹೈವೋಲ್ಟೇಜ್​ ಪಂದ್ಯಗಳಲ್ಲಿ ಕೇಳುವುದೇ ಒಂದು ಸೌಭಾಗ್ಯ ಎಂದರೂ ತಪ್ಪಾಗಲಾರದು. ಮೂಲತಃ ಹೈದರಾಬಾದ್ ನವರಾದ ಹರ್ಷ ಭೋಗ್ಲೆ ತನ್ನ 19ನೇ ವಯಸ್ಸಿನಲ್ಲೇ ಕ್ರಿಕೆಟ್ ಕಾಮೆಂಟರಿ ಆರಂಭಿಸಿದ್ದರು. ಅಂದು ಆಲ್ ಇಂಡಿಯಾ ರೇಡಿಯೋದಲ್ಲಿ ವೀಕ್ಷಕ ವಿವರಣೆ ನೀಡುತ್ತಿದ್ದ ಹರ್ಷ ಆ ಬಳಿಕ ಟಿವಿ ವೀಕ್ಷಕ ವಿವರಣೆಯಲ್ಲಿ ದೊಡ್ಡ ಹೆಸರು ಮಾಡಿದರು.

Continue Reading
Advertisement
Minister Santosh Lad statement in Sandur Taluk
ಬಳ್ಳಾರಿ9 mins ago

Lok Sabha Election 2024: ಬೆಲೆ ಏರಿಕೆ ಮಾಡಿದ್ದೇ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ: ಸಂತೋಷ್‌ ಲಾಡ್‌

Karnataka Weather
ಮಳೆ24 mins ago

Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Murder case Man stabbed to death 9 times for refusing to love
ಧಾರವಾಡ43 mins ago

Murder Case: ಕಾರ್ಪೋರೇಟರ್‌ ಮಗಳ ಕೊಲೆ; ಪ್ರೀತಿಸಲು ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಫಯಾಜ್‌!

Infosys
ವಾಣಿಜ್ಯ46 mins ago

Infosys Q4 Result: ಇನ್ಫೋಸಿಸ್‌ಗೆ 7,969 ಕೋಟಿ ರೂ. ನಿವ್ವಳ ಲಾಭ; 28 ರೂ.ಗಳ ಡಿವಿಡೆಂಡ್‌ ಘೋಷಣೆ

EPF New rules
ವಾಣಿಜ್ಯ48 mins ago

Money Guide: ತುರ್ತು ಚಿಕಿತ್ಸೆಗೆ ಪಿಎಫ್​ನಿಂದ 1 ಲಕ್ಷ ರೂ. ಪಡೆಯಬಹುದು; ಹೇಗೆ ಗೊತ್ತಾ?

Siriya Crime
ಕ್ರೈಂ53 mins ago

Honour Killing: ರಸ್ತೆ ಬದಿಯಲ್ಲೇ ಮಹಿಳೆಯನ್ನು ದರದರನೆ ಎಳೆದು, ತಲೆಗೆ ಹೊಡೆದು ಕೊಲೆ ಮಾಡಿದ್ರು; ಇದೇನು ಮರ್ಯಾದೆ ಹತ್ಯೆಯಾ?

Flop Film
ಸಿನಿಮಾ1 hour ago

Flop Film: ಫ್ಲಾಪ್ ಎಂದು ಕರೆಸಿಕೊಂಡ ಈ ಚಿತ್ರದ 25 ಕೋಟಿ ಟಿಕೆಟ್ ಮಾರಾಟವಾಗಿದ್ದು ಹೇಗೆ; ಇಲ್ಲಿದೆ ರೋಚಕ ಸಿನಿ ಇತಿಹಾಸ

Summer Fashion
ಫ್ಯಾಷನ್1 hour ago

Summer Fashion: ಸಮ್ಮರ್‌ ಹೈ ಸ್ಟ್ರೀಟ್‌ ಫ್ಯಾಷನ್‌ಗೆ ಮರಳಿದ 3 ಶೈಲಿಯ ಬ್ಯಾಕ್‌ಲೆಸ್‌ ಔಟ್‌ಫಿಟ್ಸ್

Video Viral
ಪ್ರಮುಖ ಸುದ್ದಿ1 hour ago

Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

IPL Betting
ಮಂಡ್ಯ1 hour ago

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌