ನವದೆಹಲಿ: ಆಸ್ಟ್ರೇಲಿಯಾ(IND VS AUS) ವಿರುದ್ಧ ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ(Ravindra Jadeja) ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.
ಪಂದ್ಯದ ಎರಡನೇ ಸೆಷನ್ನಲ್ಲಿ 81 ರನ್‌ಗಳಿಸಿದ್ದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ(Usman Khawaja) ಅವರ ವಿಕೆಟ್ ಪಡೆದು ಮಿಂಚಿದ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್ ಪಡೆದ ಸಾಧನೆ ಮಾಡಿದರು. ಈ ವಿಕೆಟ್‌ನೊಂದಿಗೆ ಜಡೇಜಾ ಕಪಿಲ್ ದೇವ್ ಮತ್ತು ಇಮ್ರಾನ್ ಖಾನ್ ಅವರ ದಾಖಲೆಯನ್ನೂ ಹಿಂದಿಕ್ಕಿದ್ದಾರೆ. ಅಲ್ಲದೆ ಜಡೇಜಾ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗವಾಗಿ 2500 ರನ್ ಮತ್ತು 250 ವಿಕೆಟ್‌ಗಳನ್ನು ಗಳಿಸಿದ ಏಷ್ಯಾದ ಮೊದಲ ಮತ್ತು ಟೀಮ್ ಇಂಡಿಯಾದ ಎರಡನೇ ಆಟಗಾರ ಎನಿಸಿಕೊಂಡರು.
ಇದನ್ನೂ ಓದಿ IND VS AUS: ನೂರನೇ ಟೆಸ್ಟ್ ಪಂದ್ಯವನ್ನಾಡಿದ ಪೂಜಾರಗೆ ವಿಶೇಷ ಗೌರವ ನೀಡಿದ ಬಿಸಿಸಿಐ
ಜಡೇಜಾ 62 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಇಮ್ರಾನ್ ಖಾನ್ 64 ಮತ್ತು ಕಪಿಲ್ ದೇವ್ 65 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಸದ್ಯ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡು 218 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿದೆ.