ನವದೆಹಲಿ: ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸಜ್ಜಾಗಿದೆ. ಆದರೆ ತವರಿನಲ್ಲಿ ನಡೆಯುವ ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ ನೆಟ್ಸ್‌ನಲ್ಲಿ ಹೆಚ್ಚುವರಿ ಅವಧಿಯ ಅಭ್ಯಾಸ ನಡೆಸಿದ್ದಾರೆ.
ಭಾರತ ಮತ್ತು ಆಸೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಶುಕ್ರವಾರ (ಫೆ.17) ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ತಂಡದ ಸಹ ಆಟಗಾರರು ಅಂಗಳಕ್ಕೆ ಬರುವ ಅರ್ಧ ಗಂಟೆ ಮುಂಚಿತವಾಗಿಯೇ ಕ್ರೀಡಾಂಗಣಕ್ಕೆ ಬಂದು ನೆಟ್ಸ್‌ನಲ್ಲಿ ಹೆಚ್ಚುವರಿ ಅಭ್ಯಾಸ ನಡೆಸಿದ್ದಾರೆ.
ಇದನ್ನೂ ಓದಿ Virat kohli : ಕೊಹ್ಲಿಗೆ ಸಮಾಧಾನ ಹೇಳಿದ ಬಗ್ಗೆ ಏಳು ತಿಂಗಳ ಬಳಿಕ ಕಾರಣ ಕೊಟ್ಟ ಪಾಕ್ ನಾಯಕ ಬಾಬರ್ ಅಜಮ್
ಇದು ವಿರಾಟ್ ಕೊಹ್ಲಿ ತವರಿನಲ್ಲಿ ಆರು ವರ್ಷಗಳ ಬಳಿಕ ಆಡುತ್ತಿರುವ ಟೆಸ್ಟ್ ಪಂದ್ಯವಾಗಿದೆ. ಹೀಗಾಗಿ ತವರಿನ ಅಭಿಮಾನಿಗಳ ಮುಂದೆ ಉತ್ತಮ ಪ್ರದರ್ಶನ ತೋರುವ ಇರಾದೆಯಲ್ಲಿರುವ ಕಾರಣ ಅವರು ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸ್ಪಿನ್ ದಾಳಿಗೆ ತಿಣುಕಾಡಿದ ಕೊಹ್ಲಿ ಈ ಪಂದ್ಯದಲ್ಲಿ ಸ್ಪಿನ್ ದಾಳಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಹೆಚ್ಚುವರಿ ಸ್ಪಿನ್ ಅಭ್ಯಾಸ ನಡೆಸಿದ್ದಾರೆ.