ಇಂದೋರ್: ಈಗಾಗಲೇ ಆಸ್ಟ್ರೇಲಿಯಾ(IND VS AUS) ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದ ಆಡುವ ಬಳಗದಲ್ಲಿ ಕೆ.ಎಲ್. ರಾಹುಲ್(KL Rahul) ಅವರ ಸ್ಥಾನ ಅಲುಗಾಡುತ್ತಿದೆ. ಅವರನ್ನು ಉಪನಾಯಕತ್ವದಿಂದಲೂ ಕೆಳಗಿಳಿಸಲಾಗಿದೆ. ಅವರ ಬದಲು ಶುಭಮನ್ ಗಿಲ್‌ಗೆ(shubman gill) ಅವಕಾಶ ನೀಡಬೇಕೆಂಬುವುದು ಮಾಜಿ ಆಟಗಾರರ ಒತ್ತಾಯವಾಗಿದೆ.
ಈ ಎಲ್ಲ ಚರ್ಚೆಗಳ ಮಧ್ಯೆ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ(Rohit Sharma) ಅವರು ರಾಹುಲ್ ವಿಚಾರವಾಗಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಮಂಗಳವಾರ(ಫೆ.28) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್, ಕೆ.ಎಲ್ ರಾಹುಲ್ ಅವರನ್ನು ಉಪನಾಯಕನ ಸ್ಥಾನದಿಂದ ವಜಾ ಮಾಡಿರುವುದು ಏನನ್ನೂ ಸೂಚಿಸುವುದಿಲ್ಲ ಎಂದು ಹೇಳಿದ್ದಾರೆ.
ರೋಹಿತ್ ಅವರ ಈ ಹೇಳಿಕೆಯಿಂದ ಮೂರನೇ ಪಂದ್ಯದಲ್ಲಿ ರಾಹುಲ್‌ಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ ಅಂತಿಮವಾಗಿ ಯಾರಿಗೆ ಅವಕಾಶ ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
ಬಿಸಿಸಿಐ ಮೂಲಗಳ ಪ್ರಕಾರ ಮೂರನೇ ಪಂದ್ಯದಲ್ಲಿ ರಾಹುಲ್ ಬದಲು ಶುಭ್‌ಮನ್ ಗಿಲ್‌ಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಸೋಮವಾರ ಕೆ.ಎಲ್. ರಾಹುಲ್ ಮತ್ತು ಶುಭಮನ್ ಗಿಲ್ ಅವರಿಗೆ ಕೋಚ್ ರಾಹುಲ್ ದ್ರಾವಿಡ್ ಜತೆಯಾಗಿ ಕ್ಲಾಸ್ ತೆಗೆದುಕೊಂದ್ದರು. ಈ ವೇಳೆಯೂ ರಾಹುಲ್ ನಿರೀಕ್ಷಿತ ಪ್ರದರ್ಶನ ತೋರಿಲಲ್ ಎಂಬ ಮಾತುಗಳು ಕೇಳಿಬಂದಿವೆ. ಹೀಗಾಗಿ ಇನ್‌ಫಾರ್ಮ್ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.