ಢಾಕಾ: ಭಾರತ ವಿರುದ್ಧದ ಮೂರು ಪಂದ್ಯಗಳ ಏಕ ದಿನ ಸರಣಿಯಲ್ಲಿ ಈಗಾಗಲೇ 2-0 ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡು ಯಶಸ್ಸಿನ ಅಲೆಯಲ್ಲಿ ತೇಲಾಡುತ್ತಿರುವ ಬಾಂಗ್ಲಾದೇಶ(IND VS BAN) ಮುಂದಿನ ಟೆಸ್ಟ್ ಸರಣಿಗೆ 17 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಭಾರತ ಮತ್ತು ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಡಿಸೆಂಬರ್ 14ರಿಂದ ಆರಂಭವಾಗಲಿದೆ. ತಂಡದಲ್ಲಿ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಮುಷ್ಫಿಕರ್ ರಹೀಂ, ಯಾಸಿರ್ ಅಲಿ, ಹಾಗೂ ಟಸ್ಕಿನ್ ಅಹಮ್ಮದ್ ಸ್ಥಾನ ಪಡೆದಿದ್ದಾರೆ. ಝಾಕೀರ್ ಹಸನ್ ಇದೇ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತಂಡವನ್ನು ಶಕಿಬ್ ಅಲ್ ಹಸನ್ ಮುನ್ನಡೆಸಲಿದ್ದಾರೆ.
“ಝಾಕೀರ್ ಪ್ರತಿಭಾನ್ವಿತ ಆಟಗಾರರಲ್ಲಿ ಒಬ್ಬರೆನಿಸಿಕೊಂಡಿದ್ದು, ಈ ವರ್ಷದಲ್ಲಿ ನಡೆದ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕಳೆದ ವಾರ ನಡೆದ ಭಾರತ ‘ಎ’ ವಿರುದ್ಧದ ಟೆಸ್ಟ್ ಪಂದ್ಯದಲ್ಲಿಯೂ ಅದ್ಭುತ ಇನಿಂಗ್ಸ್ ಆಡಿದ್ದರು. ಆದ್ದರಿಂದ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ” ಎಂದು ಹೇಳುವ ಮೂಲಕ ಬಾಂಗ್ಲಾ ಕ್ರಿಕೆಟ್ ಮಂಡಳಿ ಝಾಕೀರ್ ಆಯ್ಕೆಯನ್ನು ಸಮರ್ಥಿಸಿಕೊಂಡಿದೆ.
ಮೊದಲ ಟೆಸ್ಟ್ ಪಂದ್ಯಕ್ಕೆ ಬಾಂಗ್ಲಾದೇಶ ತಂಡ
ಮೊಹಮದುಲ್ಲಾ ಹಸನ್, ನಜ್ಮುಲ್ ಹಸನ್ ಶಾಂಟೋ, ಮೊಮಿನುಲ್ ಹಕ್, ಯಾಸಿರ್ ಅಲಿ ಚೌಧರಿ, ಮುಷ್ಫಿಕರ್ ರಹೀಂ, ಶಕಿಬ್ ಅಲ್ ಹಸನ್(ನಾಯಕ), ಲಿಟನ್ ದಾಸ್, ನೂರುಲ್ ಹಸನ್, ಮೆಹದಿ ಹಸನ್ ಮಿರಜ್, ತೈಜುಲ್ ಇಸ್ಲಾಂ, ಟಸ್ಕಿನ್ ಅಹಮ್ಮದ್, ಸಯ್ಯದ್ ಖಾಲಿದ್ ಅಹಮ್ಮದ್, ಎಬೊದತ್ ಹೊಸೈನ್, ಶೌರಿಫುಲ್ ಇಸ್ಲಾಂ, ಝಾಕೀರ್ ಹಸನ್, ರೆಜೌರ್ ರೆಹಮಾನ್ ರಾಜಾ, ಅನ್ಮುಲ್ ಹಕ್ ಬಿಜೈ.