ಚತ್ತೋಗ್ರಾಮ್: ಈಗಾಗಲೇ ಸರಣಿ ಗೆದ್ದು ನಿರಾಳವಾಗಿರುವ ಬಾಂಗ್ಲಾದೇಶ ತಂಡ ಸರಣಿಯ ಅಂತಿಮ ಏಕ ದಿನ ಪಂದ್ಯದಲ್ಲಿ ಪ್ರವಾಸಿ ಭಾರತ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ನಡೆಸಲಿದೆ. ಭಾರತ ಪರ ಇಶಾನ್ ಕಿಶನ್ ಮತ್ತು ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಪಿಚ್ ರಿಪೋರ್ಟ್
ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕ ದಿನ ಪಂದ್ಯ ನಡೆಯುವ ಚತ್ತೋಗ್ರಾಮ್‌ನ ಝಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಢಾಕಾದ ಶೇರ್ ಎ ಬಾಂಗ್ಲಾ ಪಿಚ್ಗಿಂತ ಇಲ್ಲಿ ಉತ್ತಮ ಬ್ಯಾಟಿಂಗ್ ನಡೆಸಬಹುದು.
ತಂಡಗಳು
ಭಾರತ: ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ನಾಯಕ), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ: ಅನಾಮುಲ್ ಹಕ್, ಲಿಟನ್ ದಾಸ್ (ನಾಯಕ), ಶಕೀಬ್ ಅಲ್ ಹಸನ್, ಯಾಸಿರ್ ಅಲಿ, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಎಬಾಡೋತ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್, ಟಸ್ಕಿನ್ ಅಹ್ಮದ್.
ಇದನ್ನೂ ಓದಿ | Team India | ಮೊಹಮ್ಮದ್ ಶಮಿ ಸ್ಥಾನ ತುಂಬಲು ತ್ರಿಕೋನ ಸ್ಪರ್ಧೆ, ಯಾರಿಗೆ ಸಿಗಲಿದ ಅವಕಾಶ?