ಆ್ಯಂಟಿಗುವಾ: ಹಾಲಿ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ(Virat Kohli) ಅವರು ಸತತ ಬ್ಯಾಟಿಂಗ್ ವೈಫಲ್ಯ ಎದುರಿಸುತ್ತಿರುವ ಬಗ್ಗೆ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್(India batting coach) ವಿಕ್ರಮ್ ರಾಥೋರ್(Vikram Rathour) ಬೇಸರ ವ್ಯಕ್ತಪಡಿಸಿದ್ದಾರೆ. ಕೊಹ್ಲಿಯ ಬ್ಯಾಟಿಂಗ್ ಕಂಡು ಅತೀವ ಬೇಸರ ತಂದೊಡ್ಡಿದೆ ಎಂದು ಹೇಳಿದ್ದಾರೆ.
ಕೊಹ್ಲಿ ಬ್ಯಾಟಿಂಗ್ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿಕ್ರಮ್ ರಾಥೋರ್, “ಕೊಹ್ಲಿ ಬ್ಯಾಟಿಂಗ್ ಬಗ್ಗೆ ನನಗೆ ತೃಪ್ತಿಯಿಲ್ಲ. ಮುಂದಿನ ಪಂದ್ಯದಲ್ಲಿ ಕೊಹ್ಲಿ ಉತ್ತಮ ರನ್ ಗಳಿಸಿದರೆ ನಾನು ಹೆಚ್ಚು ಸಂತಸಪಡುತ್ತೇನೆ. ಟೀಮ್ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡದ ಆಟಗಾರರು ಉತ್ತಮವಾಗಿ ರನ್ ಗಳಿಸುತ್ತಿದ್ದಾರೆ. ಇದು ಒಳ್ಳೆಯ ವಿಚಾರ” ಎಂದು ಹೇಳಿದರು.
ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್ ಬಾಲ್ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಅವರು ಹೆಚ್ಚು ಸಕ್ಸನ್ ಕಂಡಿರುವುದು ಮಧ್ಯಮ ಕ್ರಮಾಂಕದಲ್ಲಿ.
ಇದನ್ನೂ ಓದಿ Virat Kohli: ಶ್ರೀಲಂಕಾದ ಮಾಜಿ ಆಟಗಾರನ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ
ಸ್ಲೋ ಪಿಚ್ ಕೂಡ ಕಾರಣ?
ಟಿ20 ವಿಶ್ವಕಪ್ಗೆ ತಂಡ ಪ್ರಕಟಿಸುವ ಮುನ್ನವೇ ಅಮೆರಿಕ ಮತ್ತು ವಿಂಡೀಸ್ ಪಿಚ್ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಲ್ಲ ಎನ್ನುವ ಚರ್ಚೆಗಳು ಕೂಡ ನಡೆದಿತ್ತು. ಅಲ್ಲದೆ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಇದೀಗ ಕೊಹ್ಲಿಯ ಬ್ಯಾಟಿಂಗ್ ವೈಫಲ್ಯಕ್ಕೆ ನಿಧಾನಗತಿಯ ಪಿಚ್ ಕೂಡ ಕಾರಣವಾಗಿರಬಹುದು.
ವಿಶ್ವ ದಾಖಲೆ ಸನಿಹ ಕೊಹ್ಲಿ
ಇಂದು ನಡೆಯುವ ಟಿ20 ವಿಶ್ವಕಪ್ನ(T20 World Cup 2024) ಸೂಪರ್-8 ಪಂದ್ಯದಲ್ಲಿ(IND vs BAN Super 8 Match) ಬಾಂಗ್ಲಾದೇಶ(IND vs BAN) ವಿರುದ್ಧ ಕೊಹ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ. ಜಯವರ್ಧನೆ 31 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 111 ಬೌಂಡರಿ ಬಾರಿಸಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಸದ್ಯ 104* ಬೌಂಡರಿ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.