ಪುಣೆ: ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಭಾರತ ತಂಡ ಗುರುವಾರ ನಡೆಯುವ ಪಂದ್ಯದಲ್ಲಿ ಬಾಂಗ್ಲಾದೇಶ(IND vs BAN) ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್, ವಿಶ್ವಕಪ್ ಮುಖಾಮುಖಿ, ಹವಾಮಾನ ವರದಿ ಮತ್ತು ಸಂಭಾವ್ಯ ತಂಡದ ಸಂಪೂರ್ಣ ಮಾಹಿತಿ ಇಂತಿದೆ.
ಪಿಚ್ ರಿಪೋರ್ಟ್
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಪಿಚ್ ಸಂಪೂರ್ಣ ಬ್ಯಾಟಿಂಗ್ ಸ್ನೇಹಿಯಾಗಿದೆ. ಇಲ್ಲಿ ನಡೆದ ಹಿಂದಿನ ಏಳು ಏಕದಿನ ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ 300 ಪ್ಲಸ್ ರನ್ ಆಗಿದೆ. ಆದರೆ ಇಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚು. ಏಕೆಂದರೆ 5 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಗೆದ್ದರೆ, 2 ಬಾರಿ ಮಾತ್ರ ಚೇಸಿಂಗ್ ನಡೆಸಿದ ತಂಡ ಗೆದ್ದಿದೆ. ಹೀಗಾಗಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು. ವೇಗಿಗಳಿಗೆ ಇಲ್ಲಿ ಹೆಚ್ಚು ಮೇಲುಗೈ ಸಾಧಿಸಬಹುದು. ಹೀಗಾಗಿ ಉಭಯ ತಂಡಗಳು ಸ್ಪಿನ್ಗಿಂತ ವೇಗದ ಬೌಲಿಂಗ್ಗೆ ಹೆಚ್ಚಿನ ಒತ್ತು ನೀಡಬಹುದು.
ಹವಾಮಾನ ವರದಿ
ಪುಣೆಯಲ್ಲಿ ಯಾವುದೇ ಮಳೇಯ ಭೀತಿ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಬಿಸಿಲಿನ ಧಗೆ ಹೆಚ್ಚಿರಲಿದೆ ಎಂದು ತಿಳಿಸಿದೆ. ಪಂದ್ಯ ನಡೆಯುವ ಮಧ್ಯಾಹ್ನ ಇಲ್ಲಿನ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಇದರಲಿದೆ ಎಂದು ವರದಿಯಲ್ಲಿ ತಿಳಿಸಿದೆ. ಸಂಜೆಯ ವೇಳೆ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೀಗಾಗಿ ಪಂದ್ಯವನ್ನು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು.
ವಿಶ್ವಕಪ್ ಮುಖಾಮುಖಿ
ಭಾರತ ಮತ್ತು ಬಾಂಗ್ಲಾದೇಶ ವಿಶ್ವಕಪ್ನಲ್ಲಿ ಇದುವರೆಗೆ 4 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಮೂರು ಪಂದ್ಯಗಲ್ಲು ಗೆದ್ದರೆ, ಬಾಂಗ್ಲಾ 1 ಪಂದ್ಯ ಗೆದ್ದಿದೆ. ಇತ್ತಂಡಗಳು ವಿಶ್ವಕಪ್ನಲ್ಲಿ ಮೊದಲು ಮುಖಾಮುಖಿಯಾಗಿದ್ದು 2007ರಲ್ಲಿ. ಈ ಪಂದ್ಯದಲ್ಲಿ ಭಾರತ 5 ವಿಕೆಟ್ಗಳ ಸೋಲು ಕಂಡಿತ್ತು. ಆಗ ರಾಹುಲ್ ದ್ರಾವಿಡ್ ಅವರ ನಾಯಕತ್ವ ಭಾರತ ಆಡಿತ್ತು. ಇದಾದ ಬಳಿಕ ಭಾರತ ಆಡಿದ ಮೂರು ಪಂದ್ಯಗಳಲ್ಲಿಯೂ ಗೆದ್ದು ಬೀಗಿದೆ. ಸಾರಸ್ಯವೆಂದರೆ ಈ ಬಾರಿ ದ್ರಾವಿಡ್ ಭಾರತ ತಂಡದ ಕೋಚ್ ಆಗಿ ಅಂದಿನ ಸೋಲಿಗೆ ಸೇಡು ತೀರಿಸುವ ಇರಾದೆಯಲ್ಲಿದ್ದಾರೆ.
ಇದನ್ನೂ ಓದಿ Israel Palestine War: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲು ಸಿದ್ಧತೆ, ಬಿಗಿ ಭದ್ರತೆ
ಸಂಭಾವ್ಯ ತಂಡಗಳು
ಭಾರತ: ರೋಹಿತ್ ಶರ್ಮ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್/ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್.
ಬಾಂಗ್ಲಾದೇಶ: ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್.