ಮುಂಬಯಿ: ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಹೆಬ್ಬೆರಳಿನ ಗಾಯದಿಂದ ತವರಿಗೆ ಮರಳಿದ್ದ ರೋಹಿತ್ ಶರ್ಮ ಇದೀಗ ಚೇತರಿಸಿಕೊಂಡಿದ್ದು ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ತಂಡಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ.
ರೋಹಿತ್ ಗಾಯದಿಂದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ. ಇವರ ಅನುಪಸ್ಥಿಯಲ್ಲಿ ಕೆ.ಎಲ್. ರಾಹುಲ್ ತಂಡದ ನಾಯಕತ್ವ ವಹಿಸಿದ್ದರು. ಇದೀಗ ರೋಹಿತ್ ಮಿರ್‌ಪುರದಲ್ಲಿ ನಡೆಯಲಿರುವ ಸರಣಿಯ ಅಂತಿಮ ಪಂದ್ಯಕ್ಕೆ ತಂಡಕ್ಕೆ ಮರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ.
“ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ದೊಡ್ಡ ಅಪ್ಡೇಟ್ ಸಿಕ್ಕಿದೆ. ಅದರಂತೆ ರೋಹಿತ್ ಎರಡನೇ ಟೆಸ್ಟ್‌ಗೆ ಲಭ್ಯವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೆ ಅವರು ಶುಕ್ರವಾರ ಅಥವಾ ಶನಿವಾರ ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ” ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ. ಜತೆಗೆ ರೋಹಿತ್ ಕೂಡ ತಾನು ಫಿಟ್ ಇರುವ ಕುರಿತು ಟೀಮ್ ಮ್ಯಾನೇಜ್‌ಮೆಂಟ್‌ಗೆ ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ | IND VS BAN | ಮೊದಲ ಟೆಸ್ಟ್, ಬಾಂಗ್ಲಾದೇಶ 150ಕ್ಕೆ ಆಲೌಟ್; ಭಾರತಕ್ಕೆ 254 ರನ್ ಮುನ್ನಡೆ