ಢಾಕಾ: ಭಾರತ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಬಾಂಗ್ಲಾದೇಶಕ್ಕೆ(IND VS BAN) ಆಘಾತವೊಂದು ಎದುರಾಗಿದೆ. ತಂಡದ ನಾಯಕ ಶಕೀಬ್ ಅಲ್ ಹಸನ್ ಸ್ನಾಯು ಸೆಳೆತದಿಂದ ಆಸ್ಪತ್ರೆಗೆ ದಾಖಲಾಗಿದ್ದು ಬುಧವಾರ(ಡಿಸೆಂಬರ್ 14) ಆರಂಭವಾಗಲಿರುವ ಮೊದಲ ಪಂದ್ಯಕ್ಕೆ ಅನುಮಾನ ಎನ್ನಲಾಗಿದೆ.
ಮಂಗಳವಾರ ಬಾಂಗ್ಲಾದೇಶದ ಆಟಗಾರರು ಅಭ್ಯಾಸಕ್ಕಾಗಿ ಕ್ರೀಡಾಂಗಣಕ್ಕೆ ಆಗಮಿಸಿದ ವೇಳೆ ಶಕೀಬ್ ಅಲ್ ಹಸನ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸಹಾಯಕ ಸಿಬ್ಬಂದಿಯೊಂದಿಗೆ ಆಸ್ಪತ್ರೆಗೆ ತೆರಳಿದರು. ಇದರಿಂದ ಅವರು ಮೊದಲ ಪಂದ್ಯವನ್ನಾಡುವುದು ಬಹುತೇಕ ಕಷ್ಟ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಬಾಂಗ್ಲಾ ಕ್ರಿಕೆಟ್ ಮಂಡಳಿ ಯಾವುದೇ ಅಧಿಕೃತ ನಿರ್ಧಾರ ಪ್ರಕಟಿಸಿಲ್ಲ. ಆದರೆ ತಂಡದ ಮುಖ್ಯ ಕೋಚ್ ರಸೆಲ್ ಡೊಮಿಂಗೊ ಅವರು ಶಕೀಬ್ ಆಡುವ ಬಗ್ಗೆ ಬುಧವಾರ ಪಂದ್ಯ ಆರಂಭಕ್ಕೂ ಮುನ್ನ ತೀರ್ಮಾನಿಸುವುದಾಗಿ ಹೇಳಿದ್ದಾರೆ.
ಗಾಯಾಳು ಶಕೀಬ್ ಅವರನ್ನು ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಿಂದ ಆಸ್ಪತ್ರಗೆ ಸಾಗಿಸಲು ಬೇರೆ ಯಾವುದೇ ವಾಹನ ಲಭ್ಯವಿಲ್ಲದ ಕಾರಣ ಅವರನ್ನು ಆಂಬುಲೆನ್ಸ್‌ನಲ್ಲಿ ಸಾಗಿಸಲಾಗಿದೆ. ಆದರೆ ಅವರ ಗಾಯ ಗಂಭೀರವಾಗಿಲ್ಲ. ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿಯ (ಬಿಸಿಬಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ | IND VS PAK | ಏಷ್ಯಾ ಕಪ್ ಆಡಲು ಪಾಕಿಸ್ತಾನಕ್ಕೆ ಬರುವಂತೆ ಕೊಹ್ಲಿಗೆ ಆಹ್ವಾನ ನೀಡಿದ ಪಾಕ್ ಅಭಿಮಾನಿಗಳು