ಚತ್ತೋಗ್ರಾಮ್: ಭಾರತ ಹಾಗೂ ಬಾಂಗ್ಲಾದೇಶ(IND VS BAN) ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಟೀಮ್ ಇಂಡಿಯಾದ ಬಿಗಿಹಿಡಿತ ಮತ್ತಷ್ಟು ಬಲವಾಗಿದೆ. ಮೂರನೇ ದಿನದಾಟದ ಚಹಾ ವಿರಾಮದ ಬಳಿಕ ಭಾರತ ತಂಡದ ಯುವ ಆಟಗಾರ ಶುಭಮನ್ ಗಿಲ್(110) ಚೊಚ್ಚಲ ಶತಕ ಬಾರಿಸಿ ಮಿಂಚಿದ್ದಾರೆ. ಸದ್ಯ ಭಾರತ ಎರಡನೇ ಇನಿಂಗ್ಸ್‌ನಲ್ಲಿ 2 ವಿಕೆಟ್ ಕಳೆದುಕೊಂಡು 188ರನ್ ಬಾರಿಸಿದ್ದು, ಒಟ್ಟಾರೆ 442 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಮೊದಲ ಇನಿಂಗ್ಸ್‌ನಲ್ಲಿ 254 ರನ್‌ಗಳ ಬೃಹತ್ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಎಚ್ಚರಿಕೆಯ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಕೆ.ಎಲ್ ರಾಹುಲ್ ಹಾಗೂ ಶುಭ್‌ಮನ್ ಗಿಲ್ 70 ರನ್‌ಗಳ ಜತೆಯಾಟ ಒದಗಿಸಿಕೊಟ್ಟರು. ಆದರೆ ನಾಯಕ ಕೆ.ಎಲ್. ರಾಹುಲ್ ಮೊದಲ ಇನಿಂಗ್ಸ್ನಂತೆಯೇ ಇಲ್ಲಿಯೂ ವೈಫಲ್ಯ ಅನುಭವಿಸಿದರು. 63 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 23 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಸದ್ಯ ಚೇತೇಶರ ಪೂಜಾರ(64), ವಿರಾಟ್ ಕೊಹ್ಲಿ(5) ಅಜೇಯ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಇದನ್ನೂ ಓದಿ | IND VS BAN | ಗಾಯದಿಂದ ಚೇತರಿಕೆ; ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ಗೆ ರೋಹಿತ್ ಲಭ್ಯ!