ಢಾಕಾ: ಬಾಂಗ್ಲಾದೇಶ ವಿರುದ್ಧದ ಏಕ ದಿನ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಸೇರಿದಂತೆ ತಂಡದ ಮೂವರು ಆಟಗಾರರು ಗಾಯಗೊಂಡು ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅಂತಿಮ ಏಕ ದಿನ ಪಂದ್ಯಕ್ಕೆ ಬಿಸಿಸಿಐ (BCCI) ಭಾರತ (IND VS BAN) ತಂಡವನ್ನು ಪ್ರಕಟಿಸಿದ್ದು ಸ್ಪಿನ್ನರ್ ಕುಲ್ದೀಪ್ ಯಾದವ್ಗೆ ಅವಕಾಶ ನೀಡಿದೆ. ಜತೆಗೆ ಈ ಪಂದ್ಯದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಹಲವು ಹೊಸ ಮುಖಗಳಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಕಲ್ಪಿಸಲು ಮುಂದಾಗಿದೆ.
ಕುಲ್‌ದೀಪ್ ಯಾದವ್ ಸೇರ್ಪಡೆ
ಚೈನಮನ್ ಖ್ಯಾತಿಯ ರಿಸ್ಟ್ ಸ್ಪಿನ್ನರ್ ಕುಲ್‌ದೀಪ್ ಯಾದವ್ ಸೇರಿ ಇನ್ನು ಮೂವರು ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ. ಅದರಂತೆ ಬ್ಯಾಟಿಂಗ್ ವಿಭಾಗದಲ್ಲಿ ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ ಮೂರನೇ ಏಕದಿನ ಪಂದ್ಯಕ್ಕೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಹಾಗೆಯೇ ಎರಡನೇ ಏಕ ದಿನ ಪಂದ್ಯಕ್ಕೆ ತಂಡದಿಂದ ಕೈಬಿಡಲಾಗಿದ್ದ ಶಹಬಾಜ್ ಅಹ್ಮದ್ ಮತ್ತೆ ತಂಡಕ್ಕೆ ಮರಳಿದ್ದಾರೆ.
ಹೆಬ್ಬೆರಳಿನ ಗಾಯದಿಂದ ಅಂತಿಮ ಪಂದ್ಯದಿಂದ ಹೊರಗುಳಿದ ರೋಹಿತ್ ಮತ್ತು ಕುಲ್ದೀಪ್ ಸೇನ್ ಹೊರತಾಗಿ, ವೇಗದ ಬೌಲರ್ ದೀಪಕ್ ಚಹಾರ್ ಕೂಡ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಸದ್ಯ ಅವರು ಕುಲ್ದೀಪ್ ಸೇನ್ ಜತೆ ಎನ್‌ಸಿಎಗೆ ತೆರಳಲಿದ್ದಾರೆ.
ಮೂರನೇ ಏಕ ದಿನ ಪಂದ್ಯಕ್ಕೆ ಭಾರತ ತಂಡ
ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್
ಇದನ್ನೂ ಓದಿ | IND VS BAN | ಬಾಂಗ್ಲಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡಕ್ಕೆ ಕೆ.ಎಲ್. ರಾಹುಲ್ ನಾಯಕ?