ಚತ್ತೋಗ್ರಾಮ್: ಬಾಂಗ್ಲಾದೇಶ(IND VS BAN) ಎದುರಿನ ಮೂರನೇ ಹಾಗೂ ಕೊನೆಯ ಏಕ ದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಬರೋಬ್ಬರಿ ಮೂರು ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ ಅಭಿಮಾನಿಗಳನ್ನು ರಂಜಿಸಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಧವನ್ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ಇದಾದ ಬಳಿಕ ಇಶಾನ್ ಕಿಶನ್ ಜತೆ ತಂಡಕ್ಕೆ ಆಸರೆಯಾದ ವಿರಾಟ್ ಕೊಹ್ಲಿ(೧೧೩) ಶತಕ ಬಾರಿಸಿ ಮಿಂಚಿದರು.
ವಿರಾಟ್ ಕೊಹ್ಲಿ 2019ರ ಆಗಸ್ಟ್ 14ರಂದು ವೆಸ್ಟ್ ಇಂಡೀಸ್ ವಿರುದ್ದ ಅಜೇಯ 114 ರನ್ ಸಿಡಿಸಿದ್ದರು. ಇದಾದ ಬಳಿಕ ಏಕ ದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶತಕದ ಬರ ಅನುಭವಿಸಿದ್ದರು. ಇದೀಗ ಬಾಂಗ್ಲಾದೇಶ ಎದುರಿನ ಮೂರನೇ ಪಂದ್ಯದಲ್ಲಿ ಕೇವಲ 85 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ೧೧೩ ರನ್ ಗಳಿಸಿದರು.
ಕೊಹ್ಲಿ ಈ ಮೂಲಕ ಏಕ ದಿನ ಕ್ರಿಕೆಟ್‌ನಲ್ಲಿ 44ನೇ ಶತಕ ಸಿಡಿಸಿ ಸಂಭ್ರಮಿಸಿದರು. ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ೭೨ನೇ ಶತಕ ದಾಖಲಿಸಿ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಅವರ (೭೧ನೇ ಶತಕ) ದಾಖಲೆಯನ್ನು ಹಿಂದಿಕ್ಕಿದರು.
ಇದನ್ನೂ ಓದಿ | IND VS BAN | ಬಾಂಗ್ಲಾ ಬೌಲರ್‌ಗಳನ್ನು ಬೆಂಡೆತ್ತಿ ಚೊಚ್ಚಲ ದ್ವಿಶತಕ ಸಿಡಿಸಿದ ಇಶಾನ್ ಕಿಶನ್